ಶ್ರೀನಗರ: ಕಣಿವೆ ರಾಜ್ಯದಲ್ಲಿ ಪಾಕಿಸ್ತಾನ ಸೈನಿಕರು ಕದನ ವಿರಾಮ ಉಲ್ಲಂಘಿಸಿ ಗುಂಡಿನ ದಾಳಿ ನಡೆಸಿದ್ದು ಓರ್ವ ಭಾರತೀಯ ಯೋಧ ಹುತಾತ್ಮರಾಗಿದ್ದಾರೆ.
ಜಮ್ಮು ಕಾಶ್ಮೀರದ ಕೇರನ್ ಸೆಕ್ಟರ್ ನಲ್ಲಿ ಗುಸ್ತು ತಿರುಗುತ್ತಿದ್ದ ಭಾರತೀಯ ಸೇನೆಯ ಮೇಲೆ ಪಾಕಿಸ್ತಾನ ಸೈನಿಕರು ಗುಂಡಿನ ದಾಳಿ ನಡೆಸಿದ್ದು ಇದಕ್ಕೆ ಪ್ರತಿಯಾಗಿ ಭಾರತೀಯ ಯೋಧರು ಸಹ ತೀಕ್ಷ್ಣ ಪ್ರತ್ಯುತ್ತರ ನೀಡುತ್ತಿದ್ದಾರೆ ಎಂದು ಭಾರತೀಯ ಸೇನೆ ಅಧಿಕಾರಿಗಳು ತಿಳಿಸಿದ್ದಾರೆ.
ಪಾಕ್ ಸೈನಿಕರ ಅಪ್ರಚೋದಿತ ಗುಂಡಿನ ದಾಳಿಯಲ್ಲಿ ಓರ್ವ ಭಾರತೀಯ ಯೋಧ ಹುತಾತ್ಮರಾಗಿದ್ದು ಮತ್ತೊಬ್ಬ ಯೋಧ ಗಾಯಗೊಂಡಿದ್ದು ಅವರನ್ನು ಕೂಡಲೇ ಶ್ರೀನಗರದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.