ದೇಶ

ಮಂಗಳೂರು ಬೈಕ್ ರ‍್ಯಾಲಿ: ರಾಜ್ಯ ಸರ್ಕಾರದ ವಿರುದ್ಧ ಯಡಿಯೂರಪ್ಪ ವಾಗ್ದಾಳಿ

Srinivas Rao BV
ಮಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಹಮ್ಮಿಕೊಂಡಿದ್ದ ಬೈಕ್ ರ‍್ಯಾಲಿ ಮಂಗಳೂರಿನ ಜ್ಯೋತಿ ಸರ್ಕಲ್ ನಿಂದ ಪ್ರಾರಂಭವಾಗಿದ್ದು, ರ‍್ಯಾಲಿ ಪ್ರಾರಂಭವಾಗುತ್ತಿದ್ದಂತೆಯೇ ಪೊಲೀಸರು ಬಿಜೆಪಿ ನಾಯಕರನ್ನು ವಶಕ್ಕೆ ಪಡೆದಿದ್ದಾರೆ. 
ಇದಕ್ಕೂ ಮುನ್ನ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ್ದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ರಾಜ್ಯ ಸರ್ಕಾರ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುತ್ತಿಲ್ಲ. ಸಿಎಂ ಸಿದ್ದರಾಮಯ್ಯ ಅವರ ಕೊಲೆಗಡುಕ ಸರ್ಕಾರಕ್ಕೆ ಧಿಕ್ಕಾರ ಎಂದು ಯಡಿಯೂರಪ್ಪ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. 
ಈ ವರೆಗೂ ಶಾಂತಿಗೆ ಹೆಸರಾಗಿದ್ದ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಶಾಂತಿ ಸೃಷ್ಟಿಸಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ತೊಲಗಲಿ ಎಂದು ಯಡಿಯೂರಪ್ಪ ಹೇಳಿದ್ದಾರೆ. 
SCROLL FOR NEXT