ದೇಶ

'ಸುಪ್ರೀಂ' ಮೆಟ್ಟಿಲೇರಿದ ರಿಯಾನ್ ಶಾಲಾ ಆಡಳಿತ ಮಂಡಳಿ: ಬಾಲಕನ ಹತ್ಯೆ ಪ್ರಕರಣ ವರ್ಗಾವಣೆಗೆ ಮನವಿ

Manjula VN
ನವದೆಹಲಿ: 7 ವರ್ಷದ ವಿದ್ಯಾರ್ಥಿ ಹತ್ಯೆ ಪ್ರಕರಣವನ್ನು ವರ್ಗಾವಣೆ ಮಾಡುವಂತೆ ಕೋರಿ ರಿಯಾನ್ ಇಂಟರ್ ನ್ಯಾಷನಲ್ ಶಾಲಾ ಆಡಳಿತ ಮಂಡಳು ಬುಧವಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ. 
ವಿದ್ಯಾರ್ಥಿ ಹತ್ಯೆ ಪ್ರಕರಣವನ್ನು ಹರಿಯಾಣದಿಂದ ದೆಹಲಿ ನ್ಯಾಯಾಲಯಕ್ಕೆ ವರ್ಗಾಯಿಸುವಂತೆ ರಿಯಾನ್ ಇಂಟರ್ ನ್ಯಾಷನಲ್ ಶಾಲಾ ಆಡಳಿತ ಮಂಡಳಿ ಸುಪ್ರೀಂಕೋರ್ಟ್ ಬಳಿ ಮನವಿ ಮಾಡಿಕೊಂಡಿದೆ ಎಂದು ತಿಳಿದುಬಂದಿದೆ. 
ಕೆಲ ದಿನಗಳ ಹಿಂದಷ್ಟೇ ರಿಯಾನ್ ಇಂಟರ್ ನ್ಯಾಷನಲ್ ಶಾಲೆಯ ಶೌಚಾಲಯದಲ್ಲಿ 7 ವರ್ಷದ ಬಾಲಕನ ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣ ಸಾಕಷ್ಟು ಸುದ್ದಿಗೆ ಗ್ರಾಸವಾಗಿದ್ದು, ಬಾಲಕನ ಪೋಷಕರು ಶಾಲೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ತೀವ್ರವಾಗಿ ಪ್ರತಿಭಟನೆ ನಡೆಸಿದ್ದರು. ಪ್ರಕರಣ ಸಂಬಂಧ ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ಕೂಡ ಒಪ್ಪಿಗೆ ನೀಡಿತ್ತು, 

ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿರುವ ಶಾಲಾ ಮುಖ್ಯಸ್ಥ ಫ್ರಾನ್ಸಿಸ್ ಥಾಮಸ್ ಅವರು, ಆರೋಪಿಗಳನ್ನು ಪ್ರತಿನಧಿಸುವ ವಕೀಲರನ್ನು ನಿಷೇಧಿಸಲಾಗುತ್ತಿದೆ ಎಂದು ಆರೋಪ ಮಾಡಿ, ಸುಪ್ರೀಂ ಬಳಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಸ್ವೀಕರಿಸಿದ ಸುಪ್ರೀಂಕೋರ್ಟ್ ವಿಚಾರಣೆ ನಡೆಸುವುದಾಗಿ ತಿಳಿಸಿತ್ತು. 

ಇನ್ನು ಪ್ರಕರಣ ಸಂಬಂಧ ಬಾಲಕನನ್ನು ಹತ್ಯೆ ಮಾಡಿದ ಆರೋಪಿ, ಶಾಲಾ ಬಸ್ ನಿರ್ವಾಹಕ ಅಶೋಕ್ ನನ್ನು ಬಂಧನಕ್ಕೊಳಪಡಿಸಲಾಗಿದ್ದು, 6 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ. 

ಪ್ರಕರಣ ಸಂಬಂಧ ಹತ್ಯೆಗೀಡಾದ ವಿದ್ಯಾರ್ಥಿ ಮೇಲೆ ಯಾವುದೇ ರೀತಿಯ ಲೈಂಗಿಕ ದೌರ್ಜನ್ಯಗಳು ನಡೆದಿಲ್ಲ ಎಂದು ಮರಣೋತ್ತರ ಪರೀಕ್ಷಾ ವರದಿಯಲ್ಲಿ ತಿಳಿಸಲಾಗಿತ್ತು. 

ಬಾಲಕನ ನರಗಳನ್ನು ಕತ್ತರಿಸಿದ್ದರಿಂದಾಗಿ ದಾಳಿ ವೇಳೆ ವೇಳೆ ಆತನನಿಗೆ ಕಿರುಚಲು ಸಾಧ್ಯವಾಗಿಲ್ಲ ಎಂದು ವರದಿಗಳು ನಿನ್ನೆಯಷ್ಟೇ ದೃಢಪಡಿಸಿದ್ದವು. 

ಮೂಲಗಳ ಪ್ರಕಾರ, ಬಾಲಕ ಕೊಲೆಯಾಗಿದ್ದ ಶೌಚಾಲಯದಲ್ಲಿ ಆರೋಪಿ ಚಾಲಕ ಹಸ್ತಮೈಥುನ ಮಾಡಿಕೊಳ್ಳುತ್ತಿದ್ದುದ್ದನ್ನು ತಾವು ನೋಡಿದ್ದೆವು ಎಂದು ಅದೇ ಶಾಲೆಯ ಇಬ್ಬರು ವಿದ್ಯಾರ್ಥಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಹೀಗಾಗಿ ಚಾಲಕನನ್ನು ಅದೇ ಸ್ಥಿತಿಯಲ್ಲಿ ನೋಡಿದ್ದಕ್ಕಾಗಿ ಬಾಲಕನನ್ನು ಹತ್ಯೆ ಮಾಡಿರುವುದಾಗಿ ತಿಳಿದುಬಂದಿದೆ. 
SCROLL FOR NEXT