ಬಿಜೆಪಿ ಮತ್ತು ಮೋದಿ ಸಮಾಜ ಒಡೆಯುವುದರಲ್ಲಿ ಬ್ಯುಸಿಯಾಗಿದ್ದಾರೆ: ರಾಹುಲ್ ಗಾಂಧಿ
ಅಧಿಕಾರ ಉಳಿಸಿಕೊಳ್ಳುವುದಕ್ಕಾಗಿ ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಸಮಾಜ ಒಡೆಯುವ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ....
ನಾಂದೇಡ್: ಅಧಿಕಾರ ಉಳಿಸಿಕೊಳ್ಳುವುದಕ್ಕಾಗಿ ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಸಮಾಜ ಒಡೆಯುವ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಶುಕ್ರವಾರ ಆರೋಪಿಸಿದ್ದಾರೆ.
ಇಂದು ಪಕ್ಷದ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಕಾಂಗ್ರೆಸ್ ನಿಂದ ಮಾತ್ರ ಬಿಜೆಪಿ ಮತ್ತು ಆರ್ಎಸ್ಎಸ್ ಎದುರಿಸಲು ಸಾಧ್ಯ ಎಂದು ಹೇಳಿದ್ದಾರೆ.
ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರ ನೋಟ್ ನಿಷೇಧದ ವಿರುದ್ಧವೂ ವಾಗ್ದಾಳಿ ನಡೆಸಿದ ರಾಹುಲ್, ಅದು ಕೇಂದ್ರ ಸರ್ಕಾರದ ದೊಡ್ಡ ವೈಫಲ್ಯ ಎಂದಿದ್ದಾರೆ.
'ಮೊದಲ ಭಯೋತ್ಪಾದನೆಗೆ ಕಡಿವಾಣ ಹಾಕಲು ನೋಟ್ ನಿಷೇಧಿಸಿರುವುದಾಗಿ ಅವರು ಹೇಳಿದ್ದರು. ಆದರೆ ನಂತರ ಕಪ್ಪು ಹಣಕ್ಕೆ ಕಡಿವಾಣ ಹಾಕಲು ಎಂದರು. ಆದರೆ ರಿಯಲ್ ಎಸ್ಟೇಟ್ ಮತ್ತು ಬಂಗಾರದ ಮೇಲೆ ಕಪ್ಪು ಹಣ ಹೂಡಿಕೆ ಮಾಡಲಾಗುತ್ತಿದೆ ಎಂಬುದು ದೇಶದ ಪ್ರತಿಯೊಬ್ಬರಿಗೂ ಗೊತ್ತು' ಎಂದು ರಾಹುಲ್ ಹೇಳಿದ್ದಾರೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.