ವಿದೇಶದಲ್ಲಿ ಭಾರತವನ್ನು ಅವಮಾನಿಸಿದ್ದು ರಾಹುಲ್ ಅಲ್ಲ, ಮೋದಿ: ಕಾಂಗ್ರೆಸ್
ರಾಹುಲ್ ಗಾಂಧಿ ಅಮೆರಿಕಾದಲ್ಲಿ ಭಾಷಣ ಮಾಡಬೇಕಾದರೆ ಉಂಟಾಗಿರುವ ಬಾಯ್ತಪ್ಪಿನ ಹೇಳಿಕೆಗಳು ಬಗ್ಗೆ ಬಿಜೆಪಿ, ಕಾಂಗ್ರೆಸ್ ಪರಸ್ಪರ ಆರೋಪ-ಪ್ರತ್ಯಾರೋಪಗಳಲ್ಲಿ ತೊಡಗಿವೆ.
ನವದೆಹಲಿ: ರಾಹುಲ್ ಗಾಂಧಿ ಅಮೆರಿಕಾದಲ್ಲಿ ಭಾಷಣ ಮಾಡಬೇಕಾದರೆ ಉಂಟಾಗಿರುವ ಬಾಯ್ತಪ್ಪಿನ ಹೇಳಿಕೆಗಳು ಬಗ್ಗೆ ಬಿಜೆಪಿ, ಕಾಂಗ್ರೆಸ್ ಪರಸ್ಪರ ಆರೋಪ-ಪ್ರತ್ಯಾರೋಪಗಳಲ್ಲಿ ತೊಡಗಿವೆ.
ರಾಹುಲ್ ಗಾಂಧಿ ಭಾಷಣವನ್ನು ಟೀಕಿಸಿದ್ದ ಬಿಜೆಪಿ ವಿರುದ್ಧ ಕಾಂಗ್ರೆಸ್ ಆಕ್ರೋಶಗೊಂಡಿದ್ದು, ವಿದೇಶದಲ್ಲಿ ಭಾರತಕ್ಕೆ ಅವಮಾನ ಮಾಡಿದ್ದು ಪ್ರಧಾನಿ ನರೇಂದ್ರ ಮೋದಿಯೇ ಹೊರತು ರಾಹುಲ್ ಗಾಂಧಿ ಅಲ್ಲ ಎಂದು ಕಾಂಗ್ರೆಸ್ ನಾಯಕ ಆನಂದ್ ಶರ್ಮಾ ಹೇಳಿದ್ದಾರೆ.
ಬರ್ಕ್ಲಿಯಲ್ಲಿನ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾನಿಲಯದಲ್ಲಿ ಮಾತನಾಡಿದ್ದ ರಾಹುಲ್ ಗಾಂಧಿ ಭಾರತ ಸರ್ಕಾರದ ವಿರುದ್ಧ ಅಸಹಿಷ್ಣುತೆಯನ್ನು ಸೃಷ್ಟಿಸುತ್ತಿರುವ ಆರೋಪ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಬಿಜೆಪಿ ರಾಹುಲ್ ಗಾಂಧಿ ಭಾಷಣವನ್ನು ಟೀಕಿಸಿ, ತನ್ನ ರಾಜಕೀಯ ವೈಫಲ್ಯಗಳ ಬಗ್ಗೆ ರಾಹುಲ್ ಗಾಂಧಿ ಮಾತನಾಡಿದ್ದಾರೆ ಎಂದು ಹೇಳಿತ್ತು. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಭಾರತಕ್ಕೆ ತಮ್ಮ ಭಾಷಣದಲ್ಲಿ ಅವಮಾನ ಮಾಡಿರುವುದು ಮೋದಿಯೇ ಹೊರತು ರಾಹುಲ್ ಗಾಂಧಿಯಲ್ಲ ಎಂದು ಹೇಳಿದೆ.