ಜಮ್ಮು: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಪಾಕಿಸ್ತಾನ ಸೇನೆ ನಡೆಸಿದ ಅಪ್ರಚೋದಿತ ಗುಂಡಿನ ದಾಳಿಗೆ ಇಬ್ಬರು ಭಾರತೀಯ ಯೋಧರು ಗಾಯಗೊಂಡಿದ್ದಾರೆಂದು ಶುಕ್ರವಾರ ತಿಳಿದುಬಂದಿದೆ.
ಕಳೆದ ರಾತ್ರಿ ಪಾಕಿಸ್ತಾನ ಸೇನೆ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಸಣ್ಣ ಹಾಗೂ ಸ್ವಯಂ ಚಾಲಿತ ಶಸ್ತ್ರಾಸ್ತ್ರಗಳಿಂದ ಭಾರತೀಯ ಸೇನೆಯನ್ನು ಗುರಿಯಾಗಿರಿಸಿಕೊಂಡು ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ ಎಂದು ಸೇನಾ ಹಿರಿಯ ಅಧಿಕಾರಿ ಹೇಳಿದ್ದಾರೆ.
ಪಾಕಿಸ್ತಾನ ಸೇನೆಯ ಅಪ್ರಚೋದಿತ ಗುಂಡಿನ ದಾಳಿಗೆ ಇಬ್ಬರೂ ಭಾರತೀಯ ಯೋಧರಿಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇದೀಗ ಯೋಧರು ಚೇತರಿಸಿಕೊಳ್ಳುತ್ತಿದ್ದಾರೆಂದು ತಿಳಿಸಿದ್ದಾರೆ.
ಪಾಕಿಸ್ತಾನ ಸೇನೆಯ ಅಪ್ರಚೋದಿತ ಗುಂಡಿನ ದಾಳಿಗೆ ಭಾರತೀಯ ಸೇನೆ ದಿಟ್ಟ ಉತ್ತರವನ್ನು ನೀಡಿದ್ದು, ಪ್ರಸ್ತುತ ಗಡಿಯಲ್ಲಿ ಗುಂಡಿನ ಚಕಮಕಿ ನಿಂತಿದೆ ಎಂದಿದ್ದಾರೆ.