ಮಥುರಾ: ನಾಲ್ಕು ದಿನಗಳ ಹಿಂದೆ ಮಥುರಾ ಸಮೀಪದ ಬರ್ಸಾನದ ಶ್ರೀಜಿ ದೇವಸ್ಥಾನದಲ್ಲಿ ಕಾಮುಕರಿಬ್ಬರು ತನ್ನ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವುದಾಗಿ 45 ವರ್ಷದ ಸಾಧ್ವಿಯೊಬ್ಬರು ಆರೋಪಿಸಿದ್ದಾರೆ ಎಂದು ಶುಕ್ರವಾರ ಪೊಲೀಸರು ತಿಳಿಸಿದ್ದಾರೆ.
ಸೆಪ್ಟೆಂಬರ್ 11ರಂದು ರಾತ್ರಿ ಬರ್ಸಾನದ ಶ್ರೀಜಿ ದೇವಸ್ಥಾನದಲ್ಲಿ ಈ ಘಟನೆ ನಡೆದಿದ್ದು, ದೇವಸ್ಥಾನದ ಬಾಲ್ಕಾನಿಯಲ್ಲಿ ಮಲಗಿದ್ದ ಸಾಧ್ವಿಯನ್ನು ದೇವಸ್ಥಾನದ ಕಾವಲುಗಾರ ಹಾಗೂ ಮತ್ತೊಬ್ಬ ವ್ಯಕ್ತಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿ ಮಹಿಳೆ ಪೊಲೀಸರಿಗೆ ದೂರು ನೀಡಿದ್ದಾರೆ.
ಮಹಿಳೆಯ ದೂರಿನ ಆಧಾರದ ಮೇಲೆ ಎಫ್ಐಆರ್ ದಾಖಲಿಸಲಾಗಿದ್ದು, ಆರೋಪಿಗಳ ಪತ್ತೆಗಾಗಿ ಎರಡು ತಂಡಗಳನ್ನು ರಚಿಸಲಾಗಿದೆ ಎಂದು ಮಥುರಾ ಗ್ರಾಮೀಣ ಪೊಲೀಸ್ ವರಿಷ್ಠಾಧಿಕಾರಿ ಆದಿತ್ಯ ಕುಮಾರ್ ಶುಕ್ಲಾ ಅವರು ಹೇಳಿದ್ದಾರೆ.
ಸತ್ರಸ್ತ ಮಹಿಳೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿರುವುದಾಗಿ ಅವರು ತಿಳಿಸಿದ್ದಾರೆ.