ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಆಂಧ್ರಪ್ರದೇಶ: 9 ವರ್ಷದ ಬಾಲಕಿಯನ್ನು ಬೈಕ್ ನಲ್ಲಿ ಅಪಹರಿಸಿ ಅತ್ಯಾಚಾರ

ಅಂಗಡಿಯಿಂದ ಹಾಲು ತೆಗೆದುಕೊಂಡು ವಾಪಸ್ ಬರುತ್ತಿದ್ದ 9 ವರ್ಷದ ಬಾಲಕಿಯನ್ನು ಕಾಮುಕನೊಬ್ಬ ತನ್ನ ಬೈಕ್ ನಲ್ಲಿ ....

ಸಾಂದರ್ಭಿಕ ಚಿತ್ರ
Lingaraj Badiger
Updated On : 11 Sept 2017, 3:40 am
ವಿಜಯವಾಡ: ಅಂಗಡಿಯಿಂದ ಹಾಲು ತೆಗೆದುಕೊಂಡು ವಾಪಸ್ ಬರುತ್ತಿದ್ದ 9 ವರ್ಷದ ಬಾಲಕಿಯನ್ನು ಕಾಮುಕನೊಬ್ಬ ತನ್ನ ಬೈಕ್ ನಲ್ಲಿ ಕರೆದುಕೊಂಡು ಹೋಗಿ ನಿರ್ಜನ ಪ್ರದೇಶದಲ್ಲಿ ಅತ್ಯಾಚಾರ ಎಸಗಿರುವ ಘಟನೆ ಆಂಧ್ರಪ್ರದೇಶದ ಪಶ್ಚಿಮ ಗೋದಾವರಿ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದೆ.
ನೀಚ ಕೃತ್ಯ ಎಸಗಿದ ಬಳಿಕ ಕಾಮುಕ ಬಾಲಕಿಯನ್ನು ಆಕೆಯ ಮನೆ ಬಳಿ ಬಿಟ್ಟು ಹೋಗಿರುವ ಘಟನೆ ಭಾನುವಾರ ರಾತ್ರಿ ಇರಗಾವರಂ ಗ್ರಾಮದಲ್ಲಿ ನಡೆದಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
ನಿನ್ನೆ ರಾತ್ರಿ 8 ಗಂಟೆಯ ಸುಮಾರಿಗೆ ಅಂಗಡಿಗೆ ಒಂದು ಪಾಕೇಟ್ ಹಾಲು ತರಲು ಹೋಗಿದ್ದ ಬಾಲಕಿಯನ್ನು ಹೆಲ್ಮೆಟ್ ಧರಿಸಿದ್ದ ಯುವಕನೊಬ್ಬ ಕರೆದುಕೊಂಡು ಹೋಗಿ ನಿರ್ಜನ ಪ್ರದೇಶದಲ್ಲಿ ಅತ್ಯಾಚಾರ ಎಸಗಿದ್ದಾನೆ. ಬಳಿಕ ಬಾಲಕಿಯನ್ನು ಮನೆ ಬಳಿ ತಂದು ಬಿಟ್ಟು ಪರಾರಿಯಾಗಿದ್ದಾನೆ. ಮಗಳು ಬೇಗ ಮನೆಗೆ ವಾಪಸ್ ಬರದ ಹಿನ್ನಲೆಯಲ್ಲಿ ಆತಂಕಗೊಂಡ ಪೋಷಕರು ಬಾಲಕಿಗಾಗಿ ಹುಡುಕಾಟ ನಡೆಸಿದ್ದಾರೆ. ಸ್ವಲ್ಪ ಸಮಯದ ನಂತರ ಅಳುತ್ತಾ ಬರುತ್ತಿದ್ದ ಮಗಳ ಮಾತು ಕೇಳಿ ಪೋಷಕರಿಗೆ ಆಘಾತವಾಗಿದೆ. ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ, ಪೊಲೀಸರಿಗೆ ದೂರು ನೀಡಿದ್ದಾರೆ.

Advertisement

Advertisement

ಪೋಷಕರ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement