ಡೇರಾ ಆಶ್ರಮದಲ್ಲಿ ಸ್ಫೋಟಕ ಕಾರ್ಖಾನೆ ಪತ್ತೆ, ಮುಂದುವರೆದ ಶೋಧ ಕಾರ್ಯಾಚರಣೆ 
ದೇಶ

ಡೇರಾ ಆಶ್ರಮದಲ್ಲಿ ಸ್ಫೋಟಕ ಕಾರ್ಖಾನೆ ಪತ್ತೆ, ಮುಂದುವರೆದ ಶೋಧ ಕಾರ್ಯಾಚರಣೆ

ಸ್ವಯಂ ಘೋಷಿತ ದೇವಮಾನವ ಗುರ್ಮಿತ್ ರಾಮ್ ರಹೀಮ್ ಸಿಂಗ್ ನ ಡೇರಾ ಸಚ್ಛಾ ಸೌಧ ಆಶ್ರಮದಲ್ಲಿ ಮೇಲೆ ನಡೆಸಲಾಗುತ್ತಿರುವ ದಾಳಿ ಎರಡೇ ದಿನಕ್ಕೆ ಕಾಲಿಟ್ಟಿದ್ದು, ಶನಿವಾರ ನಡೆಸಲಾಗಿರುವ ದಾಳಿಯಲ್ಲಿ ಆಶ್ರಮದೊಳಗೆ...

ಸಿರ್ಸಾ: ಸ್ವಯಂ ಘೋಷಿತ ದೇವಮಾನವ ಗುರ್ಮಿತ್ ರಾಮ್ ರಹೀಮ್ ಸಿಂಗ್ ನ ಡೇರಾ ಸಚ್ಛಾ ಸೌಧ ಆಶ್ರಮದಲ್ಲಿ ಮೇಲೆ ನಡೆಸಲಾಗುತ್ತಿರುವ ದಾಳಿ ಎರಡೇ ದಿನಕ್ಕೆ ಕಾಲಿಟ್ಟಿದ್ದು, ಶನಿವಾರ ನಡೆಸಲಾಗಿರುವ ದಾಳಿಯಲ್ಲಿ ಆಶ್ರಮದೊಳಗೆ ಅಕ್ರಮ ಸ್ಫೋಟಕ ಕಾರ್ಖಾನೆಯ ಪತ್ತೆಯಾಗಿದೆ ಎಂದು ತಿಳಿದುಬಂದಿದೆ. 

ನಿನ್ನೆ ಆಶ್ರಮದಲ್ಲಿ ಶೋಧ ಕಾರ್ಯಾಚರಣೆ ನಡೆಸಿದ್ದ ಅಧಿಕಾರಿಗಳು, ಕಾರು, ನಿಷೇಧಿತ ನೋಟುಗಳು, ಪ್ಲಾಸ್ಟಿಕ್ ಕರೆನ್ಸಿ, ಕಂಪ್ಯೂಟರ್ ಗಳು, ಹಾರ್ಡ್ ಡಿಸ್ಕ್ ಗಳನ್ನು ವಶಕ್ಕೆ ಪಡೆದುಕೊಂಡಿದ್ದರು. ಅಲ್ಲದೆ, ಅಪ್ರಾಪ್ತ ಮಕ್ಕಳನ್ನು ರಕ್ಷಣೆ ಮಾಡಲಾಗಿತ್ತು. 

ಇದರಂತೆ ಇಂದೂ ಕೂಡ ಅಧಿಕಾರಿಗಳು ಶೋಧ ಕಾರ್ಯಾಚರಣೆ ನಡೆಸುತ್ತಿದ್ದ ಸಂದರ್ಭದಲ್ಲಿ ಡೇರಾ ಪ್ರಾಂಗಣದಲ್ಲಿ ಅಕ್ರಮವಾಗಿ ಸ್ಫೋಟ ಸಾಮಾಗ್ರಿಗಳನ್ನು ತಯಾರು ಮಾಡುವ ಕಾರ್ಖಾನೆ ಕಂಡು ಬಂದಿದೆ. 

ಈ ವೇಳೆ ಸ್ಥಳದಲ್ಲಿದ್ದ ಸ್ಫೋಟಕ ಸಾಮಾಗ್ರಿಗಳನ್ನು ವಶಪಡಿಸಿಕೊಂಡಿರುವ ಅಧಿಕಾರಿಗಳು ಕಾರ್ಖಾನೆಯನ್ನು ಜಪ್ತಿ ಮಾಡಿದ್ದಾರೆ. ಡೇರಾ ಸಂಕೀರ್ಣದಿಂದ ಪೊಲೀಸರು ಸ್ಫೋಟಕ ತುಂಬಿರುವ ಸುಮಾರು 100ಕ್ಕೂಹೆಚ್ಚು ಪೆಟ್ಟಿಗೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಸ್ಥಳಕ್ಕೆ ಆಗಮಿಸಿರುವ ವಿಧಿವಿಜ್ಞಾನ ತಂಡದವರು ಸ್ಫೋಟಕ ವಸ್ತುಗಳ ನಮೂನೆಗಳನ್ನು ಪರೀಕ್ಷೆ ನಡೆಸುತ್ತಿದ್ದಾರೆ.

ಅತ್ಯಾಚಾರ ಪ್ರಕರಣದಲ್ಲಿ ದೋಷಿಯೆಂದು ಸಾಬೀತಾದ ಬಳಿಕ ಸ್ವಯಂ ಘೋಷಿತ ದೇವಮಾನವ ಗುರ್ಮಿತ ರಾಮ್ ರಹೀಮ್ ಸಿಂಗ್ ಗೆ 20 ವರ್ಷಗಳ ಜೈಲು ಶಿಕ್ಷೆ ವಿಧಿಸಿದ ಪಂಚಕುಲ ಸಿಬಿಐ ನ್ಯಾಯಾಲಯ ಸಿರ್ಸಾದ ಡೇರಾ ಆಶ್ರಮದಲ್ಲಿ ಶೋಧ ಕಾರ್ಯಾಚರಣೆ ನಡೆಸುವಂತೆ ಆದೇಶಿಸಿತ್ತು. ಈ ಹಿನ್ನಲೆಯಲ್ಲಿ ಅಧಿಕಾರಿಗಳು ಶೋಧ ಕಾರ್ಯಾಚರಣೆಗಳನ್ನು ನಡೆಸುತ್ತಿದ್ದಾರೆ. 

ತನಿಖೆ ಹಿನ್ನಲೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಆಶ್ರಮದ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ, ಅಲ್ಲದೆ, ಇಂಟರ್ನೆಟ್ ಸೇವೆಗಳನ್ನೂ ಸ್ಥಗಿತಗೊಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್