ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ 
ದೇಶ

ಶ್ರೀಮಂತರಿಗೆ ಮಾತ್ರ 'ಮೇಕ್ ಇನ್ ಇಂಡಿಯಾ' ನೆರವಾಗುತ್ತಿದೆ: ಮೋದಿ ವಿರುದ್ದ ರಾಹುಲ್ ವಾಗ್ದಾಳಿ

ಕೇಂದ್ರದ ಆಡಳಿತಾರೂಢ ಮೋದಿ ಸರ್ಕಾರ ಜಾರಿಗೆ ತಂದಿರುವ 'ಮೇಕ್ ಇನ್ ಇಂಡಿಯಾ' ಯೋಜನೆ ಸೂಕ್ತ ಜನರಿಗೆ ತಲುಪುತ್ತಿಲ್ಲ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು...

ನ್ಯೂಜೆರ್ಸಿ: ಕೇಂದ್ರದ ಆಡಳಿತಾರೂಢ ಮೋದಿ ಸರ್ಕಾರ ಜಾರಿಗೆ ತಂದಿರುವ 'ಮೇಕ್ ಇನ್ ಇಂಡಿಯಾ' ಯೋಜನೆ ಸೂಕ್ತ ಜನರಿಗೆ ತಲುಪುತ್ತಿಲ್ಲ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ಮಂಗಳವಾರ ಹೇಳಿದ್ದಾರೆ. 
ಪ್ರಿನ್ಸ್'ಟನ್ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿರುವ ಅವರು, ಮೋದಿ ಸರ್ಕಾರ ಮೇಕ್ ಇನ್ ಇಂಡಿಯಾ ಮೂಲಕ ಶ್ರೀಮಂತ ವರ್ಗದವರಿಗೆ ಮಾತ್ರ ನೆರವಾಗುತ್ತಿದೆ. ಸರಕು ಮತ್ತು ಸೇವಾ ತೆರಿಗೆ ಮತ್ತು ಮೇಕ್ ಇನ್ ಇಂಡಿಯಾ ಯೋಜನೆಗಳು ಒಳ್ಳೆಯದೇ. ಆದರೆ, ಇದು ಸಣ್ಣ ಉದ್ಯಮಿಗಳಿಗೆ ನೆರವಾಗುವ ಹಾಗಿರಬೇಕು ಎಂದು ಹೇಳಿದ್ದಾರೆ. 
ಮೇಕ್ ಇನ್ ಇಂಡಿಯಾದ ಪ್ರಾಮುಖ್ಯತೆ ಹಾಗೂ ಅದರ ಪರಿಕಲ್ಪನೆ ವಿಭಿನ್ನತೆಯನ್ನು ಹೊಂದಿರಬೇಕು. ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಗುರಿ ಶ್ರೀಮಂತರ ಮೇಲಿದೆ. ಆದರೆ, ನನ್ನ ಪ್ರಕಾರ ಮೇಕ್ ಇನ್ ಇಂಡಿಯಾದ ಗುರಿ ಸಣ್ಣ ಉದ್ಯಮಿಗಳ ಮೇಲಿರಬೇಕು. ಸಣ್ಣ ಹಾಗೂ ಮಧ್ಯಮ ಉದ್ಯಮಕ್ಕೆ ಹೆಚ್ಚಿನ ಆದ್ಯತೆಗಳನ್ನು ನೀಡಿದರೆ, ಅವುಗಳೂ ಕೂಡ ದೊಡ್ಡ ಶ್ರೀಮಂತಿಕೆಯನ್ನು ಕಾಣಲಿದೆ. ಆದರೆ, ಮೇಕ್ ಇನ್ ಇಂಡಿಯಾ ಯೋಜನೆಯಲ್ಲಿ ಇದು ಆಗುತ್ತಿಲ್ಲ. ನಮ್ಮ ಗುರಿಗಳು ಈ ನಿಟ್ಟಿನಲ್ಲಿದ್ದಾಗ ಮಾತ್ರ ಉದ್ಯೋಗಗಳು ಸೃಷ್ಟಿಯಾಗುತ್ತವೆ ಎಂದು ತಿಳಿಸಿದ್ದಾರೆ. 

ಕೃಷಿ ಕ್ಷೇತ್ರದ ಕಡೆಗೂ ಹೆಚ್ಚಿನ ಗಮನ ಕೊಡುವ ಅಗತ್ಯವಿದೆ. ಕೃಷಿ ಕ್ಷೇತ್ರದತ್ತ ಗಮನಸಿದ್ದೇ ಆದರೆ, ಈ ಕ್ಷೇತ್ರದಲ್ಲೂ ಸಾಕಷ್ಟು ಉದ್ಯೋಗಾವಕಾಶಗಳನ್ನು ಸೃಷ್ಟಿಸಬಹುದು. ನಿರುದ್ಯೋಗ ಎಬುದು ದೇಶದ ಬೆಳವಣಿಗೆಯ ಮೇಲೆ ದೊಡ್ಡ ಪರಿಣಾಮವನ್ನು ಬೀರುತ್ತದೆ.  ಬಡವರಾಗಲೀ ಅಥವಾ ಶ್ರೀಮಂತರೇ ಆಗಿರಲಿ ಕೇಂದ್ರ ಸರ್ಕಾರ ಶಿಕ್ಷಣ, ಆರೋಗ್ಯ ವ್ಯವಸ್ಥೆಗಳನ್ನು ಜನರಿಗೆ ನೀಡಬೇಕು ಎಂದಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

BBK 13: ಗಾನವಿ ಹೇಳಿಕೆಗೆ ನೊಂದು ಗಗನ್ ತಾಯಿಗೆ ತಾನೇ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!