ಆಧಾರ್ ಗೆ ಸಿಮ್ ಕಾರ್ಡ್ ಗಳನ್ನು ಜೋಡಣೆ ಮಾಡಲು ಫೆಬ್ರವರಿ ತಿಂಗಳು ಕೊನೆ
2018, ಫೆಬ್ರವರಿಯೊಳಗೆ ಆಧಾರ್ ಸಂಖ್ಯೆಗೆ ಜೋಡಣೆಯಾಗದ ಮೊಬೈಲ್ ಸಿಮ್ ಕಾರ್ಡುಗಳನ್ನು...
ನವದೆಹಲಿ: 2018, ಫೆಬ್ರವರಿಯೊಳಗೆ ಆಧಾರ್ ಸಂಖ್ಯೆಗೆ ಜೋಡಣೆಯಾಗದ ಮೊಬೈಲ್ ಸಿಮ್ ಕಾರ್ಡುಗಳನ್ನು ರದ್ದುಪಡಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.
ಮುಂದಿನ ವರ್ಷ ಫೆಬ್ರವರಿ ತಿಂಗಳೊಳಗೆ ಸಿಮ್ ಕಾರ್ಡ್ ಗೆ ಆಧಾರ್ ಸಂಖ್ಯೆ ಜೋಡಣೆಯಾಗದ ಎಲ್ಲ ಫೋನ್ ನಂಬರ್ ಗಳನ್ನು ರದ್ದುಗೊಳಿಸಲು ಸರ್ಕಾರ ತೀರ್ಮಾನಿಸಿದೆ.
ಆದೇಶ ನೀಡಿದ ಒಂದು ವರ್ಷದೊಳಗೆ ಮೊಬೈಲ್ ಫೋನ್ ಸಂಖ್ಯೆಗಳಿಗೆ ಆಧಾರ್ ಜೋಡಣೆ ಮಾಡಬೇಕೆಂದು ಸುಪ್ರೀಂ ಕೋರ್ಟ್ ಈ ವರ್ಷ ಫೆಬ್ರವರಿಯಲ್ಲಿ ತೀರ್ಪು ನೀಡಿತ್ತು.
ಲೋಕನೀತಿ ಫೌಂಡೇಶನ್ ಎಂಬ ಸ್ವಯಂ ಸೇವಾ ಸಂಸ್ಥೆ ಹೂಡಿದ್ದ ಅರ್ಜಿ ವಿಚಾರಣೆ ನ ಡೆಸಿದ ನ್ಯಾಯಾಲಯ ಈ ತೀರ್ಪು ಪ್ರಕಟಿಸಿತ್ತು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.