ಮತ್ತೊಂದು ಎಡವಟ್ಟು: ಅರ್ಜನ್ ಸಿಂಗ್ ಅವರನ್ನು ಏರ್ ಮಾರ್ಷಲ್ ಎಂದ ರಾಹುಲ್ ಗಾಂಧಿ
ಭಾರತೀಯ ವಾಯುಪಡೆಯ ಮೊದಲ ಸರ್ವಶ್ರೇಷ್ಠ ಮಾರ್ಷಲ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದ ಅರ್ಜನ್ ಸಿಂಗ್ ಅವರ ಸಾವಿಗೆ ಸಂತಾಪ ಸೂಚಿಸುವ ಭರತದಲ್ಲಿ ರಾಹುಲ್ ಗಾಂಧಿ ಎಡವಟ್ಟು ಮಾಡಿಕೊಂಡಿದ್ದಾರೆ.
ನವದೆಹಲಿ: ಭಾರತೀಯ ವಾಯುಪಡೆಯ ಮೊದಲ ಸರ್ವಶ್ರೇಷ್ಠ ಮಾರ್ಷಲ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದ ಅರ್ಜನ್ ಸಿಂಗ್ ಅವರ ಸಾವಿಗೆ ಸಂತಾಪ ಸೂಚಿಸುವ ಭರತದಲ್ಲಿ ರಾಹುಲ್ ಗಾಂಧಿ ಎಡವಟ್ಟು ಮಾಡಿಕೊಂಡಿದ್ದಾರೆ.
ಟ್ವಿಟರ್ ನಲ್ಲಿ ಅರ್ಜನ್ ಸಿಂಗ್ ಅವರ ಸಾವಿಗೆ ಸಂತಾಪ ಸೂಚಿಸಿರುವ ರಾಹುಲ್ ಗಾಂಧಿ, ಭಾರತೀಯ ವಾಯುಪಡೆಯ ಮಾರ್ಷಲ್ ನ್ನು ಏರ್ ಮಾರ್ಷಲ್ ಎಂದು ಕರೆದಿದ್ದಾರೆ. ಶ್ರೇಷ್ಠ ಯೋಧ ಏರ್ ಮಾರ್ಷಲ್ ಅರ್ಜನ್ ಸಿಂಗ್ ಅವರ ಸಾವು ತುಂಬಲಾರದ ನಷ್ಟ ಎಂದು ಟ್ವೀಟ್ ಮಾಡಿದ್ದಾರೆ.
ವಾಯುಪಡೆಯ ಮಾರ್ಷಲ್ 5 ಸ್ಟಾರ್ ಶ್ರೇಣಿಯಾಗಿದ್ದರೆ, ಏರ್ ಮಾರ್ಷಲ್ 3 ಸ್ಟಾರ್ ಶ್ರೇಣಿಯ ಹುದ್ದೆಯಾಗಿದೆ. ತಪ್ಪು ತಿಳಿಯುತ್ತಿದ್ದಂತೆಯೇ ರಾಹುಲ್ ಗಾಂಧಿ ಟ್ವೀಟ್ ಖಾತೆಯಲ್ಲಿ ತಪ್ಪನ್ನು ತಿದ್ದಲಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.