ಕೇಂದ್ರ ಸಚಿವ ಕಿರಣ್ ರಿಜಿಜು 
ದೇಶ

ರೊಹಿಂಗ್ಯಾ ಮುಸ್ಲಿಮರನ್ನು ಗಡಿಪಾರು ಮಾಡುವ ಚಿಂತನೆ ಇಲ್ಲ: ಕಿರಣ್ ರಿಜಿಜು

ರೊಹಿಂಗ್ಯಾ ಮುಸ್ಲಿಮರನ್ನು ದೇಶದಿಂದ ಗಡಿಪಾರು ಮಾಡುವ ಯಾವುದೇ ಚಿಂತನೆಯಲ್ಲಿ ಕೇಂದ್ರ ಸರ್ಕಾರವಿಲ್ಲ ಎಂದು ಕೇಂದ್ರ ಸಚಿವ ಕಿರಣ್ ರಿಜಿಜು ಹೇಳಿದ್ದಾರೆ.

ನವದೆಹಲಿ: ರೊಹಿಂಗ್ಯಾ ಮುಸ್ಲಿಮರನ್ನು ದೇಶದಿಂದ ಗಡಿಪಾರು ಮಾಡುವ ಯಾವುದೇ ಚಿಂತನೆಯಲ್ಲಿ ಕೇಂದ್ರ ಸರ್ಕಾರವಿಲ್ಲ ಎಂದು ಕೇಂದ್ರ ಸಚಿವ ಕಿರಣ್ ರಿಜಿಜು ಹೇಳಿದ್ದಾರೆ.
ಮ್ಯಾನ್ಮಾರ್ ನ ರೊಹಿಂಗ್ಯಾ ಮುಸ್ಲಿಮರ ವಿರುದ್ಧ ನಡೆಯುತ್ತಿರುವ ಕಾರ್ಯಾಚರಣೆಗೆ ಸಂಬಂಧಿಸಿದಂತೆ ಮಾತನಾಡಿದ ಕೇಂದ್ರ ಸಚಿವ ರಿಜಿಜು, ಕೇಂದ್ರ ಸರ್ಕಾರ ಕೇವಲ ದೇಶದಲ್ಲಿರುವ ಅಕ್ರಮ ವಲಸಿಗರನ್ನು ಮಾತ್ರ  ಗುರುತಿಸುವಂತೆ ಹೇಳಿದೆಯೇ ಹೊರತು ಅವರನ್ನು ಗಡಿಪಾರು ಮಾಡುವುದಕ್ಕಲ್ಲ. ರೊಹಿಂಗ್ಯಾ ಮುಸ್ಲಿಮರನ್ನು ಗಡಿಪಾರು ಮಾಡುವ ಯಾವುದೇ ಚಿಂತನೆಯಲ್ಲಿ ಕೇಂದ್ರ ಸರ್ಕಾರವಿಲ್ಲ. ಆದರೆ ದೇಶದಲ್ಲಿರುವ ಅಕ್ರಮ ವಲಸಿಗರ  ವಿರುದ್ಧ ಕಾನೂನಾತ್ಮಕವಾಗಿ ಕ್ರಮ ಜರುಗಿಸಲಾಗುತ್ತದೆ ಎಂದು ಹೇಳಿದರು.

ಇದೇ ವೇಳೆ ವಿಶ್ವಸಂಸ್ಥೆಯ ಮಾನವ ಹಕ್ಕು ವಿಭಾಗದ ಮುಖ್ಯಸ್ಥ ಝೀದ್ ರಹದ್ ಅಲ್ ಹುಸೇನ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಕಿರಣ್ ರಿಜಿಜು ಅವರು, "ಭಾರತ ದೇಶ ಮಾನವೀಯ ಕಾಳಜಿಗಳಿಗೆ ತುಂಬಾ ಪ್ರಮುಖ್ಯತೆ  ನೀಡುತ್ತದೆ. ಅಂತೆಯೇ ನಿರಾಶ್ರಿತರನ್ನು ಯಾವಾಗಲೂ ಸ್ವೀಕರಿಸಿದೆ ಎಂದು ಹೇಳಿದರು.

