ಮುಂದಿನ ವಾರ ಭಾರತಕ್ಕೆ ಭೇಟಿ ನೀಡಲಿರುವ ಅಫ್ಘಾನಿಸ್ತಾನ ವಿದೇಶಾಂಗ ಸಚಿವ
ಅಫ್ಘನಿಸ್ತಾನ ವಿದೇಶಾಂಗ ಸಚಿವ ಸಲಾಹುದ್ದೀನ್ ರಬ್ಬಾನಿ ಮುಂದಿನ ವಾರ ಭಾರತಕ್ಕೆ ಭೇಟಿ ನೀಡಲಿದ್ದು, ಪ್ರಧಾನಿ ನರೇಂದ್ರ ಮೋದಿ, ಸುಷ್ಮಾ ಸ್ವರಾಜ್ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ.
ನವದೆಹಲಿ: ಅಫ್ಘನಿಸ್ತಾನ ವಿದೇಶಾಂಗ ಸಚಿವ ಸಲಾಹುದ್ದೀನ್ ರಬ್ಬಾನಿ ಮುಂದಿನ ವಾರ ಭಾರತಕ್ಕೆ ಭೇಟಿ ನೀಡಲಿದ್ದು, ಪ್ರಧಾನಿ ನರೇಂದ್ರ ಮೋದಿ, ಸುಷ್ಮಾ ಸ್ವರಾಜ್ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ.
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಫ್ಘಾನಿಸ್ತಾನಕ್ಕೆ ಸಂಬಂಧಿಸಿದ ಹೊಸ ನೀತಿಯನ್ನು ಬಿಡುಗಡೆ ಮಾಡಿರುವ ಬೆನ್ನಲ್ಲೇ ಅಫ್ಘಾನಿಸ್ತಾನ ವಿದೇಶಾಂಗ ಸಚಿವರು ಭಾರತಕ್ಕೆ ಭೇಟಿ ನೀಡುತ್ತಿರುವುದು ಮಹತ್ವ ಪಡೆದುಕೊಂಡಿದೆ.
ಅಫ್ಘಾನಿಸ್ತಾನಕ್ಕೆ ಸಂಬಂಧಿಸಿದಂತೆ ನೂತನ ನೀತಿಯನ್ನು ಪ್ರಕಟಿಸಿದ್ದ ಡೊನಾಲ್ಡ್ ಟ್ರಂಪ್, ಭಾರತದ ಸಹಾಯ ಅಗತ್ಯವೆಂದು ಹೇಳಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.