ಸಂಗ್ರಹ ಚಿತ್ರ 
ದೇಶ

ಕಾಶ್ಮೀರದಲ್ಲಿ ಹೆಚ್ಚಿದ ಉಗ್ರ ಕೃತ್ಯ: ಪಾಕ್ ರಾಯಭಾರಿಗೆ ಸಮನ್ಸ್ ಜಾರಿ

ಕಾಶ್ಮೀರದಲ್ಲಿ ಉಗ್ರರ ಕೃತ್ಯಗಳು ಹೆಚ್ಚುತ್ತಿರುವುದಕ್ಕೆ ತೀವ್ರವಾಗಿ ಖಂಡನೆ ವ್ಯಕ್ತಪಡಿಸಿರುವ ಭಾರತ ಪಾಕಿಸ್ತಾನ ರಾಯಭಾರಿ ಅಧಿಕಾರಿಗೆ ಬುಧವಾರ ಸಮನ್ಸ್ ಜಾರಿ...

ನವದೆಹಲಿ: ಕಾಶ್ಮೀರದಲ್ಲಿ ಉಗ್ರರ ಕೃತ್ಯಗಳು ಹೆಚ್ಚುತ್ತಿರುವುದಕ್ಕೆ ತೀವ್ರವಾಗಿ ಖಂಡನೆ ವ್ಯಕ್ತಪಡಿಸಿರುವ ಭಾರತ ಪಾಕಿಸ್ತಾನ ರಾಯಭಾರಿ ಅಧಿಕಾರಿಗೆ ಬುಧವಾರ ಸಮನ್ಸ್ ಜಾರಿ ಮಾಡಿದೆ ಎಂದು ತಿಳಿದುಬಂದಿದೆ. 
ಕಳೆದ ತಿಂಗಳಷ್ಟೇ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ದಾಳಿ ನಡೆಸಿದ್ದ ಉಗ್ರರು 8 ಯೋಧರನ್ನು ಬಲಿಪಡೆದುಕೊಂಡಿದ್ದರು. ಉಗ್ರರ ಈ ಕೃತ್ಯಕ್ಕೆ ಪ್ರತಿಭಟನೆ ದಾಖಲಿಸಿರುವ ವಿದೇಶಾಂಗ ಸಚಿವಾಲಯ, ಭಾರತದ ವಿೇಶಾಂಗ ಸಚಿವಾಲಯ ಪಾಕಿಸ್ತಾನದ ಉಪ ಹೈ ಕಮಿಷನರ್ ಸೈಯದ್ ಹೈದರ್ ಶಾಗೆ ಸಮನ್ಸ್ ಜಾರಿ ಮಾಡಿದೆ. 
ಭಾರತ ಗಡಿ ನುಸುಳಿಸಿರುವ ಪಾಕಿಸ್ತಾನದ ಮೂಲಕ ಉಗ್ರ ಸಂಘಟನೆ ಆಗಸ್ಟ್ 26ರಂದು ದಾಳಿ ನಡೆಸಿತ್ತು. ಇದಕ್ಕೆ ಭಾರತ ತೀವ್ರವಾಗಿ ಖಂಡನೆ ವ್ಯಕ್ತಪಡಿಸುತ್ತದೆ ಎಂದು ಸಮನ್ಸ್ ನಲ್ಲಿ ತಿಳಿಸಲಾಗಿದೆ. ಅಲ್ಲದೆ, ಉಗ್ರರ ದಾಳಿ ಕುರಿತಂತೆ ತನಿಖೆ ನಡೆಸುವಂತೆ ಆಗ್ರಹಿಸಲಾಗಿದೆ ಎಂದು ತಿಳಿದುಬಂದಿದೆ.
ಸೇನೆ ನಡೆಸಿದ್ದ ಕಾರ್ಯಾಚರಣೆಯಲ್ಲಿ ಉಗ್ರರು ಹತರಾಗಿದ್ದು, ಉಗ್ರರ ಡಿಎನ್ಎ ಮಾದರಿಗಳನ್ನು ಸಂಗ್ರಹಿಸಡಲಾಗಿದೆ. ಪಾಕಿಸ್ತಾನ ಪ್ರಕರಣದ ತನಿಖೆ ಆರಂಭಿಸಿದ್ದೇ ಆದರೆ, ಡಿಎನ್ಎ ಮಾದರಿಗಳನ್ನು ಹಸ್ತಾಂತರಿಸಲಾಗುತ್ತದೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ. 
ಪುಲ್ವಾಮ ಜಿಲ್ಲೆಯಲ್ಲಿ ನಡೆದಿದ್ದ ಉಗ್ರರ ದಾಳಿ ಸಂಬಂಧ ಈಗಾಗಲೇ ಪಾಕಿಸ್ತಾನ ರಾಯಭಾರಿ ಹೈದರ್ ಶಾ ಅವರಿಗೆ ಸಮನ್ಸ್ ಜಾರಿ ಮಾಡಲಾಗಿದ್ದು, ಪಾಕಿಸ್ತಾನ ಮೂಲದ ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆ ಭಾರತದ ಗಡಿ ನುಸುಳಿಸಿದ್ದಕ್ಕೆ ತೀವ್ರ ಪ್ರತಿಭಟನೆ ದಾಖಲಿಸಲಾಗಿದೆ. ಪಾಕಿಸ್ತಾನ ತನ್ನ ಬದ್ಧತೆಗಳನ್ನು ಅನುಸರಿಸಬೇಕಿದ್ದು, ತನ್ನ ಭೂಮಿಯಲ್ಲಿ ಭಯೋತ್ಪಾದನಾ ಚಟುವಟಿಕೆಗಳನ್ನು ನಡೆಸುತ್ತಿರುವ ಉಗ್ರರು ಭಾರತದ ಗಡಿ ನುಸುಳಿಸಬಾರದು ಹಾಗೂ ಗಡಿ ನುಸುಳುವಿಕೆ ತಡೆಗಟ್ಟಲು ಸೂಕ್ತ ರೀತಿಯ ಕ್ರಮ ಕೈಗೊಳ್ಳುವಂತೆ ಸಮನ್ಸ್ ನಲ್ಲಿ ತಿಳಿಸಲಾಗಿದೆ ಎಂದು ಸಚಿವಾಲಯ ಹೇಳಿಕೊಂಡಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ

