ಗುರುಗ್ರಾಮ: ಗುರುಗ್ರಾಮದ ಸೋಹ್ನಾ ಪ್ರದೇಶದಲ್ಲಿರುವ ರಿಯಾನ್ ಇಂಟರ್ ನ್ಯಾಷನಲ್ ಶಾಲೆಯ 2ನೇ ತರಗತಿಯ ವಿದ್ಯಾರ್ಥಿಯ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗಾರ್ಡನರ್, ಕಂಡಕ್ಟರ್ ಹಾಗೂ ಚಾಲಕ ಸೇರಿದಂತೆ 10 ಮಂದಿಯನ್ನು ಹರಿಯಾಣ ಪೊಲೀಸರು ಬಂಧಿಸಿದ್ದಾರೆ.
ಇಂದು ಬೆಳಗ್ಗೆ 8.30ರ ಸುಮಾರಿಗೆ ಪ್ರಧುಮಾನ್ ಥಾಕೂರ್(7 ವರ್ಷ) ಎಂಬ ವಿದ್ಯಾರ್ಥಿ ಶವ ಕತ್ತು ಸೀಳಿದ ಸ್ಥಿತಿಯಲ್ಲಿ ಶಾಲೆಯ ಶೌಚಾಲಯದಲ್ಲಿ ಪತ್ತೆಯಾಗಿತ್ತು. ಈ ಸಂಬಂಧ ನಾವು 10 ಮಂದಿಯನ್ನು ಬಂಧಿಸಿದ್ದು, ಇಂದು ಬೆಳಗ್ಗೆಯಿಂದ ಅವರ ವಿಚಾರಣೆ ನಡೆಸಲಾಗುತ್ತಿದೆ ಎಂದು ಅಪರಾಧ ವಿಭಾಗದ ಡಿಸಿಪಿ ಸುಮೀತ್ ಕೌರ್ ಅವರು ತಿಳಿಸಿದ್ದಾರೆ.
ಪೊಲೀಸರ ತಂಡ ಮತ್ತು ವಿಧಿ ವಿಜ್ಞಾನ ತಜ್ಞರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸ್ಥಳದಲ್ಲಿದ್ದ ಒಂದು ಚಾಕುವನ್ನು ವಶಕ್ಕೆ ಪಡೆದಿದ್ದಾರೆ. ಪ್ರಕರಣದ ತನಿಖೆ ನಡೆಯುತ್ತಿದೆ ಎಂದು ಗುರುಗ್ರಾಮ ಪೊಲೀಸ್ ಪಿಆರ್ಒ ರವೀಂದ್ರ ಕುಮಾರ್ ಅವರು ತಿಳಿಸಿದ್ದಾರೆ.