ಕಮಲ್ ಹಾಸನ್ 
ದೇಶ

ಈ ತಿಂಗಳ ಅಂತ್ಯಕ್ಕೆ ನಟ ಕಮಲ್ ಹಾಸನ್ ರಾಜಕೀಯ ಪಕ್ಷ ಘೋಷಣೆ

ತಮಿಳುನಾಡು ರಾಜಕೀಯ ಬಿಕ್ಕಟ್ಟು ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿರುವ ಸಂದರ್ಭದಲ್ಲೇ ತಮಿಳು ಮೆಗಾ ಸ್ಟಾರ್ ಕಮಲ್ ....

ತಮಿಳುನಾಡು ರಾಜಕೀಯ ಬಿಕ್ಕಟ್ಟು ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿರುವ ಸಂದರ್ಭದಲ್ಲೇ ತಮಿಳು ಮೆಗಾ ಸ್ಟಾರ್ ಕಮಲ್ ಹಾಸನ್ ಅವರು ರಾಜಕೀಯ ರಂಗ ಪ್ರವೇಶವನ್ನು ಶುಕ್ರವಾರ ಖಚಿತಪಡಿಸಿದ್ದಾರೆ. ಈ ಮೂಲಕ ರಾಜಕೀಯ ಪ್ರವೇಶ ಕುರಿತ ವದಂತಿಗಳಿಗೆ ತೆರೆ ಎಳೆದಿದ್ದಾರೆ. 
ತಮ್ಮದೇ ರಾಜಕೀಯ ಪಕ್ಷ ರಚನೆ ಮಾಡುವ ಮೂಲಕ ಈ ತಿಂಗಳ ಅಂತ್ಯಕ್ಕೆ ಅಧಿಕೃತವಾಗಿ ರಾಜಕೀಯ ಪ್ರವೇಶಿಸುವುದಾಗಿ ಕಮಲ್ ಹಾಸನ್ ಅವರು ಖಾಸಗಿ ಸುದ್ದಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಖಚಿತಪಡಿಸಿದ್ದಾರೆ.
ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕೀಯ ನಾಯಕ ವಿರುದ್ಧ ತೀವ್ರ ವಾಗ್ದಾಳಿ ನಡೆಸುತ್ತಿದ್ದ ಕಮಲ್ ಹಾಸನ್ ಅವರು, ಇಂದು ಬೆಳಗ್ಗೆಯಷ್ಟೇ ಎಐಎಡಿಎಂಕೆ ಬಂಡಾಯ ಶಾಸಕರ ವಿರುದ್ಧ ವಾಗ್ದಾಳಿ ನಡೆಸಿದ್ದರು. ಕೆಲಸ ಮಾಡಿದ್ರೆ ಸಂಬಳ ಇಲ್ಲದಿದ್ದರೆ ಇಲ್ಲ ಎಂಬ ನಿಯಮ ಕೇವಲ ಸರ್ಕಾರಿ ನೌಕರರಿಗೆ ಏಕೆ? ಕುದುರೆ ವ್ಯಾಪಾರ ನಡೆಸುವ, ಐಶಾರಾಮಿ ರೆಸಾರ್ಟ್ ಗಳಲ್ಲಿ ತಂಗಿರುವ ಶಾಸಕರಿಗೆ ಏಕಿಲ್ಲ? ಎಂದು ಕಮಲ್ ಹಾಸನ್ ಅವರು ಟ್ವೀಟರ್ ಮೂಲಕ ಪ್ರಶ್ನಿಸಿದ್ದರು,.
ಇನ್ನು ಮತ್ತೊಂದು ಖಾಸಗಿ ಮಾಧ್ಯಮಕ್ಕೆ ನೀಡಿದ ಸಂದರ್ಶನದಲ್ಲಿ, ತಮಿಳುನಾಡಿನಲ್ಲಿ ಹೊಸ ರಾಜಕೀಯ ಪಕ್ಷ ಕಟ್ಟುವ ಕುರಿತು ಗಂಭೀರ ಚಿಂತನೆಯಲ್ಲಿ ತೊಡಗಿಕೊಂಡಿದ್ದೇನೆ. ಆದರೆ, ಇದು ನನ್ನ ಆಯ್ಕೆಯಲ್ಲ. ಅನಿವಾರ್ಯ. ತಮಿಳುನಾಡು ರಾಜಕಾರಣ ಬದಲಾಗಬಹುದು ಮತ್ತು ನಾನು ಆ ಬದಲಾವಣೆಯನ್ನು ತರಲು ಬಯಸಿದ್ದೇನೆಂದು ಎಂದು ಹೇಳಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

BBK 13: ಗಾನವಿ ಹೇಳಿಕೆಗೆ ನೊಂದು ಗಗನ್ ತಾಯಿಗೆ ತಾನೇ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!