ಮತಗಳ್ಳತನವೇ ಆಗಿದ್ದರೆ ಕೇರಳ Congress CM, ತಮಿಳುನಾಡು CM ಕೂಡ ಮತಗಳ್ಳರೇ: ಚೇತನ್ ಅಹಿಂಸಾ

26 ಸೆಕೆಂಡ್ ನಲ್ಲೇ ಗ್ರೇಟ್ ಎಸ್ಕೇಪ್; ಮೃಗಾಲಯ ವೀಕ್ಷಣೆಗೆ ಬಂದ ಜೋಡಿ, ಗಂಡ ಬೈಕ್ ಪಾರ್ಕ್ ಮಾಡೋ ಗ್ಯಾಪಲ್ಲಿ 'ಲವರ್ ಜೊತೆ ಪತ್ನಿ ಪರಾರಿ'! Video ವೈರಲ್!

ಅ.10ರಂದು CJP ಪ್ರತಿಭಟನೆ ಹಿನ್ನೆಲೆ ದೆಹಲಿಗೆ ತೆರಳುವ ಹಲವು ರೈಲುಗಳು ರದ್ದು, ಪ್ರಯಾಣಿಕರಿಗೆ ಸಂಕಷ್ಟ!

ರಾಜಸ್ಥಾನದ ವಿಚಿತ್ರ ಪ್ರಕರಣ: ಮಕ್ಕಳ ಆರೈಕೆ, ಮನೆ ಸ್ವಚ್ಛತೆಗೆ ಕೈದಿಗಳ ಬಳಕೆ; ಕೊನೆಗೆ ಅದೇ ಜೈಲು ಸೇರಿದ ಅಜ್ಮೀರ್ ಮಹಿಳಾ ಜೈಲರ್‌!