ಬಂಧಿತ ಉಗ್ರ ಇಷ್ತಿಯಾಕ್ ವನಿ 
ದೇಶ

ಬಾರಾಮುಲ್ಲಾದಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಇಷ್ತಿಯಾಕ್ ವನಿ ಬಂಧನ!

ಪ್ರಮುಖ ಬೆಳವಣಿಗೆಯಲ್ಲಿ ಕಾಶ್ಮೀರದ ಬಾರಾಮುಲ್ಲ ಜಿಲ್ಲೆಯಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಕುಖ್ಯಾತ ಉಗ್ರ ಇಷ್ತಿಯಾಕ್ ವನಿಯನ್ನು ಕಾಶ್ಮೀರ ಪೊಲೀಸರು ಬುಧವಾರ ಬಂಧಿಸಿದ್ದಾರೆ.

ಶ್ರೀನಗರ: ಪ್ರಮುಖ ಬೆಳವಣಿಗೆಯಲ್ಲಿ ಕಾಶ್ಮೀರದ ಬಾರಾಮುಲ್ಲ ಜಿಲ್ಲೆಯಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಕುಖ್ಯಾತ ಉಗ್ರ ಇಷ್ತಿಯಾಕ್ ವನಿಯನ್ನು ಕಾಶ್ಮೀರ ಪೊಲೀಸರು ಬುಧವಾರ ಬಂಧಿಸಿದ್ದಾರೆ.
ಪೊಲೀಸ್ ಮೂಲಗಳ ಪ್ರಕಾರ ಬಂಧಿತ ಇಷ್ತಿಯಾಕ್ ವನಿ ಬಾರಾಮುಲ್ಲ ಮೂಲದವನಾಗಿದ್ದು, ಈತನ ಮೂಲ ನಿವಾಸ ಗೌಸ್ ಬಾಗ್ ಪಟ್ಟಾಣ್ ನಲ್ಲಿದೆ. ಈತನ ತಂದೆ ಫಾರೂಕ್ ಅಹ್ಮದ್ ಎಂದು ಪೊಲೀಸರು ಗುರುತಿಸಿದ್ದಾರೆ. ಬಂಧಿತ ಉಗ್ರ ಇಷ್ತಿಯಾಕ್ ವನಿ ಹಿಜ್ಬುಲ್ ಉಗ್ರ ಸಂಘಟನೆಯ ಪ್ರಚಾರಕನಾಗಿ ಕಾರ್ಯ ನಿರ್ವಹಿಸುತ್ತಿದ್ದನಂತೆ. ಜಮ್ಮು ಮತ್ತು ಕಾಶ್ಮೀರದಾದ್ಯಂತ ಪಟಾಲಂ ಹೊಂದಿರುವ ಈತ ಉಗ್ರ ಸಂಘಟನೆ ಕುರಿತು ಪ್ರಚಾರ ಮಾಡಿ ಸಂಘಟನೆಗೆ ಸೇರುವಂತೆ ಯುವಕರನ್ನು ಪ್ರೋತ್ಸಾಹಿಸುತ್ತಿದ್ದ ಎಂದು ಆರೋಪಿಸಲಾಗಿದೆ.
ಪ್ರಸ್ತುತ ಈತನ ವಿರುದ್ಧ ಬಾರಾಮುಲ್ಲಾ ಪೊಲೀಸರು ಐಪಿಸಿ ಸೆಕ್ಷನ್ 13ರ (ಕಾನೂನು ಬಾಹಿರ ಚಟುವಟಿಕೆ), ಆಪಿಸಿ ಸೆಕ್ಷನ್ 506 ರ ಅಡಿಯಲ್ಲಿ ದೂರು ದಾಖಲಿಸಿಕೊಂಡು ರಹಸ್ಯ ಸ್ಥಳದಲ್ಲಿ ಈತನ ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

5 ರಾಜ್ಯಗಳಿಗೆ ರಾಜ್ಯಪಾಲರ ನೇಮಕ; ಇವರೇ ಕರ್ನಾಟಕದ ನೂತನ ರಾಜ್ಯಪಾಲರು...

ವಿಡಿಯೋ ಪ್ರಸಾರ ಮಾಡದಂತೆ ತಡೆಯಾಜ್ಞೆ ಕೋರಿ ಕೋರ್ಟ್ ಮೆಟ್ಟಿಲೇರಿದ ಮಾಜಿ ಮುಖ್ಯಮಂತ್ರಿ!

ಸ್ಯಾಂಡಲ್‌ವುಡ್‌ನಲ್ಲಿ ಮತ್ತೊಂದು ವಿಚ್ಛೇದನ: 7 ವರ್ಷದ ದಾಂಪತ್ಯಕ್ಕೆ ಅಂತ್ಯವಾಡಿದ ಕನ್ನಡದ ಕಿರುತೆರೆ ನಟಿ!

CM ಡಿಕೆಶಿ​​ ಕುರ್ತಾ ಹಿಡಿದು ಹಿಂದೆ ತಳ್ಳಿದ ರಾಹುಲ್ ಗಾಂಧಿ: ವಿಡಿಯೋ ವೈರಲ್; ಬಂಡೆಗೆ ಸಿಕ್ಕ ಮರ್ಯಾದೆ! ಫುಲ್‌ ಅನ್‌ ರೆಸ್ಪೆಕ್ಟು!

ಕರ್ನಾಟಕ ಸೇರಿ 5 ರಾಜ್ಯಗಳಿಗೆ 2 ದಿನಗಳಲ್ಲಿ ಭಾರೀ ಮಳೆ: IMD ಎಚ್ಚರಿಕೆ