ಸುಪ್ರೀಂ ಕೋರ್ಟ್ 
ದೇಶ

ರಾಜಕಾರಣಿಗಳ ಆಸ್ತಿ ಪ್ರಮಾಣದಲ್ಲಿ ಅಚ್ಚರಿಯ ಏರಿಕೆ: ಕೇಂದ್ರದಿಂದ ವರದಿ ಕೇಳಿದ ಸುಪ್ರೀಂ

ಸಂಸದರು, ಶಾಸಕರ ಆಸ್ತಿ ಪ್ರಮಾಣ ಅಚ್ಚರಿಯ ರೀತಿಯಲ್ಲಿ ಏರಿಕೆಯಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋರ್ಟ್, ಈ ಸಂಬಂಧ ಕೇಂದ್ರ ಸರ್ಕಾರ ಕ್ರಮಗಳ ಬಗ್ಗೆ ವಿವರಣೆ ನೀಡಿ ವಿಸ್ತೃತ..

ನವದೆಹಲಿ: ಸಂಸದರು, ಶಾಸಕರ ಆಸ್ತಿ ಪ್ರಮಾಣ ಅಚ್ಚರಿಯ ರೀತಿಯಲ್ಲಿ ಏರಿಕೆಯಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋರ್ಟ್, ಈ ಸಂಬಂಧ ಕೇಂದ್ರ ಸರ್ಕಾರ ಕ್ರಮಗಳ ಬಗ್ಗೆ ವಿವರಣೆ ನೀಡಿ ವಿಸ್ತೃತ ವರದಿ ಸಲ್ಲಿಸುವಂತೆ ಕೇಂದ್ರ ಸರ್ಕಾರವನ್ನು ಕೇಳಿದೆ. 
ಅಕ್ರಮವಾಗಿ ಸಂಪತ್ತು ಗಳಿಸಿರುವುದಕ್ಕಾಗಿ ಈಗಾಗಲೇ 289 ಜನಪ್ರತಿನಿಧಿಗಳು, ಕೆಲವು ಪ್ರಸಿದ್ಧ ರಾಜಕಾರಣಿಗಳ ಮೇಲೆ ನ್ಯಾಯಾಂಗ ಕಣ್ಣಿಟ್ಟಿದ್ದು, ಈ ಸಂಬಂಧ ಮಾಹಿತಿ ಹಂಚಿಕೊಳ್ಳುವುದಕ್ಕೆ ಕೇಂದ್ರ ಸರ್ಕಾರ ಆಸಕ್ತಿ ತೋರುತ್ತಿಲ್ಲ ಎಂದು ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದ್ದು, ಒಂದು ವಾರದಲ್ಲಿ ಅಕ್ರಮ ಆಸ್ತಿ ಹೊಂದಿರುವ ಜನಪ್ರತಿನಿಧಿಗಳ ಬಗ್ಗೆ ಮಾಹಿತಿ ಇರುವ ವರದಿಯನ್ನು ಸಲ್ಲಿಸುವಂತೆ ನ್ಯಾ.ಚೆಲಮೇಶ್ವರ್, ಎಸ್ ಅಬ್ದುಲ್ ನಜೀರ್ ಅವರಿದ್ದ ವಿಭಾಗೀಯ ಪೀಠ ಸೂಚನೆ ನೀಡಿದೆ
ಅಸೋಸಿಯೇಷನ್ ಫಾರ್ ಡೆಮಾಕ್ರೆಟಿಕ್ ರಿಫಾರ್ಮ್ಸ್(ಎಡಿಆರ್) ವರದಿಯನ್ನಾಧರಿಸಿ ಸುಪ್ರೀಂ ಕೋರ್ಟ್ ಈ ಸೂಚನೆ ನೀಡಿದೆ. ಎಡಿಆರ್ ಪ್ರಕಾರ 2016ನೇ ಆರ್ಥಿಕ ವರ್ಷದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ನ ಆದಾಯದ ಶೇ.77 ರಷ್ಟು ಭಾಗ ಬಂದಿರುವುದು ಅಜ್ಞಾತ ಮೂಲಗಳಿಂದ ಎಂಬ ಮಾಹಿತಿ ವರದಿಯ ಮೂಲಕ ತಿಳಿದುಬಂದಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

‘ಕಾನೂನು ಸುವ್ಯವಸ್ಥೆಗೆ ಗಂಭೀರ ಅಪಾಯವಿದೆ’: ಸಿಜೆಪಿ ಪ್ರತಿಭಟನೆಗೆ ಕೆಲವೇ ಗಂಟೆ ಮೊದಲು ರಾಜ್ಯಗಳಿಗೆ ಪತ್ರ ಬರೆದು MHA ಹೇಳಿದ್ದೇನು?

ನವೆಂಬರ್‌ನಲ್ಲಿ ಕರ್ನಾಟಕ ಬಿಜೆಪಿಗೆ ಮೇಜರ್ ಸರ್ಜರಿ: ಬಿವೈ ವಿಜಯೇಂದ್ರ, ಆರ್ ಅಶೋಕಗೆ ಗೇಟ್ ಪಾಸ್?; ಹೊಸ ಮುಖಗಳಿಗೆ ಮಣೆ!

ಬಾಕಿ ಸಾಲ ವಸೂಲಿಗೆ 'ಗೃಹಲಕ್ಷ್ಮಿ' ಯೋಜನೆಯ ಹಣ ಕಡಿತಗೊಳಿಸದಂತೆ ಬ್ಯಾಂಕುಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಸರ್ಕಾರ!

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ನಿರಾಳ; ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸುವ ನಿರ್ಧಾರ ರದ್ದು!