ಸಂಗ್ರಹ ಚಿತ್ರ 
ದೇಶ

ಕಾಶ್ಮೀರದಲ್ಲಿ ಉಗ್ರರ ಗ್ರೆನೇಡ್ ದಾಳಿ, ಮೂವರು ನಾಗರಿಕರ ಸಾವು, 7 ಯೋಧರಿಗೆ ಗಾಯ

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರರು ತಮ್ಮ ಅಟ್ಟಹಾಸ ಮೆರೆದಿದ್ದು, ಭದ್ರತಾ ಪಡೆಗಳನ್ನು ಗುರಿಯಾಗಿಸಿಕೊಂಡು ಉಗ್ರರು ಎಸೆದ ಗ್ರೆನೇಡ್ ಗಳು ಸ್ಫೋಟಗೊಂಡು ಮೂವರು...

ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರರು ತಮ್ಮ ಅಟ್ಟಹಾಸ ಮೆರೆದಿದ್ದು, ಭದ್ರತಾ ಪಡೆಗಳನ್ನು ಗುರಿಯಾಗಿಸಿಕೊಂಡು ಉಗ್ರರು ಎಸೆದ ಗ್ರೆನೇಡ್ ಗಳು ಸ್ಫೋಟಗೊಂಡು ಮೂವರು ನಾಗರಿಕರು ಸಾವನ್ನಪ್ಪಿ, 7 ಸಿಆರ್'ಪಿಎಫ್ ಯೋಧರಿಗೆ ಗಾಯವಾಗಿರುವ ಘಟನೆ ಗುರುವಾರ ನಡೆದಿದೆ.
ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ತ್ರಾಲ್ ಸೆಕ್ಟರ್ ನಲ್ಲಿ ಈ ಘಟನೆ ನಡೆದಿದ್ದು, ಘಟನೆಯಲ್ಲಿ 10ಕ್ಕೂ ಹೆಚ್ಚು ಪೊಲೀಸರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಪುಲ್ವಾಮಾದ ತ್ರಾಲ್ ಬಸ್ ನಿಲ್ದಾಣದ ಸಮೀಪ ಪಹರೆಗಾಗಿ  ಪೊಲೀಸ್ ಮತ್ತು ಸೇನಾ ವಾಹನಗಳು ನಿಂತಿದ್ದವು. ಇದನ್ನೇ ತಮ್ಮ ದುಷ್ಕೃತ್ಯಕ್ಕೆ ಬಳಸಿಕೊಂಡ ಉಗ್ರರು ಸೇನಾಪಡೆಗಳನ್ನು ಗುರಿಯಾಗಿಸಿಕೊಂಡು ಗ್ರೆನೇಡ್ ಗಳನ್ನು ಎಸೆದಿದ್ದು, ಈ ವೇಳೆ ಗ್ರೆನೇಡ್ ಸ್ಫೋಟಗೊಂಡು ಇಬ್ಬರು  ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ.

ಪಾಕ್ ಸೇನೆಯಿಂದಲೂ ಕದನ ವಿರಾಮ ಉಲ್ಲಂಘನೆ
ಅತ್ತ ತ್ರಾಲ್ ನಲ್ಲಿ ಉಗ್ರ ದಾಳಿ ಮುಂದುವರೆದಿರುವಂತೆಯೇ ಇತ್ತ ಗಡಿಯಾಚೆ ಪಾಕಿಸ್ತಾನ ಸೇನೆ ಕೂಡ ಕದನ ವಿರಾಮ ಉಲ್ಲಂಘಿಸಿ ಭಾರತೀಯ ಪಡೆಗಳತ್ತ ಶೆಲ್ ದಾಳಿ ನಡೆಸುತ್ತಿದೆ. ಸೆಪ್ಟೆಂಬರ್ 13ರಿಂದ ಸೆಪ್ಟೆಂಬರ್ 18ರವರೆಗೂ  ಪೂಂಛ್ ಗಡಿ ನಿಯಂತ್ರಣ ರೇಖೆಯಲ್ಲಿ ಭಾರತೀಯ ಪೋಸ್ಟ್ ಗಳನ್ನು ಗುರಿಯಾಗಿಸಿಕೊಂಡು ನಿರಂತರ ಶೆಲ್ ದಾಳಿ ನಡೆಸಿದ್ದಾರೆ ಎಂದು ಬಿಎಸ್ ಎಫ್ ಅಧಿಕಾರಿಗಳು ತಿಳಿಸಿದ್ದಾರೆ. ಈ ದಾಳಿಗಳಿಂದಾಗಿ ಓರ್ವ ಯೋಧ ಹಾಗೂ ಓರ್ವ  ನಾಗರಿಕ ಸಾವನ್ನಪ್ಪಿದ್ದು, 12 ಮಂದಿ ಗಾಯಗೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

CJP ಪ್ರತಿಭಟನೆ: ದೆಹಲಿ ಪೊಲೀಸರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ!

ಸ್ಟಾರ್‌ಲಿಂಕ್ ವಿವಾದ: ಭಾರತ ವಸಾಹತಲ್ಲ- Elon Musk ಗೆ ಕಮಲ್ ಹಾಸನ್ ತಿರುಗೇಟು

'ರಾಹುಲ್ ಗಾಂಧಿ ಅವರೇ, ನಿಮ್ಮ ಉದ್ದೇಶಗಳು ಎಂದಿಗೂ ಈಡೇರಲ್ಲ': ವಿಪಕ್ಷದವರದ್ದು 'ನಗರ ನಕ್ಸಲ್' ಮನಸ್ಥಿತಿ; ನಿತಿನ್ ನಬಿನ್