ಸಾಂದರ್ಭಿಕ ಚಿತ್ರ 
ದೇಶ

ಬಿಹಾರದಲ್ಲಿ ಸೋಲಾರ್ ವಿದ್ಯುತ್ ಘಟಕ ಸ್ಫೋಟಿಸಿದ ನಕ್ಸಲರು

ಬಿಹಾರದ ಗಯಾ ಜಿಲ್ಲೆಯಲ್ಲಿ ನಕ್ಸಲರು ಸೋಲಾರ್ ವಿದ್ಯುತ್ ಘಟಕವೊಂದನ್ನು ಸ್ಫೋಟಿಸಿದ್ದು, ಕಂಟ್ರೋಲ್ ರೂಂ ಹಾಗೂ ಕಾರ್ಮಿಕರ ವಸತಿ....

ಗಯಾ: ಬಿಹಾರದ ಗಯಾ ಜಿಲ್ಲೆಯಲ್ಲಿ ನಕ್ಸಲರು ಸೋಲಾರ್ ವಿದ್ಯುತ್ ಘಟಕವೊಂದನ್ನು ಸ್ಫೋಟಿಸಿದ್ದು, ಕಂಟ್ರೋಲ್ ರೂಂ ಹಾಗೂ ಕಾರ್ಮಿಕರ ವಸತಿ ಕಟ್ಟಡಕ್ಕೆ ಹಾನಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸರಿಯಾಗಿ ಹಣ ನೀಡದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ನಕ್ಸಲರು ಐಇಡಿ ಬಳಸಿ ಟಾಟಾ ಪವರ್ ಮಾಲೀಕತ್ವದ ಸೋಲಾರ್ ವಿದ್ಯುತ್ ಘಟಕವನ್ನು ನಿನ್ನೆ ರಾತ್ರಿ ಸ್ಫೋಟಿಸಿದ್ದಾರೆ ಎಂದು ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ಕುಮಾರ್ ಸಿಂಗ್ ಅವರು ತಿಳಿಸಿದ್ದಾರೆ.
ಸ್ಫೋಟದಿಂದಾಗಿ ಕಂಟ್ರೋಲ್ ರೂಂ ಮತ್ತು ಕಾರ್ಮಿಕ ವಸತಿ ಕಟ್ಟಡ ಸುಟ್ಟು ಕರಕಲಾಗಿವೆ ಎಂದು ಅವರು ಹೇಳಿದ್ದಾರೆ.
ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದು, ಐಇಡಿ ಬಾಂಬ್ ಸ್ಫೋಟಿಸಿದ ದುಷ್ಕರ್ಮಿಗಳಿಗಾಗಿ ಶೋಧ ನಡೆದಿದೆ ಎಂದು ಸಿಂಗ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ಹೆನ್ರಿ ಕಗನ್, ಕೆನ್ಸೊ ಸೊವೈಗೆ 2026ರ ರಸಾಯನಶಾಸ್ತ್ರದ ನೊಬೆಲ್ ಪ್ರಶಸ್ತಿ

'ನಾನು ಕ್ಯಾಬ್‌ನಲ್ಲಿ ಓಡಾಡೋ ಹುಡುಗಿ ಕಣ್ರೋ.. ಹೋಗ್ಲಿ ಪಾಪ ಅಂತಾ ಬಸ್`ನಲ್ಲಿ ಬಂದೆ': MTC ಬಸ್‌ನಲ್ಲಿ ಕುಡಿದ ಮತ್ತಿನಲ್ಲಿ ಯುವತಿ ರಂಪಾಟ, Video ವೈರಲ್

ಅಮೆರಿಕ ಸೇನೆಯ ಮಾಜಿ ಮೇಜರ್‌ಗೆ ಶೂಟ್ ಮಾಡುವ ಮೂಲಕ ಮರಣದಂಡನೆ ಶಿಕ್ಷೆ: 65 ವರ್ಷಗಳಲ್ಲಿ ಇದೇ ಮೊದಲು!