ಶ್ರೀನಗರ: ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಜಮ್ಮು-ಕಾಶ್ಮೀರಕ್ಕೆ ಭೇಟಿ ನೀಡಿದ್ದು, ಜಮ್ಮು-ಕಾಶ್ಮೀರ ಮಾಜಿ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ರಾಜನಾಥ್ ಸಿಂಗ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಸ್ವಾತಂತ್ರ್ಯ ದಿನಾಚರಣೆಯ ದಿನದಂದು ನೀಡಿದ್ದರ ಭರವಸೆಯನ್ನು ನೆನಪಿಸಿದ್ದಾರೆ.
ರಾಜನಾಥ್ ಸಿಂಗ್ ಭೇಟಿ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಓಮರ್ ಅಬ್ದುಲ್ಲಾ, ಪ್ರಧಾನಿ ನರೇಂದ್ರ ಮೋದಿ ಸ್ವಾತಂತ್ರ್ಯ ದಿನಾಚರಣೆಯಂದು ಹೇಳಿದ್ದ ಮಾತುಗಳನ್ನು ನೆನಪಿಸಿದ್ದಾರೆ. "ಗುಂಡಿನಿಂದ ಕಾಶ್ಮೀರ ಸಮಸ್ಯೆಯನ್ನು ಬಗೆಹರಿಸುವುದು ಅಸಾಧ್ಯ" ಎಂದು ಮೋದಿ ಹೇಳಿದ್ದರು. ಈಗ ಇದೇ ಮಾತುಗಳನ್ನು ನೆನಪಿಸಿರುವ ಓಮರ್ ಅಬ್ದುಲ್ಲಾ, ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದ ಮಾತು ಕೃತಿಯಲ್ಲಿ ಜಾರಿಯಾಗಬೇಕೆಂದು ಬಯಸುತ್ತಿದ್ದೇವೆ ಎಂದು ಹೇಳಿದ್ದಾರೆ.
ನಾಲ್ಕು ದಿನಗಳ ಜಮ್ಮು-ಕಾಶ್ಮೀರ ಪ್ರವಾಸ ಕೈಗೊಂಡಿರುವ ರಾಜನಾಥ್ ಸಿಂಗ್ ಜಮ್ಮು-ಕಾಶ್ಮೀರ ಸಿಎಂ ಮೆಹಬೂಬಾ ಮುಫ್ತಿ, ಎನ್ಎನ್ ವೋಹ್ರಾ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ.