ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್
ನವದೆಹಲಿ: ದೇಶದ ಮೊತ್ತ ಮೊದಲ ಪೂರ್ಣಾವಧಿ ರಕ್ಷಣಾ ಸಚಿವೆಯಾಗಿ ನಿರ್ಮಲಾ ಸೀತಾರಾಮನ್ ಅವರು ಗುರುವಾರ ಅಧಿಕಾರ ಸ್ವೀಕಾರ ಮಾಡಿದ್ದಾರೆ.
ಈ ಮೂಲಕ ಇಂದಿರಾ ಗಾಂಧಿ ಬಳಿಕ ರಕ್ಷಣಾ ಸಚಿವೆಯಾದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ನಿರ್ಮಲಾ ಸೀತಾರಾಮನ್ ಅವರು ಪಾತ್ರರಾಗಿದ್ದಾರೆ.
ಗೋವಾ ರಾಜ್ಯ ಮುಖ್ಯಮಂತ್ರಿಯಾದ ಬಳಿಕ ಮನೋಹರಿ ಪರಿಕ್ಕರ್ ಅವರು ರಕ್ಷಣಾ ಸಚಿವ ಸ್ಥಾನಕ್ಕೆ ರಾಜೀನಾಮೆಯನ್ನು ನೀಡಿದ್ದರು. ಬಳಿಕ ಅರುಣ್ ಜೇಟ್ಲಿಯವರಿಗೆ ರಕ್ಷಣಾ ಖಾತೆ ಹೆಚ್ಚುವರಿ ಹೊಣೆಯನ್ನು ವಹಿಸಲಾಗಿತ್ತು.
3 ದಶಕಗಳ ಹಿಂದೆ ಇಂದಿರಾಗಾಂಧಿ ಪ್ರಧಾನಮಂತ್ರಿ ಹುದ್ದೆಯೊಂದಿಗೆ ರಕ್ಷಣಾ ಇಲಾಖೆಯ ಜವಾಬ್ದಾರಿಯನ್ನೂ ಹೊಂದಿದ್ದರು. ಇದೀಗ ನಿರ್ಮಲಾ ಸೀತಾರಾಮನ್ ಅವರು ಪೂರ್ಣಾವಧಿ ರಕ್ಷಣಾ ಸಚಿವರಾಗಿ ಅಧಿಕಾರ ಸ್ವೀಕಾರ ಮಾಡಿದ್ದಾರೆ.
ನಿರ್ಮಲಾ ಸೀತಾರಾಮನ್ ಅವರು ಅಧಿಕಾರ ಸ್ವೀಕಾರ ಮಾಡುವ ಸಂದರ್ಭದಲ್ಲಿ ಸಚಿವ ಅರುಣ್ ಜೇಟ್ಲಿ ಸೇರಿದಂತೆ ಮತ್ತಿತರ ನಾಯಕರು ಉಪಸ್ಥಿತರಿದ್ದರು.
ಆಧಿಕಾರ ಸ್ವೀಕಾರದ ಸಂದರ್ಭದಲ್ಲಿ ಸೀತಾರಾಮನ್ ಅವರು, ಶಸ್ತ್ರಾಸ್ತ್ರ ಪಡೆಗಳ ಉನ್ನತಿಗಾಗಿ ಕಾರ್ಯನಿರ್ವಹಿಸುವುದಾಗಿ ಭರವಸೆಯನ್ನು ನೀಡಿದರು.
ಇದೇ ವೇಳೆ ತಮ್ಮ ಮೇಲೆ ವಿಶ್ವಾಸವಿಟ್ಟು ದೇಶದ ಮಹತ್ವದ ಸಚಿವಾಲಯಗಳಲ್ಲಿ ಒಂದಾಗಿರುವ ರಕ್ಷಣಾ ಇಲಾಖೆಯ ಜಬಾಬ್ದಾರಿಯನ್ನು ತಮಗೆ ನೀಡಿದ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಧನ್ಯವಾದಗಳನ್ನು ಅರ್ಪಿಸಿದ್ದಾರೆ.
ಕಳೆದ ಭಾನುವಾರವಾರ ಸಂಪುಟ ಪುನಾರಚನೆ ಮಾಡಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಹತ್ವದ ರಕ್ಷಣಾ ಖಾತೆಯ ಹೊಣೆಯನ್ನು ನಿರ್ಮಲಾ ಸೀತಾರಾಮನ್ ಅವರಿಗೆ ನೀಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics