ಸಾಂದರ್ಭಿಕ ಚಿತ್ರ 
ದೇಶ

ಜಮ್ಮು-ಕಾಶ್ಮೀರ:ಶೋಪಿಯಾನ್ ಎನ್ ಕೌಂಟರ್ ನಲ್ಲಿ ಓರ್ವ ಉಗ್ರ ಹತ, ಮತ್ತೊಬ್ಬನ ಬಂಧನ

ಇಲ್ಲಿನ ಶೋಪಿಯಾನ್ ನ ಬರ್ಬಗ್ ಪ್ರದೇಶದಲ್ಲಿ ಇಂದು ಬೆಳಗ್ಗೆ ನಡೆದ ಎನ್ ಕೌಂಟರ್ ನಲ್ಲಿ...

ಶೋಪಿಯಾನ್(ಜಮ್ಮು-ಕಾಶ್ಮೀರ): ಇಲ್ಲಿನ ಶೋಪಿಯಾನ್ ನ ಬರ್ಬಗ್ ಪ್ರದೇಶದಲ್ಲಿ ಇಂದು ಬೆಳಗ್ಗೆ ನಡೆದ ಎನ್ ಕೌಂಟರ್ ನಲ್ಲಿ ಪೊಲೀಸರು ಓರ್ವ ಉಗ್ರನನ್ನು ಹತ್ಯೆಗೈಯುವಲ್ಲಿ ಯಶಸ್ವಿಯಾಗಿದ್ದಾರೆ.  ಮತ್ತೊಬ್ಬ ಉಗ್ರನನ್ನು ಬಂಧಿಸಿ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ. 
ಈ ಕುರಿತು ಪೊಲೀಸರೇ ಸುದ್ದಿ ದೃಢಪಡಿಸಿದ್ದಾರೆ.ಪೊಲೀಸರ ಶೋಧ ಕಾರ್ಯ ಮುಂದುವರಿದಿದೆ. ಹೆಚ್ಚಿನ ವಿವರಗಳು ತಿಳಿದುಬಂದಿಲ್ಲ.
Barbug #Shopian encounter. 1 terrorist killed with @JmuKmrPolice @adgpi @crpfindia. One terrorist arrested with weapon. search on. @spvaid
ನಿನ್ನೆ ಸಾಯಂಕಾಲ ಬರ್ಬಾಗ್ ಗ್ರಾಮದಲ್ಲಿ ಎನ್ ಕೌಂಟರ್ ನಡೆದಿದ್ದು, ಅಲ್ಲಿ 3ರಿಂದ ನಾಲ್ವರು ಉಗ್ರರು ಹಣ್ಣಿನ ತೋಟದೊಳಗೆ ಅವಿತು ಕುಳಿತಿದ್ದರು ಎಂದು ಪೊಲೀಸರು ಶಂಕಿಸಿದ್ದಾರೆ.
ಮತ್ತೊಬ್ಬ ಉಗ್ರನನ್ನು ಭದ್ರತಾ ಪಡೆ ಸುತ್ತುವರಿದಿದೆ. 
ಹತನಾದ ಉಗ್ರನನ್ನು ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯ ತಾರಿಕ್ ಭಟ್ ಎಂದು ಗುರುತಿಸಲಾಗಿದೆ. ಶರಣಾದ ಉಗ್ರ ಲಷ್ಕರ್ ಎ-ತೊಯ್ಬಾದ ಆದಿಲ್ ದರ್ ಎಂದು ಗುರುತಿಸಲಾಗಿದೆ.
ಭದ್ರತಾ ಪಡೆ ಯೋಧರು ಸುತ್ತುವರಿದಿರುವ ಉಗ್ರ ಲಷ್ಕರ್ ಎ ತೊಯ್ಬಾದ ಮೊಹಮ್ಮದ್ ಅಲ್ತರ್ ರಾತರ್ ಎಂದು ಗುರುತಿಸಲಾಗಿದೆ.
ಇನ್ನೊಂದೆಡೆ ಶೋಪಿಯಾನ್ ಜಿಲ್ಲೆಯ ಇಮಾಮ್ ಸಾಹಿಬ್ ಪ್ರದೇಶದಲ್ಲಿ ನಡೆದ ಮತ್ತೊಂದು ಎನ್ ಕೌಂಟರ್ ನಲ್ಲಿ ನಿನ್ನೆ ಓರ್ವ ಉಗ್ರ ಭದ್ರತಾ ಪಡೆಯಿಂದ ಹತನಾಗಿದ್ದ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