ಸಂಗ್ರಹ ಚಿತ್ರ 
ದೇಶ

ಸಿಎಂ ಪಳನಿಸ್ವಾಮಿಗೆ ಬಹುಮತ ಸಾಬೀತಿಗೆ ಸೂಚಿಸದಿದ್ದರೆ, ರಾಜ್ಯಪಾಲರ ವಿರುದ್ಧವೇ ಕಾನೂನು ಸಮರ: ಎಂಕೆ ಸ್ಟಾಲಿನ್

ಎಐಎಡಿಎಂಕೆ ಪಕ್ಷದ ಸಿಎಂ ಪಳನಿ ಸ್ವಾಮಿ ಅವರಿಗೆ ಬಹುಮತ ಸಾಬೀತಿಗೆ ರಾಜ್ಯಪಾಲರು ಸೂಚಿಸದಿದ್ದರೆ ರಾಜ್ಯಪಾಲ ವಿದ್ಯಾಸಾಗರ ರಾವ್ ಅವರ ವಿರುದ್ಧವೇ ಕಾನೂನು ಸಮರ ನಡೆಸಬೇಕಾಗುತ್ತದೆ ಎಂದು ಡಿಎಂಕೆ ಕಾರ್ಯಕಾರಿ ಅಧ್ಯಕ್ಷ ಎಂಕೆ ಸ್ಟಾಲಿನ್ ಹೇಳಿದ್ದಾರೆ.

ಚೆನ್ನೈ: ತಮಿಳುನಾಡು ರಾಜಕೀಯ ಮತ್ತೊಂದು ಮಹತ್ವದ ತಿರುವು ಪಡೆಯಲಿರುವ ಮುನ್ಸೂಚನೆ ದೊರೆತಿದ್ದು, ಎಐಎಡಿಎಂಕೆ ಪಕ್ಷದ ಸಿಎಂ ಪಳನಿ  ಸ್ವಾಮಿ ಅವರಿಗೆ ಬಹುಮತ ಸಾಬೀತಿಗೆ ರಾಜ್ಯಪಾಲರು ಸೂಚಿಸದಿದ್ದರೆ  ರಾಜ್ಯಪಾಲ ವಿದ್ಯಾಸಾಗರ ರಾವ್ ಅವರ ವಿರುದ್ಧವೇ ಕಾನೂನು ಸಮರ ನಡೆಸಬೇಕಾಗುತ್ತದೆ ಎಂದು ಡಿಎಂಕೆ ಕಾರ್ಯಕಾರಿ ಅಧ್ಯಕ್ಷ ಎಂಕೆ ಸ್ಟಾಲಿನ್ ಹೇಳಿದ್ದಾರೆ.
ಇಂದು ಚೆನ್ನೈನಲ್ಲಿರುವ ರಾಜಭವನಕ್ಕೆ ಬೆಂಬಲಿಗ ಶಾಸಕರೊಂದಿಗೆ ತೆರಳಿದ್ದ ಎಂಕೆ ಸ್ಟಾಲಿನ್ ಅವರು ತಮಿಳುನಾಡು ರಾಜ್ಯಪಾಲ ವಿದ್ಯಾಸಾಗರ ರಾವ್ ಅವರಿಗೆ ಮನವಿ ಪತ್ರ ಸಲ್ಲಿಸಿದರು. ಬಳಿಕ ಸುದ್ದಿಗಾರರೊಂದಿಗೆ  ಮಾತನಾಡಿದ ಸ್ಟಾಲಿನ್ ಅವರು, ಎಐಎಡಿಎಂಕೆ ಸರ್ಕಾರ ಅಲ್ಪಮತಕ್ಕೆ ಕುಸಿದಿದ್ದು, ಸಿಎಂ  ಪಳನಿ ಸ್ವಾಮಿ ಅವರಿಗೆ ಸರ್ಕಾರ ನಡೆಸುವ ಯಾವುದೇ ನೈತಿಕ ಹಕ್ಕು ಇಲ್ಲ. ಹೀಗಾಗಿ ಕೂಡಲೇ ವಿಶೇಷ ಅಧಿವೇಶನ ಕರೆದು ಸಿಎಂ  ಪಳನಿ ಸ್ವಾಮಿ ಅವರಿಗೆ ಬಹುಮತ ಸಾಬೀತು ಪಡಿಸುವಂತೆ ಸೂಚಿಸಬೇಕು ಎಂದು ರಾಜ್ಯಪಾಲರಿಗೆ ಮನವಿ ಮಾಡಲಾಗಿದೆ ಎಂದು ಸ್ಚಾಲಿನ್ ಹೇಳಿದರು.
ಇದೇ ವೇಳೆ ತಮ್ಮ ಪಕ್ಷದಲ್ಲಿ 89 ಶಾಸಕರಿದ್ದು, ಕಾಂಗ್ರೆಸ್ ನ 8 ಶಾಸಕರು, ಐಯುಎಂಎಲ್ ಪಕ್ಷ ಓರ್ವ ಶಾಸಕ ಹಾಗೂ ಎಐಎಡಿಎಂಕೆ ಪಕ್ಷದ 21 ರೆಬಲ್ ಶಾಸಕರು ತಮ್ಮೊಂದಿಗೆ ಇದ್ದಾರೆ. ಈ ಎಲ್ಲ ಶಾಸಕರನ್ನು ಒಟ್ಟುಗೂಡಿಸಿದರೆ  119 ಆಗುತ್ತದೆ. ಹೀಗಾಗಿ ತಮಗೆ ಬಹುಮತವಿದ್ದು, ರಾಜ್ಯಪಾಲ ವಿದ್ಯಾಸಾಗರ ರಾವ್ ಅವರು ಬಹುಮತ ಸಾಬೀತಿಗೆ ಸಿಎಂ ಪಳನಿಸ್ವಾಮಿಗೆ ಸೂಚಿಸಬೇಕು. ಇಲ್ಲವಾದರೆ ರಾಜ್ಯಪಾಲರ ವಿರುದ್ಧ ಕಾನೂನು ಸಮರ  ನಡೆಸಬೇಕಾಗುತ್ತದೆ ಎಂದು ಸ್ಟಾಲಿನ್ ಎಚ್ಚರಿಕೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CJP ಪ್ರತಿಭಟನೆಯಲ್ಲಿ ಭಾಗಿ: ನಟ Imran Khanಗೆ ಮುಂಬೈ ಪೊಲೀಸರಿಂದ 'Leave India' ನೋಟಿಸ್, ಅ.28ರೊಳಗೆ ಭಾರತ ತೊರೆಯುವಂತೆ ಗಡುವು..!

ಜಿಯೋ - ಸ್ಟಾರ್‌ಲಿಂಕ್‌, ಸ್ಟಾರ್ ವಾರ್ ಹಿಂದಿನ ಆರ್ಥಿಕತೆ! (ಹಣಕ್ಲಾಸು)

ಹಿಂದೂ ಧರ್ಮದಿಂದ ಇಸ್ಲಾಂಗೆ ಮತಾಂತರಗೊಂಡರೆ ಮೀಸಲಾತಿ ಸೌಲಭ್ಯ ಸಿಗಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು!

ಭಾರತೀಯರ ಸಾಮೂಹಿಕೆ ಹತ್ಯೆಗೆ ಸಂಚು: ರೈಫಲ್ ಹಿಡಿದು ಅಮೆರಿಕದ ಹಿಂದೂ ದೇವಸ್ಥಾನಕ್ಕೆ ನುಗ್ಗಿದ್ದ ಶೂಟರ್; ಕೊನೆ ಕ್ಷಣದಲ್ಲಿ ಗನ್ ಜಾಮ್, ಆರೋಪಿ ಬಂಧನ..!

ಶೃಂಗೇರಿ ಮತ ಎಣಿಕೆ Video ನಾಪತ್ತೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ತರಾಟೆ..!