ಸಾಂದರ್ಭಿಕ ಚಿತ್ರ 
ದೇಶ

ದೆಹಲಿ: ಆಸ್ಪತ್ರೆ ಐಸಿಯು ಶೌಚಾಲಯದಲ್ಲಿ ನರ್ಸ್ ಅನುಮಾನಾಸ್ಪದ ಸಾವು

ರಾಜಧಾನಿ ದೆಹಲಿಯ ಖಾಸಗಿ ಆಸ್ಪತ್ರೆಯಲ್ಲಿನ ತೀವ್ರನಿಗಾ ಘಟಕದ ಶೌಚಾಲಯದಲ್ಲಿ ನರ್ಸ್ ಒಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿರವ ಘಟನೆ ಭಾನುವಾರ ನಡೆದಿದೆ...

ನವದೆಹಲಿ: ರಾಜಧಾನಿ ದೆಹಲಿಯ ಖಾಸಗಿ ಆಸ್ಪತ್ರೆಯಲ್ಲಿನ ತೀವ್ರನಿಗಾ ಘಟಕದ ಶೌಚಾಲಯದಲ್ಲಿ ನರ್ಸ್ ಒಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿರವ ಘಟನೆ ಭಾನುವಾರ ನಡೆದಿದೆ. 
ಆಸ್ಪತ್ರೆಯಲ್ಲಿ ಸಹಾಯಕ ನರ್ಸ್ ಆಗಿ ಕಾರ್ಯನಿರ್ವಹಿಸುತ್ತಿದ್ದ ರಾಹುಲ್ (23) ಎಂಬುವವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ. 
ಆಸ್ಪತ್ರೆಯ ತೀವ್ರನಿಗಾ ಘಟಕದಲ್ಲಿ ನಿನ್ನೆ ರಾಹುಲ್ ಅವರು ರಾತ್ರಿಪಾಳಿಯಲ್ಲಿ ಕೆಲಸ ಮಾಡುತ್ತಿದ್ದರು. ಇಂದು ಬೆಳಿಗ್ಗೆ ರಾಹುಲ್ ಅವರ ಮೃತದೇಹ ಶೌಚಾಲಯದಲ್ಲಿ ದೊರಕಿದೆ. ದೇಹದ ಮೇಲೆ ಯಾವುದೇ ಗಾಯಗಳೂ ಕಂಡು ಬಂದಿಲ್ಲ ಎಂದು ವರದಿಗಳು ತಿಳಿಸಿವೆ. 
ಪ್ರಕರಣ ಸಂಬಂಧ ಪ್ರತಿಕ್ರಿಯೆನೀಡಿರುವ ಡಿಸಿಪಿ, ಕೆಲ ತಿಂಗಳ ಹಿಂದಷ್ಟೇ ರಾಹುಲ್ ಅವರ ಪತ್ನಿ ರಾಹುಲ್ ಅವರನ್ನು ಬಿಟ್ಟು ಹೋಗಿದ್ದರು. ಇದರಿಂದ ರಾಹುಲ್ ಅವರು ಮಾನಸಿಕ ಖಿನ್ನತೆಗೊಳಗಾಗಿದ್ದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್