ಶಿಂಜೋ ಅಬೆ 
ದೇಶ

ಭಾರತ-ಜಪಾನ್ ಆತ್ಮೀಯತೆ: ಶಿಂಜೋ ಅಬೆ ಏನು ತಿನ್ನಬೇಕು, ಎಲ್ಲಿಗೆ ಭೇಟಿ ನೀಡಬೇಕು ಎಂಬುದು ಮೋದಿ ಆಯ್ಕೆ!

ಪ್ರಧಾನಿ ನರೇಂದ್ರ ಮೋದಿ ಹಾಗೂ ಜಪಾನ್ ಪ್ರಧಾನಿ ಶಿಂಜೋ ಅಬೆ ಅತ್ಯಂತ ಆತ್ಮೀಯತೆಯನ್ನು ಹೊಂದಿದ್ದಾರೆ ಎಂಬುದು ಅಹಮದಾಬಾದ್ ನಲ್ಲಿ ನಡೆದ ರೋಡ್ ಶೋ, ಸಬರ್ಮತಿ ಆಶ್ರಮಕ್ಕೆ ಭೇಟಿ...

ಅಹಮದಾಬಾದ್: ಪ್ರಧಾನಿ ನರೇಂದ್ರ ಮೋದಿ ಹಾಗೂ ಜಪಾನ್ ಪ್ರಧಾನಿ ಶಿಂಜೋ ಅಬೆ ಅತ್ಯಂತ ಆತ್ಮೀಯತೆಯನ್ನು ಹೊಂದಿದ್ದಾರೆ ಎಂಬುದು ಅಹಮದಾಬಾದ್ ನಲ್ಲಿ ನಡೆದ ರೋಡ್ ಶೋ, ಸಬರ್ಮತಿ ಆಶ್ರಮಕ್ಕೆ ಭೇಟಿ ಸೇರಿದಂತೆ ಶಿಂಜೋ ಅಬೆ ಅವರ ಭಾರತ ಭೇಟಿಯ ಹಲವು ಸಂದರ್ಭಗಳಲ್ಲಿ ಸ್ಪಷ್ಟವಾಗುತ್ತಿದೆ.  
ಜಪಾನ್ ಪ್ರಧಾನಿ ಶಿಂಜೋ ಅಬೆ, ಪ್ರಧಾನಿ ನರೇಂದ್ರ ಮೋದಿ ಅವರಂತೆಯೇ ಮೋದಿ ಜಾಕೆಟ್ ಎಂದೇ ಪ್ರಸಿದ್ಧವಾಗಿರುವ ಕುರ್ತಾ-ಪೈಜಾಮ ಧರಿಸಿ ಗಮನ ಸೆಳೆದಿದ್ದೂ ಸಹ ಅವರಿಬ್ಬರಲ್ಲಿರುವ ಆತ್ಮೀಯತೆಯನ್ನು ತೋರುತ್ತದೆ. ಅಷ್ಟೇ ಅಲ್ಲ. ಜಪಾನ್ ಪ್ರಧಾನಿ ಭಾರತಕ್ಕೆ ಬಂದಿಳಿಯುತ್ತಿದ್ದಂತೆಯೇ ವಿಮಾನ ನಿಲ್ದಾಣದಲ್ಲಿ ಅತ್ಮೀಯ ಅಪ್ಪುಗೆಯಿಂದ ಬರಮಾಡಿಕೊಂಡಿದ್ದ ಮೋದಿಯೇ, ಶಿಂಜೋ ಅಬೆ ಎಲ್ಲಿ ಉಳಿದುಕೊಳ್ಳಬೇಕು, ಏನನ್ನು ತಿನ್ನಬೇಕು, ಎಲ್ಲೆಲ್ಲಿಗೆ ಭೇಟಿ ನೀಡಬೇಕೂ ಎಂಬುದನ್ನೂ ಆಯ್ಕೆ ಮಾಡಿದ್ದು, ಜಪಾನ್ ಪ್ರಧಾನಿಗಾಗಿ ಮೋದಿಯ ಆಯ್ಕೆಗಳು ಈಗ ಸದ್ಯಕ್ಕೆ ಅತ್ಯಂತ ಹೆಚ್ಚು ಗಮನ ಸೆಳೆದಿರುವ ವಿಷಯವಾಗಿದೆ. 
ಜಪಾನ್ ಪ್ರಧಾನಿಯ ಭೇಟಿಯನ್ನು 2014 ರಲ್ಲಿ ಭಾರತಕ್ಕೆ ಆಗಮಿಸಿದ್ದ ಚೀನಾ ಅಧ್ಯಕ್ಷ ಕ್ಸೀ ಜಿನ್ ಪಿಂಗ್ ಅವರ ಭೇಟಿಗೆ ಹೋಲಿಕೆ ಮಾಡಲಾಗುತ್ತಿದ್ದು, ಆಗಲೂ ಭಾರತಕ್ಕೆ ಬಂದಿಳಿಯುತ್ತಿದ್ದಂತೆಯೇ ಗುಜರಾತ್ ಗೆ ತೆರಳಿದ್ದ ಕ್ಸೀ ಜಿನ್ ಪಿಂಗ್ ಮತ್ತು ಮೋದಿ ಅವರ ಆತ್ಮೀಯತೆಯ ವಿಶೇಷತೆಗಳು ಇದೇ ರೀತಿ ಸುದ್ದಿಯಾಗಿದ್ದವು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?