ಲೈಂಗಿಕ ಕಿರುಕುಳ(ಸಂಗ್ರಹ ಚಿತ್ರ)
ಬಿಲಾಸ್ಪುರ್(ಛತ್ತೀಸ್ ಗಢ್): ಅತ್ಯಾಚಾರ ಪ್ರಕರಣ ಸಂಬಂಧ ಸ್ವಯಂ ಘೋಷಿತ ದೇವಮಾನವ ಗುರ್ಮಿತ್ ರಾಮ್ ರಹೀಂ ಜೈಲು ಶಿಕ್ಷೆಗೆ ಗುರಿಯಾದ ಬೆನ್ನಲ್ಲೇ ಇದೀಗ ಛತ್ತೀಸ್ ಗಢದಲ್ಲಿ ಸ್ವಯಂ ಘೋಷಿತ ದೇವಮಾನವನ ವಿರುದ್ಧ ಮಹಿಳೆಯೊಬ್ಬರು ದೂರು ದಾಖಲಿಸಿದ್ದಾರೆ.
ಛತ್ತೀಸ್ ಗಢದ ಬಿಲಾಸ್ ಪುರದ ಕೌಶಲೇಂದ್ರ ಪ್ರಪನಾಚಾರ್ಯ ಪಲಾಹರಿ ಮಹಾರಾಜ್ ವಿರುದ್ಧ 21 ವರ್ಷದ ಮಹಿಳೆ ದೂರು ದಾಖಲಿಸಿದ್ದಾರೆ. ಆಗಸ್ಟ್ 7ರಂದು ರಾಜಸ್ಥಾನದ ಅಲ್ವಾರ್ ನಲ್ಲಿರುವ ಆಶ್ರಮದಲ್ಲಿ ತನ್ನನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾರೆ ಎಂದು ಮಹಿಳೆ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸದ್ಯ ಬಾಬಾ ಪಲಾಹರಿ ಆಸ್ಪತ್ರೆಗೆ ದಾಖಲಾಗಿದ್ದು, ವೈದ್ಯರು ಶಸ್ತ್ರ ಚಿಕಿತ್ಸೆ ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನಾವು ಬಾಬಾ ಅವರನ್ನು ಸಂಪರ್ಕಿಸಿ ಮಾತುಕತೆ ನಡೆಸಿಲ್ಲ. ವೈದ್ಯರ ಸಲಹೆ ಪಡೆದು ನಂತರ ಬಾಬಾ ವಿರುದ್ಧ ಕ್ರಮ ಕೈಗೊಳ್ಳುವ ಕುರಿತು ತೀರ್ಮಾನ ಕೈಗೊಳ್ಳುವುದಾಗಿ ಅಲ್ವಾರ್ ಎಸ್ ರಾಹುಲ್ ಪ್ರಕಾಶ್ ತಿಳಿಸಿದ್ದಾರೆ.
70 ವರ್ಷದ ಪಲಾಹರಿ ಅವರು ರಾಜಸ್ಥಾನ ಮೂಲದ ಸ್ವಯಂ ಘೋಷಿತ ದೇವಮಾನವ.