ವಿಜಯ್ ಅನಿತಾ ಪೋಷಕರಿಗೆ ಸಾಂತ್ವನ ಹೇಳುತ್ತಿರುವ ಫೋಟೋ 
ದೇಶ

ನೀಟ್ ವಿರೋಧಿಸಿ ದಲಿತ ವಿದ್ಯಾರ್ಥಿನಿ ಆತ್ಮಹತ್ಯೆ: ಪೋಷಕರಿಗೆ ಸಾಂತ್ವನ ಹೇಳಿ ನಟ ವಿಜಯ್

ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ(ನೀಟ್‌) ವಿರುದ್ಧ ಕಾನೂನು ಹೋರಾಟ ನಡೆಸಿ ಆತ್ಮಹತ್ಯೆಗೆ ಶರಣಾಗಿರುವ ದಲಿತ ವಿದ್ಯಾರ್ಥಿನಿ ಅನಿತಾ(18) ಅವರ ಮನೆಗೆ ತಮಿಳು ನಟ...

ಚೆನ್ನೈ: ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ(ನೀಟ್‌) ವಿರುದ್ಧ ಕಾನೂನು ಹೋರಾಟ ನಡೆಸಿ ಆತ್ಮಹತ್ಯೆಗೆ ಶರಣಾಗಿರುವ ದಲಿತ ವಿದ್ಯಾರ್ಥಿನಿ ಅನಿತಾ(18) ಅವರ ಮನೆಗೆ ತಮಿಳು ನಟ ವಿಜಯ್ ಭೇಟಿ ನೀಡಿ ಪೋಷಕರಿಗೆ ಸಾಂತ್ವನ ಹೇಳಿದರು. 
ಮೃತ ಅನಿತಾ ಮನೆಗೆ ವಿಜಯ್ ಭೇಟಿ ನೀಡಿ ಪೋಷಕರಿಗೆ ಸಾಂತ್ವನ ಹೇಳಿರುವ ಫೋಟೋಗಳು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಈ ಹಿಂದೆ ಕಾಲಿವುಡ್ ನಟರಾದ ಕಮಲ್ ಹಾಸನ್ ಮತ್ತು ರಜನಿಕಾಂತ್ ಅನಿತಾ ಸಾವು ಕುರಿತಂತೆ ಸಂತಾಪ ಸೂಚಿಸಿದ್ದರು. ಈ ವೇಳೆ ಅನಿತಾ ಸಾವನ್ನು ಖಂಡಿಸಿದ್ದ ಕಮಲ್ ಹಾಸನ್ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. 
ವಿಜಯ್ ಜಲ್ಲಿಕಟ್ಟು ಪ್ರತಿಭಟನೆಗೆ ಬೆಂಬಲ ಘೋಷಿಸಿದ್ದನ್ನು ಬಿಟ್ಟರೇ ಮತ್ಯಾವುದೇ ರಾಜಕೀಯ ವಿಷಯಗಳ ಮೇಲೆ ಪ್ರತಿಕ್ರಿಯಿಸುತ್ತಿರಲಿಲ್ಲ. ಆದರೆ ಇದೇ ಮೊದಲ ಬಾರಿಗೆ ಅನಿತಾ ಸಾವು ಕುರಿತಂತೆ ಆಕೆಯ ಮನೆಗೆ ತೆರಳಿ ಪೋಷಕರಿಗೆ ಸಾಂತ್ವನ ಹೇಳಿರುವುದು ಅವರ ಅಭಿಮಾನಿಗಳಲ್ಲಿ ಕುತೂಹಲ ಕೆರಳಿಸಿವೆ. 
ದಲಿತ ಕುಟುಂಬಕ್ಕೆ ಸೇರಿರುವ ಅನಿತಾ ತಂದೆ ದಿನಗೂಲಿ ಕಾರ್ಮಿಕರು. ವೈದ್ಯೆಯಾಗುವ ಮಹತ್ವಾಕಾಂಕ್ಷೆ ಹೊಂದಿದ್ದ ಅನಿತಾ ಪಿಯು ದ್ವಿತೀಯ ಪರೀಕ್ಷೆಯಲ್ಲಿ 1,200ಕ್ಕೆ  1,176 ಅಂಕಗಳನ್ನು ಗಳಿಸಿದ್ದರು. ಆದರೆ, ‘ನೀಟ್‌’ನಲ್ಲಿ ಅನಿತಾ ಕೇವಲ 86 ಅಂಕಗಳನ್ನು ಮಾತ್ರ ಗಳಿಸಿದ್ದರಿಂದ ವೈದ್ಯಕೀಯ ಸೀಟು ದೊರೆಯಲಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

SIR ಅಕ್ರಮ ತಡೆಯಲು 'ಕೈ' ಕಲಿಗಳ ಮಾಸ್ಟರ್ ಪ್ಲ್ಯಾನ್: ಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಮಹತ್ವದ ಸಭೆ, ಬೂತ್ ಮಟ್ಟದಲ್ಲಿ ಸಮರಕ್ಕೆ ಸಜ್ಜು..!

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