ಭಾರತೀಯ ಸೇನೆ 
ದೇಶ

ಉಗ್ರ ಅಬು ಇಸ್ಮಾಯಿಲ್ ಮುಖದ ಮೇಲೆ ಕಾಲಿಟ್ಟಿರುವ ಯೋಧನ ವಿಡಿಯೋ ವೈರಲ್; ತನಿಖೆಗೆ ಆದೇಶ

ಅಮರನಾಥ ಯಾತ್ರಿಕರ ಮೇಲಿನ ದಾಳಿ ಪ್ರಕರಣ ಪ್ರಮುಖ ರುವಾರಿಯಾಗಿದ್ದ ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯ ಕಮಾಂಡರ್ ಅಬು ಇಸ್ಮಾಯಿಲ್ ಹತ್ಯೆ ನಂತರ...

ನವದೆಹಲಿ: ಅಮರನಾಥ ಯಾತ್ರಿಕರ ಮೇಲಿನ ದಾಳಿ ಪ್ರಕರಣ ಪ್ರಮುಖ ರುವಾರಿಯಾಗಿದ್ದ ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯ ಕಮಾಂಡರ್ ಅಬು ಇಸ್ಮಾಯಿಲ್ ಹತ್ಯೆ ನಂತರ ಆತನ ಮುಖದ ಮೇಲೆ ಕಾಲಿಟ್ಟಿರುವ ಭಾರತೀಯ ಯೋಧನ ವಿಡಿಯೋ ಇದೀಗ ವೈರಲ್ ಆಗಿದೆ. 
ಉಗ್ರನ ಮುಖದ ಮೇಲೆ ಭಾರತೀಯ ಯೋಧ ಕಾಲಿಟ್ಟಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು ಈ ಬಗ್ಗೆ ಭಾರತೀಯ ಸೇನೆ ತನಿಖೆಗೆ ಆದೇಶಿಸಿದೆ. 
ಲಷ್ಕರ ಇ ತೊಯ್ಬಾ ಉಗ್ರ ಸಂಘಟನೆಯ ಅಬು ಇಸ್ಮಾಯಿಲ್ ಮತ್ತು ಅಬು ಖಾಸಿಮ್ ನನ್ನು ಭಾರತೀಯ ಸೇನೆ ಹತ್ಯೆಗೈದಿತ್ತು. ನಂತರ ಯೋಧ ಆತನ ಮುಖದ ಮೇಲೆ ಕಾಲಿಟ್ಟಿದ್ದ 14 ಸೆಕೆಂಡುಗಳ ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಪ್ರಕರಣ ಕುರಿತಂತೆ ಭಾರತೀಯ ಸೇನೆ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದೆ. 
ಉಗ್ರ ಅಬು ಇಸ್ಮಾಯಿಲ್ ಕಳೆದ ತಿಂಗಳು ಅಮರನಾಥ ಯಾತ್ರಿಕರ ಮೇಲೆ ದಾಳಿ ನಡೆಸಿದ್ದು ಇದರಲ್ಲಿ ಎಂಟು ಮಂದಿ ಯಾತ್ರಾತ್ರಿಕರು ಸಾವನ್ನಪ್ಪಿದ್ದು 20 ಮಂದಿ ಗಾಯಗೊಂಡಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ಸಿಎಂ ಸ್ಥಾನಕ್ಕೆ ರಾಜೀನಾಮೆ?, ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

SCROLL FOR NEXT