ಕಡಪಾ: ಶಾಲಾ ಬಸ್ ವೊಂದಕ್ಕೆ ವ್ಯಾನ್ ಡಿಕ್ಕಿ ಹೊಡೆದ ಪರಿಣಾಮ ನಾಲ್ಕು ವರ್ಷದ ಎಲ್ ಕೆಜಿ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಮತ್ತು ಇತರೆ 11 ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಬುಧವಾರ ಆಂಧ್ರಪ್ರದೇಶದ ಕಡಪಾ ಜಿಲ್ಲೆಯ ದವ್ವೂರ್ ಮಂಡಲದ ಮೀರ್ ಮೀರ್ ಜಂಗನಪಲ್ಲಿಯಲ್ಲಿ ನಡೆದಿದೆ.
ದವ್ವೂರ್ ಮಂಡಲದ ಗುಡಿಪಾಡುನಲ್ಲಿರುವ ಶ್ರೀ ಗುರು ಶಂಕರಾಚಾರ್ಯ ಪ್ರೌಢ ಶಾಲೆಗೆ ಸೇರಿದ ಬಸ್ ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಪಘಾತದಲ್ಲಿ ಮೃತಪಟ್ಟ ಎಲ್ ಕೆಜಿ ವಿದ್ಯಾರ್ಥಿ ನವನೀಶ್ವರ್ ರೆಡ್ಡಿ ಎಂದು ಗುರುತಿಸಲಾಗಿದೆ.
ಗಾಯಗೊಂಡ ವಿದ್ಯಾರ್ಥಿಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಓರ್ವ ವಿದ್ಯಾರ್ಥಿ ಸಿತ್ಥಿ ಗಂಭೀರವಾಗಿದೆ ಎನ್ನಲಾಗಿದೆ.
ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics