ಸೋನಿಯಾ ಗಾಂಧಿ 
ದೇಶ

ಪ್ರಧಾನಿ ಮೋದಿಗೆ ಪತ್ರ ಬರೆದ ಸೋನಿಯಾ, ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರಕ್ಕೆ ಮನವಿ

ಕಾಂಗ್ರೆಸ್ ಸೋನಿಯಾ ಗಾಂಧಿ ಅವರು ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು, ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ....

ನವದೆಹಲಿ: ಕಾಂಗ್ರೆಸ್ ಸೋನಿಯಾ ಗಾಂಧಿ ಅವರು ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು, ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಅಂಗೀಕರಿಸುವಂತೆ ಒತ್ತಾಯಿಸಿದ್ದಾರೆ.
'ಸಂಸತ್ ಮತ್ತು ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ 33ರಷ್ಟು ಮೀಸಲಾತಿಗೆ ಅವಕಾಶ ಕಲ್ಪಿಸುವ ಮಹಿಳಾ ಮೀಸಲಾತಿ ಮಸೂದೆಯನ್ನು ಈಗಾಗಲೇ ಮಾರ್ಚ್ 9, 2010ರಲ್ಲಿ ರಾಜ್ಯಸಭೆಯಲ್ಲಿ ಅಂಗೀಕರಿಸಿದ್ದನ್ನು ನಾನು ತಮ್ಮ ಗಮಕ್ಕೆ ತರಲು ಬಯಸುತ್ತೇನೆ. ಕಳೆದ 8 ವರ್ಷಗಳಿಂದ ಬಾಕಿ ಉಳಿದಿರುವ ಮಹಿಳಾ ಮೀಸಲಾತಿ ಮಸೂದೆಯನ್ನು ಲೋಕಸಭೆಯಲ್ಲಿ ಅಂಗೀಕರಿಸಬೇಕು ಎಂದು ಸೋನಿಯಾ ಪ್ರಧಾನಿಗೆ ಮನವಿ ಮಾಡಿದ್ದಾರೆ.
ಲೋಕಸಭೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಹೊಂದಿರುವುದರಿಂದ ಇದರ ಲಾಭ ಪಡೆದುಕೊಂಡು ಮಹಿಳಾ ಮೀಸಲಾತಿ ಮಸೂದೆ ಅಂಗೀಕರಿಸುವಂತೆ ಕಾಂಗ್ರೆಸ್ ಅಧ್ಯಕ್ಷೆ ಪ್ರಧಾನಿ ಬರೆದ ಪತ್ರದಲ್ಲಿ ಕೇಳಿಕೊಂಡಿದ್ದಾರೆ.
ಕಾಂಗ್ರೆಸ್ ಪಕ್ಷದ ಮಹಿಳಾ ಮೀಸಲಾತಿ ಮಸೂದೆಯನ್ನು ಯಾವತ್ತೂ ಬೆಂಬಲಿಸುತ್ತದೆ ಎಂದು ಸೋನಿಯಾ ಗಾಂಧಿ ತಿಳಿಸಿದ್ದಾರೆ.
ಈ ಹಿಂದೆ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆ ಈಗಾಗಲೇ ರಾಜ್ಯಸಭೆಯಲ್ಲಿ ಅಂಗೀಕಾರವಾಗಿದ್ದು, ಈಗ ಲೋಕಸಭೆಯಲ್ಲಿ ಅಂಗೀಕರಿಸಿ ಮಹಿಳಾ ಮೀಸಲಾತಿ ಜಾರಿಗೊಳಿಸಿದರೆ ವಿಧಾನಸಭೆ ಮತ್ತು ಲೋಕಸಭೆಯಲ್ಲಿ ಶೇ.33 ರಷ್ಟು ಸ್ಥಾನಗಳನ್ನು ಮಹಿಳೆಯರಿಗೆ ಮೀಸಲಾಗಿರಸಬೇಕಾಗುತ್ತದೆ.
ಮಹಿಳಾ ಮೀಸಲಾತಿ ಜಾರಿಗೆ ಕಾಂಗ್ರೆಸ್ ಪಕ್ಷ ಕೂಡಾ ಬೆಂಬಲಿಸುತ್ತಿರುವುದರಿಂದ ಮಸೂದೆ ಜಾರಿಗಾಗಿ ಪ್ರಧಾನಿ ಮೋದಿ ಸರ್ಕಾರಕ್ಕೆ ಯಾವುದೇ ಅಡೆತಡೆಗಳಿಲ್ಲ. ಆದರೆ 2019ರ ಲೋಕಸಭೆ ಚುನಾವಣೆಯೊಳಗೆ ಮಹಿಳಾ ಮೀಸಲಾತಿ ಜಾರಿಗೊಳಿಸಿ ಮಹಿಳಾ ಮತದಾರರ ಮನಗೆಲ್ಲುವ ಬಗ್ಗೆ ಪ್ರಧಾನಿ ಮೋದಿ ಮಾಸ್ಟರ್ ಪ್ಲ್ಯಾನ್ ರೂಪಿಸಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮೈಸೂರು ರಾಜಮನೆತನ ಹೊರಗಿಟ್ಟು ಕರ್ನಾಟಕ ಇತಿಹಾಸ ಊಹಿಸುವುದು ಕಷ್ಟ': ಗವಿಸಿದ್ಧೇಶ್ವರ ಶ್ರೀಗಳು; Video

'ಮೊದಲು ನಿಮ್ಮ ಅಮೆರಿಕದಲ್ಲಿ ಕೈಗೆಟುಕುವ ದರದಲ್ಲಿ ಸೇವೆ ಒದಗಿಸಿ': ಒತ್ತಡಕ್ಕೆ ಭಾರತ ಮಣಿಯಲ್ಲ; ಎಲಾನ್ ಮಸ್ಕ್ ವಿರುದ್ಧ ನಿಶಿಕಾಂತ್ ದುಬೆ

'ನನ್ನನ್ನಲ್ಲ, ನಿಮ್ ಗಂಡನ ಗುರಾಯಿಸಿ', ಜಯಾ ಬಚ್ಚನ್‌ ಖಡಕ್ ನೋಟಕ್ಕೆ ಫೋಟೋಗ್ರಾಫರ್ ತಿರುಗೇಟು! Video

ಮೈಸೂರು ದಸರಾಕ್ಕೆ ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳಿಂದ ಅಧಿಕೃತ ಚಾಲನೆ

4 ಜನರಿಗೆ ಒಂದೇ ಟಿಕೆಟ್! ಸಾರಿಗೆ ಇಲಾಖೆಯಲ್ಲಿ ಡೀಸೆಲ್ ಬೆನ್ನಲ್ಲೇ ಟಿಕೆಟ್ ರೋಲ್ ಕೊರತೆ