ಡೇರಾ ಸಚ್ಚಾ ಮುಖ್ಯಸ್ಥ ರಾಮ್ ರಹೀಂ ದತ್ತುಪುತ್ರಿ ಹನಿಪ್ರೀತ್ 
ದೇಶ

ನೇಪಾಳದಲ್ಲಿ ಹನಿಪ್ರೀತ್ ಸುತ್ತಾಟದ ಸುಳಿವು: ತೀವ್ರ ಶೋಧ

ಅತ್ಯಾಚಾರ ಪ್ರಕರಣದಲ್ಲಿ ದೋಷಿ ಎಂದು ಸಾಬೀತಾದ ಬಳಿಕ ಜೈಲುಪಾಲಾಗಿರುವ ಡೇರಾ ಸಚ್ಚಾ ಮುಖ್ಯಸ್ಥ ರಾಮ್ ರಹೀಂ ದತ್ತುಪುತ್ರಿ ಹನಿಪ್ರೀತ್ ಕಳೆದವಾರ ನೇಪಾಳದ ಮಹೇಂದ್ರ ನಗರದಲ್ಲಿ ಕಾಣಿಸಿಕೊಂಡಿದ್ದಾಳೆಂದು...

ಕಠ್ಮಂಡು: ಅತ್ಯಾಚಾರ ಪ್ರಕರಣದಲ್ಲಿ ದೋಷಿ ಎಂದು ಸಾಬೀತಾದ ಬಳಿಕ ಜೈಲುಪಾಲಾಗಿರುವ ಡೇರಾ ಸಚ್ಚಾ ಮುಖ್ಯಸ್ಥ ರಾಮ್ ರಹೀಂ ದತ್ತುಪುತ್ರಿ ಹನಿಪ್ರೀತ್ ಕಳೆದವಾರ ನೇಪಾಳದ ಮಹೇಂದ್ರ ನಗರದಲ್ಲಿ ಕಾಣಿಸಿಕೊಂಡಿದ್ದಾಳೆಂದು ವರದಿಗಳಿಂದ ತಿಳಿದುಬಂದಿದೆ. 
ತಲೆಮರೆಸಿಕೊಂಡಿರುವ ಹನಿಪ್ರೀತ್ ನೇಪಾಳ ನೋಂದಣಿ ನಂಬರ್ ಇರುವ ವಾಹನದಲ್ಲಿ ಇತರ ಮೂವರ ಜೊತೆ ಭಾನುವಾರ ಸುತ್ತಾಟ ನಡೆಸಿದ್ದಳು ಎಂದು ಹರಿಯಾಣ ಪೊಲೀಸ್ ಮೂಲಗಳು ತಿಳಿಸಿವೆ. 
ಒಂದು ವಾರ ಆಕೆ ಮಹೇಂದ್ರನಗರ್ ನಲ್ಲಿಯೇ ವಾಸವಾಗಿದ್ದಳು. ಗುರುತು ಸಿಗದೇ ಇರಲಿ ಎಂಬ ಕಾರಣಕ್ಕಾಗಿ ತನ್ನ ವೇಷಭೂಷಣಗಳನ್ನು ಬದಲಿಸಿಕೊಂಡಿರುವ ಸಾಧ್ಯತೆಗಳಿವೆಎಂದು ವರದಿಗಳು ತಿಳಿಸಿವೆ. 
ಅತ್ಯಾಚಾರ ಪ್ರಕರಣದಲ್ಲಿ ಗುರ್ಮಿತ್ ರಾಮ್ ರಹೀಮ್ ದೋಷಿ ಎಂದು ಸಾಬೀತಾದ ಬಳಿಕ ನ್ಯಾಯಾಲಯ ತೀರ್ಪು ಪ್ರಕಟಿಸಿತ್ತು. ಈ ವೇಳೆ ಗುರ್ಮಿತ್ ಬೆಂಬಲಿಗರು ಪಂಚಕುಲದಲ್ಲಿ ಹಿಂಸಾಚಾರ ನಡೆಸಿದ್ದರು. ಪರಿಣಾಮ 41 ಮಂದಿ ಸಾವನ್ನಪ್ಪಿ, 250ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. 
ಗುರ್ಮಿತ್ ಬಂಧನದ ವೇಳೆ ಆತನನ್ನು ಅಪಹರಣ ಮಾಡಲು ಡೇರಾ ಗೂಂಡಾಗಳು ಯೋಜನೆ ರೂಪಿಸಿದ್ದರು. ಈ ಯೋಜನೆಯಲ್ಲಿ ಹನಿಪ್ರೀತ್ ಕೈವಾಡ ಕೂಡ ಇತ್ತು ಎಂಬ ಆರೋಪಗಳು ಕೇಳಿ ಬಂದಿದ್ದವು. ಈ ಹಿನ್ನಲೆಯಲ್ಲಿ ಆಕೆಯ ಮೇಲೆ ಪ್ರಕರಣ ದಾಖಲಾಗಿತ್ತು. ಸೆಪ್ಟೆಂಬರ್ 1 ರಂದು ಹನಿಪ್ರೀತ್ ವಿರುದ್ಧ ಹರಿಯಾಣ ಪೊಲೀಸರು ಲುಕ್ ಔಟ್ ನೋಟಿಸ್ ಜಾರಿ ಮಾಡಿದ್ದರು. ಇದಾದ ಬಳಿಕ ಹನಿಪ್ರೀತ್ ತಲೆಮರೆಸಿಕೊಂಡಿದ್ದಾಳೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಯೋತ್ಪಾದಕ ದಾಳಿ ವಿಫಲಗೊಳಿಸಿದ ಭಾರತೀಯ ಪೈಲಟ್‌ಗೆ Israel ಅತ್ಯುನ್ನತ ಗೌರವ: ಸ್ವಾತಂತ್ರ್ಯ ದಿನಾಚರಣೆಗೆ ಪ್ರಧಾನಿ ಮೋದಿ, ಕ್ಯಾಪ್ಟನ್ ಸ್ಮಿತ್‌ಗೆ ಆಹ್ವಾನ..!

4 IAS ಅಧಿಕಾರಿಗಳ ವರ್ಗಾವಣೆ ಮಾಡಿ ಸರ್ಕಾರ ಆದೇಶ; ಯಾರಿಗೆಲ್ಲಾ ಬದಲಾವಣೆ

ಆಧಾರ ರಹಿತ ಆರೋಪ ಸರಿಯಲ್ಲ, ‘ದಾಖಲೆ ತೋರಿಸಿ, ಜಮೀನನ್ನೇ ನಿಮ್ಮ ಕುಟುಂಬಕ್ಕೆ ಕೊಡ್ತೀನಿ; HDK NICE ಆರೋಪಕ್ಕೆ ಸಚಿವ ಬಾಲಕೃಷ್ಣ ತಿರುಗೇಟು

SIR ಅಕ್ರಮಗಳ ಕುರಿತು ರಾಜ್ಯದಿಂದ ಪ್ರತ್ಯೇಕ ತನಿಖೆ ಇಲ್ಲ: CM ಡಿ.ಕೆ. ಶಿವಕುಮಾರ್ ಸ್ಪಷ್ಟನೆ

ಪಾಕಿಸ್ತಾನದ ಉನ್ನತ ರಾಜತಾಂತ್ರಿಕರಿಗೆ ಭಾರತದ ಸಮನ್ಸ್; ಗಡಿಯಾಚೆಗಿನ ಒಳನುಸುಳುವಿಕೆಯ ವಿರುದ್ಧ ಪ್ರತಿಭಟನೆ