ಕುಸಿದ ಮೇಲ್ಸೇತುವೆ 
ದೇಶ

ಭುವನೇಶ್ವರ: ನಿರ್ಮಾಣ ಹಂತದ ಮೇಲ್ಸೇತುವೆ ಕುಸಿತ, ಕನಿಷ್ಟ 2 ಸಾವು, 10 ಮಂದಿಗೆ ಗಾಯ

ಒಡಿಶಾದ ಭುವನೇಶ್ವರದಲ್ಲಿ ನಿರ್ಮಾಣ ಹಂತದ ಮೇಲ್ಸೇತುವೆ ಕುಸಿದ ಪರಿಣಾಮ ಕನಿಷ್ಟ ಇಬ್ಬರು ಸಾವನ್ನಪ್ಪಿದ್ದು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಭುವನೇಶ್ವರ: ಒಡಿಶಾದ ಭುವನೇಶ್ವರದಲ್ಲಿ ನಿರ್ಮಾಣ ಹಂತದ ಮೇಲ್ಸೇತುವೆ ಕುಸಿದ ಪರಿಣಾಮ ಕನಿಷ್ಟ ಇಬ್ಬರು ಸಾವನ್ನಪ್ಪಿದ್ದು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಭುವನೇಶ್ವರದ ಬೊಮಿಖಲ್ ಪ್ರದೇಶದಲ್ಲಿ ನಿರ್ಮಾಣ ಹಂತದ ಮೇಲ್ಸೇತುವೆ ಕುಸಿದಿದ್ದು, ಘಟನೆಯಲ್ಲಿ ಕನಿಷ್ಛ ಇಬ್ಬರು ಸಾವನ್ನಪ್ಪಿದ್ದಾರೆ. ಇಂದು ಮಧ್ಯಾಹ್ನ 12.25ರ ವೇಳೆಯಲ್ಲಿ ಈ ಅವಘಡ ಸಂಭವಿಸಿದ್ದು, ಮೇಲ್ಸೇತುವೆಯ ಒಂದು  ಭಾಗ ಕುಸಿದ ಪರಿಣಾಮ ಅದರ ಕೆಳಗಿದ್ದ ಸುಮಾರು 20ಕ್ಕೂ ಅಧಿಕ ಮಂದಿ ಅವಶೇಷಗಳಡಿಯಲ್ಲಿ ಸಿಲುಕಿದ್ದಾರೆ.
ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀರು ದೌಡಾಯಿಸಿದ್ದು, ಅವಶೇಷ ತೆರವು ಕಾರ್ಯಾಚರಣೆ ಭರದಿಂದ ಸಾಗಿದೆ. ಅಂತೆಯೇ ಗಾಯಾಳುಗಳನ್ನು ಸಮೀಪದ ಏಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನು  ಇಬ್ಬರು ಮೃತರ ಪೈಕಿ ಓರ್ವ ವ್ಯಕ್ತಿಯ ಗುರುತು ಪತ್ತೆಯಾಗಿದ್ದು, ಸತ್ಯಾ ಪಟ್ನಾಯಕ್ ಎಂಬ ವ್ಯಕ್ತಿ ಸಾವನ್ನಪ್ಪಿದ್ದಾರೆ. ಅಂತೆಯೇ ಆತನ ಪುತ್ರಿ ಶೀಥಲ್ ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತರ ಕುಟುಂಬಕ್ಕೆ ಪರಿಹಾರ ಘೋಷಣೆ
ಇದೇ ವೇಳೆ ದುರ್ಘಟನೆಯಲ್ಲಿ ಸಾವನ್ನಪ್ಪಿದವರ ಕುಟುಂಬಕ್ಕೆ ಒಡಿಶಾ ಸಿಎಂ ನವೀನ್ ಪಟ್ನಾಯಕ್ ಅವರು ಪರಿಹಾರ ಘೋಷಣೆ ಮಾಡಿದ್ದು, ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ನೀಡುವುದಾಗಿ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿ SIR: ವಿದೇಶಾಂಗ ಸಚಿವ ಜೈಶಂಕರ್, ಎಲ್.ಕೆ ಅಡ್ವಾಣಿ ಸೇರಿದಂತೆ ಹಲವು ಮತದಾರರಿಗೆ ನೋಟಿಸ್; CEO ಕೊಟ್ಟ ಸ್ಪಷ್ಟನೆ ಏನು?

ಇದು ಎಂತಹ ವಿಶೇಷ ತೀವ್ರ ಪರಿಷ್ಕರಣೆ? ಅರ್ಹರನ್ನು ಕಿತ್ತುಹಾಕಿ, ಅನರ್ಹರನ್ನು ಸೇರಿಸುವುದೇ SIR: ಕಪಿಲ್ ಸಿಬಲ್ ಕಿಡಿ!

ಟಾಟಾ ಸನ್ಸ್ ಅಧ್ಯಕ್ಷರಾಗಿ ಎನ್ ಚಂದ್ರಶೇಖರನ್ ಮರುನೇಮಕ ಪ್ರಶ್ನಿಸಿದ ಟಾಟಾ ಟ್ರಸ್ಟ್ಸ್!

ಸಿಎಂ ಡಿಕೆ ಶಿವಕುಮಾರ್‌ ನೂರು ದಿನಗಳ ಆಡಳಿತಕ್ಕೆ ಬಿಜೆಪಿ ನಾಯಕ ಫಿದಾ! ಏನಂದ್ರು ಗೊತ್ತಾ?

ಅಂತಹ ಮನಸ್ಥಿತಿ ಇದ್ದಾಗ ಮೊದಲೇ ಅದರಿಂದ ದೂರ ಇರಬೇಕಿತ್ತು: ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಮಹದೇವಪ್ಪ ಟಾಂಗ್!