ವಿರಾಟ್ ಕೊಹ್ಲಿ 
ದೇಶ

ಟಿ20: ಚೇಸಿಂಗ್‌ನಲ್ಲಿ ಗರಿಷ್ಠ ರನ್ ಸಿಡಿಸಿ ವಿಶ್ವ ದಾಖಲೆ ಬರೆದ ವಿರಾಟ್ ಕೊಹ್ಲಿ

ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಮುಟ್ಟಿದ್ದೇಲ್ಲಾ ದಾಖಲೆಗಳಾಗುತ್ತಿವೆ. ಇದೀಗ ಶ್ರೀಲಂಕಾ ವಿರುದ್ಧದ ಏಕೈಕ ಟಿ20 ಪಂದ್ಯದಲ್ಲಿ 82 ರನ್ ಸಿಡಿಸಿರುವ ಮೂಲಕ ಚೇಸಿಂಗ್ ನಲ್ಲಿ...

ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಮುಟ್ಟಿದ್ದೇಲ್ಲಾ ದಾಖಲೆಗಳಾಗುತ್ತಿವೆ. ಇದೀಗ ಶ್ರೀಲಂಕಾ ವಿರುದ್ಧದ ಏಕೈಕ ಟಿ20 ಪಂದ್ಯದಲ್ಲಿ 82 ರನ್ ಸಿಡಿಸಿರುವ ಮೂಲಕ ಚೇಸಿಂಗ್ ನಲ್ಲಿ 1016 ರನ್ ಗಳ ದಾಖಲೆ ಮಾಡಿದ್ದಾರೆ. 
50 ಟಿ20 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿರುವ ವಿರಾಟ್ ಕೊಹ್ಲಿ ಒಟ್ಟಾರೆ 1830 ರನ್ ಸಿಡಿಸಿದ್ದಾರೆ. ಇದರಲ್ಲಿ 1016 ರನ್ ಗಳು ಚೇಸಿಂಗ್ ವೇಳೆ ಹರಿದು ಬಂದಿದೆ. ಇನ್ನು ಮಾಜಿ ಕ್ರಿಕೆಟಿಗ ಬ್ರೆಂಡಮ್ ಮೆಕಲಮ್ ಅವರು ಚೇಸಿಂಗ್ ನಲ್ಲಿ 1006 ರನ್ ಸಿಡಿಸಿ ಅಗ್ರಸ್ಥಾನದಲ್ಲಿದ್ದರು. ಈ ದಾಖಲೆಯನ್ನು ಕೊಹ್ಲಿ ಅಳಿಸಿ ಹಾಕಿದ್ದಾರೆ.
ಕೊಹ್ಲಿ ಟಿ20ಯಲ್ಲಿ 1830 ರನ್ ಗಳಿಸುವ ಮೂಲಕ ನ್ಯೂಜಿಲೆಂಡ್ ತಂಡದ ಮಾರ್ಟಿನ್ ಗುಪ್ಟಿಲ್ ದಾಖಲೆಯನ್ನು ಸರಿಗಟ್ಟಿದ್ದು ಅಂಕಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೇರಿದ್ದಾರೆ. ಇನ್ನು 60 ರನ್ ಸಿಡಿಸಿದರೇ ಶ್ರೀಲಂಕಾದ ಮಾಜಿ ಆಟಗಾರ ತಿಲಕರತ್ನೆ ದಿಲ್ಶನ್ ದಾಖಲೆಯನ್ನು ಅಳಿಸಿ ಹಾಕಲಿದ್ದಾರೆ. 
ನ್ಯೂಜಿಲೆಂಡ್ ತಂಡದ ಮಾಜಿ ಆಟಗಾರ ಬ್ರೆಂಡಮ್ ಮೆಕುಲಮ್ 71 ಪಂದ್ಯಗಳಲ್ಲಿ 2140 ರನ್ ಸಿಡಿಸುವ ಮೂಲಕ ಅಗ್ರಸ್ಥಾನದಲ್ಲಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!

ಸರ್ಕಾರವನ್ನು ಅಸ್ಥಿರಗೊಳಿಸುವ ಪಿತೂರಿ: 'ಸ್ಟಿಂಗ್ ಆಪರೇಷನ್' ಕುರಿತು ಸಿಎಂ DKS ಎಚ್ಚರಿಕೆ ಕರೆಗೆ ಸಚಿವರಿಂದ ಬೆಂಬಲ

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ಚಿಕ್ಕಣ್ಣ, ಯಶಸ್ ಸೂರ್ಯಗೆ ಬಿಗ್ ಶಾಕ್‌; ಇಬ್ಬರಿಗೂ ಕೋರ್ಟ್ ಸಮನ್ಸ್