ಈ ಹಿಂದೆ ರೊಹಿಂಗ್ಯಾ ಮುಸ್ಲಿಮರ ಗಡಿಪಾರು ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ್ದ ವಿಶ್ವಸಂಸ್ಥೆಯ ಮಾನವ ಹಕ್ಕು ವಿಭಾಗದ ಮುಖ್ಯಸ್ಥ ಝೀದ್ ರಹದ್ ಅಲ್ ಹುಸೇನ್ ಅವರು, ಭಾರತದಲ್ಲಿರುವ ರೊಹಿಂಗ್ಯಾ ಮುಸ್ಲಿಮರನ್ನು  ಸಾಮೂಹಿಕ ಬಹಿಷ್ಕಾರ ಹಾಕುವ ಕುರಿತು ಮಾತುಗಳು ಕೇಳಿಬರುತ್ತಿವೆ. ಆದರೆ ಭಾರತವು ಸಾಮೂಹಿಕ ಬಹಿಷ್ಕಾರಗಳನ್ನು ಕೈಗೊಳ್ಳಲು ಸಾಧ್ಯವಿಲ್ಲ, ಅಥವಾ ಜನರು ಚಿತ್ರಹಿಂಸೆ ಅಥವಾ ಇತರ ಗಂಭೀರ ಉಲ್ಲಂಘನೆಗಳನ್ನು  ಎದುರಿಸುವ ಸ್ಥಳಕ್ಕೆ ಮರಳಲು ಸಾಧ್ಯವಿಲ್ಲ ಎಂದು ಹೇಳಿದ್ದರು.

ಇದಕ್ಕೆ ಪ್ರತಿಕ್ರಿಯಿಸಿರುವ ಕಿರಣ್ ರಿಜಿಜು, ಭಾರತವು ಅತ್ಯಂತ ಮಾನವೀಯ ರಾಷ್ಟ್ರವಾಗಿದ್ದು, ಅಂತೆಯೇ ತನ್ನ ಆಂತರಿಕ ಭದ್ರತೆಗಾಗಿ ಕಾರ್ಯ ಯೋಜನೆಗಳನ್ನು ರೂಪಿಸಲೂ ಕೂಡ ಸ್ವತಂತ್ರವಾಗಿದೆ. ಈ ನಿಟ್ಟಿನಲ್ಲಿ ಅಕ್ರಮ  ವಲಸಿಗರ ಕುರಿತು ಮಾಹಿತಿ ಕೇಳಿದ್ದೇವೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

SIR ಕುರಿತು ಚುನಾವಣಾ ಆಯೋಗ ಏಕಪಕ್ಷೀಯ ನಿರ್ಧಾರ ಆರೋಪ: CEC ಜ್ಞಾನೇಶ್ ಕುಮಾರ್ ವಿರುದ್ಧ ಕ್ರಮಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ PIL

ಆಯೋಗದ ವಿವಾದ: CEC Gyanesh Kumar ಭಾಗಿಯಾಗಬೇಕಿದ್ದ ಯುವಕರೊಂದಿಗಿನ ಕಾರ್ಯಕ್ರಮ ದಿಢೀರ್ ರದ್ದು!

'ಯಾರು ಚಿತ್ರೀಕರಿಸುತ್ತಿದ್ದರು?': ಜಮುಯಿ ದುರಂತಕ್ಕೆ ವಿಪಕ್ಷಗಳೇ ಕಾರಣ-ಬಿಜೆಪಿ ಸಚಿವ

ವಿಶ್ವಸಂಸ್ಥೆ ಸುಧಾರಣೆ ವಿರೋಧಿಸುವವರಿಗೆ ಜಾಗತಿಕ ವೇದಿಕೆ ಬಗ್ಗೆ ಕಾಳಜಿಯಿಲ್ಲ, ಕೇವಲ ಸ್ವಾರ್ಥಕ್ಕೆ ಬಳಕೆ: ಎಸ್. ಜೈಶಂಕರ್ ವಾಗ್ದಾಳಿ

ಬಿಹಾರದಲ್ಲಿ ಹದಗೆಟ್ಟ ಕಾನೂನು ಸುವ್ಯವಸ್ಥೆ? ಮಂದಾರ್ ಬೆಟ್ಟದಲ್ಲಿ ಯುವತಿಗೆ ಕಾಮುಕರಿಂದ ಕಿರುಕುಳ; ಒಂದೇ ವಾರದಲ್ಲಿ 3ನೇ ಪ್ರಕರಣ..!