ನರೇಂದ್ರ ಮೋದಿ 
ದೇಶ

ಅಮೆರಿಕನ್ನರು 1893ರ ಮೊದಲ 9/11 ಮರೆತದ್ದು, ಎರಡನೇ 9/11 ಕ್ಕೆ ಕಾರಣವಾಯಿತು: ಪ್ರಧಾನಿ ಮೋದಿ

ದೀನದಯಾಳ್ ಉಪಾಧ್ಯಾಯರ ಜನ್ಮ ಶತಮಾನೋತ್ಸವ ಹಾಗೂ ಸ್ವಾಮಿ ವಿವೇಕಾನಂದರು ಶಿಕಾಗೋದಲ್ಲಿ ವಿಶ್ವಧರ್ಮ ಸಮ್ಮೇಳನದಲ್ಲಿ ಭಾಗವಹಿಸಿ ಮಾತನಾಡಿದ್ದರ 125 ನೇ ವರ್ಷಾಚರಣೆ ಹಿನ್ನೆಲೆಯಲ್ಲಿ ಪ್ರಧಾನಿ...

ನವದೆಹಲಿ: ದೀನದಯಾಳ್ ಉಪಾಧ್ಯಾಯರ ಜನ್ಮ ಶತಮಾನೋತ್ಸವ ಹಾಗೂ ಸ್ವಾಮಿ ವಿವೇಕಾನಂದರು ಶಿಕಾಗೋದಲ್ಲಿ ವಿಶ್ವಧರ್ಮ ಸಮ್ಮೇಳನದಲ್ಲಿ ಭಾಗವಹಿಸಿ ಮಾತನಾಡಿದ್ದರ 125 ನೇ ವರ್ಷಾಚರಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸೆ.11 ರಂದು ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ್ದಾರೆ. 
ಇಂದು 9/11 ಎಂದೇ ಪ್ರಸಿದ್ಧವಾದ ದಿನಾಂಕವಾಗಿದೆ. ಈ ದಿನಾಂಕವನ್ನು 2001 ರ ಘಟನೆಯ ಬಳಿಕ ವ್ಯಾಪಕವಾಗಿ ನೆನಪಿಸಿಕೊಳ್ಳಲಾಗುತ್ತದೆ. ಆದರೆ 1893ರ 9/11 ನ್ನೂ ನಾವು ನೆನಪಿಟ್ಟುಕೊಂಡಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಅಮೆರಿಕನ್ನರು 1893 ರಲ್ಲಿ ನಡೆದಿದ್ದ ಮೊದಲ 9/11 ರನ್ನು ಮರೆತಿದ್ದರು ಪರಿಣಾಮವಾಗಿ ಎರಡನೇ 9/11 ನಡೆಯಿತು ಎಂದು ಮೋದಿ ಅಭಿಪ್ರಾಯಪಟ್ಟಿದ್ದಾರೆ. 
ಸ್ವಾಮಿ ವಿವೇಕಾನಂದರು ನಮ್ಮ ಸಮಾಜದಲ್ಲಿ ನುಸುಳಿರುವ ದುಷ್ಟಶಕ್ತಿಗಳ ಬಗ್ಗೆ ಧ್ವನಿ ಎತ್ತಿದ್ದರು. ಸ್ವಾಮಿ ವಿವೇಕಾನಂದರು ಭಾಷಣ ಮಾಡುವುದಕ್ಕೂ ಮುನ್ನ ಅಲ್ಲಿನ ಜನತೆಗೆ ಮಹಿಳೆಯರೇ ಮತ್ತು ಮಹನೀಯರೇ( ಲೇಡೀಸ್ ಆಂಡ್ ಜೆಂಟಲ್ ಮೆನ್) ಎಂಬ ಶಬ್ದವನ್ನು ಹೊರತುಪಡಿಸಿ ಭಾಷಣ ಪ್ರಾರಂಭಿಸುವುದಕ್ಕೆ ಬೇರೆ ಶಬ್ದ ತಿಳಿದಿರಲಿಲ್ಲ. ಆದರೆ ಮೊದಲ ಬಾರಿಗೆ ವಿವೇಕಾನಂದರು ಸಹೋದರ ಸಹೋದರಿಯರೇ... ಎಂದು ಸಭೆಯನ್ನುದ್ದೇಶಿಸಿ ಮಾತನಾಡಿದ್ದರು ಎಂದಿದ್ದಾರೆ. 
ಸ್ವಾಮಿ ವಿವೇಕಾನಂದರು ನಮ್ಮ ಗುರುತನ್ನು ಮತ್ತಷ್ಟು ದೃಢಪಡಿಸಿದ್ದರು. 83 ರ 9/11 ಸಹೋದರತ್ವದ ಸಂಕೇತವಾಗಿ ವಿವೇಕಾನಂದರು ಕೇವಲ ಮೂರು ಪದಗಳಲ್ಲಿ ಭಾರತದ ಶಕ್ತಿಯನ್ನು ಜಗತ್ತಿಗೆ ತಿಳಿಸಿದ್ದರು ಎಂದು ಮೋದಿ ವಿವೇಕಾನಂದರನ್ನು ಸ್ಮರಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Geneva ಸಭೆಯಲ್ಲಿ ಭಾರತದ ವಿರುದ್ಧ ಟೀಕೆ; ‘ರಾಜಕೀಯ ಪ್ರೇರಿತ ಹೇಳಿಕೆಗಳ ಒಪ್ಪಲ್ಲ’ ಎಂದ MEA, ವಿಶ್ವಸಂಸ್ಥೆ ಸಮಿತಿ ವಿರುದ್ಧ ಕಿಡಿ..!

'ವಿರೋಧವಿದ್ದರೂ ಮೋಹನ್ ಭಾಗವತ್ ಅಮೆರಿಕಕ್ಕೆ ಯಾಕೆ ಹೋದ್ರು? ಮಹಾರಾಷ್ಟ್ರ ಕಾಂಗ್ರೆಸ್ ಶಾಸಕ ನಾನಾ ಪಟೋಲೆ ಪ್ರಶ್ನೆ!

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!