ಸಾಂದರ್ಭಿಕ ಚಿತ್ರ 
ದೇಶ

ಸಿಕರ್: ವಿದ್ಯಾರ್ಥಿನಿ ಮೇಲೆ ನಿರಂತರ ಅತ್ಯಾಚಾರ; ಶಾಲೆಯ ನಿರ್ದೇಶಕ, ಶಿಕ್ಷಕ ಬಂಧನ

ಶಾಲೆಯಲ್ಲಿ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯದ ಮತ್ತೊಂದು ಪ್ರಕರಣ ರಾಜಸ್ತಾನದ ಸಿಕರ್ ಜಿಲ್ಲೆಯ...

ಸಿಕರ್(ರಾಜಸ್ತಾನ): ಶಾಲೆಯಲ್ಲಿ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯದ ಮತ್ತೊಂದು ಪ್ರಕರಣ ರಾಜಸ್ತಾನದ ಸಿಕರ್ ಜಿಲ್ಲೆಯ ಅಜಿತ್ ಗರ್ ಪ್ರದೇಶದಲ್ಲಿ ಜಂತ ಬಾಲ್ ನಿಕೇತನ ಶಾಲೆಯಲ್ಲಿ ನಡೆದಿದೆ.
ಪ್ರಕರಣಕ್ಕೆ ಸಂಬಂಧಪಟ್ಟಂತೆ ಶಾಲೆಯ ನಿರ್ದೇಶಕ ಜಗದೀಶ್ ಮತ್ತು ಶಿಕ್ಷಕ ಜಗತ್ ಅವರನ್ನು ಅಜೀತ್ ಗರ್ ಪೊಲೀಸರು ಬಂಧಿಸಿದ್ದಾರೆ.
ಕಳೆದ ಹಲವು ತಿಂಗಳುಗಳಿಂದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಆಕೆಯನ್ನು ಗರ್ಭವತಿಯನ್ನಾಗಿ ಕೂಡ ಮಾಡಿದ್ದರು. ನಂತರ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಗರ್ಭಪಾತ ಮಾಡಿಸಿದ್ದರು.
ನಂತರ ಬಾಲಕಿಗೆ ವಿಪರೀತ ರಕ್ತ  ಸ್ರಾವವಾಗಲು ಆರಂಭವಾಯಿತು. ಬಾಲಕಿಯನ್ನು ಚಿಕಿತ್ಸೆಗೆಂದು ಆಕೆಯ ಪೋಷಕರು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾಗಲೇ ಅವರಿಗೆ ಅತ್ಯಾಚಾರವೆಸಗಿ ಗರ್ಭವತಿಯಾಗಿ ತಮ್ಮ ಮಗಳನ್ನು ಗರ್ಭಪಾತ ಮಾಡಿಸಿರುವುದು ಬೆಳಕಿಗೆ ಬಂದಿದೆ.
ಬಾಲಕಿಗೆ ಇದೀಗ ಜೈಪುರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು ದೇಹ ಸ್ಥಿತಿ ಚಿಂತಾಜನಕವಾಗಿದೆ.
ಪೊಲೀಸ್ ಸೂಪರಿಂಟೆಂಡೆಂಟ್ ಕುಶಾಲ್ ಸಿಂಗ್ ಕಿಂಚಿ ನೇತೃತ್ವದ ತಂಡ ತನಿಖೆ ಕೈಗೆತ್ತಿಕೊಂಡಿದೆ. ಹೆಚ್ಚಿನ ವಿವರಗಳು ತಿಳಿದುಬಂದಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!

ಸರ್ಕಾರವನ್ನು ಅಸ್ಥಿರಗೊಳಿಸುವ ಪಿತೂರಿ: 'ಸ್ಟಿಂಗ್ ಆಪರೇಷನ್' ಕುರಿತು ಸಿಎಂ DKS ಎಚ್ಚರಿಕೆ ಕರೆಗೆ ಸಚಿವರಿಂದ ಬೆಂಬಲ

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ಚಿಕ್ಕಣ್ಣ, ಯಶಸ್ ಸೂರ್ಯಗೆ ಬಿಗ್ ಶಾಕ್‌; ಇಬ್ಬರಿಗೂ ಕೋರ್ಟ್ ಸಮನ್ಸ್