ಭೂಗತ ಪಾತಕಿ ದಾವೂದ್ ಇಬ್ರಾಹಿಂ 
ದೇಶ

ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಪಾಕ್'ನಲ್ಲಿ 4 ಬಾರಿ ಸ್ಥಳ ಬದಲಿಸಿದ್ದ ದಾವೂದ್: ಇಕ್ಬಾಲ್ ಕಸ್ಕರ್

ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಪಾಕಿಸ್ತಾನದಲ್ಲಿ 4 ಬಾರಿ ಸ್ಥಳ ಬದಲಾಯಿಸಿದ್ದ ಎಂದು ಮುಂಬೈನಲ್ಲಿ ಬಂಧನಕ್ಕೊಳಗಾಗಿರುವ...

ಮುಂಬೈ: ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಪಾಕಿಸ್ತಾನದಲ್ಲಿ 4 ಬಾರಿ ಸ್ಥಳ ಬದಲಾಯಿಸಿದ್ದ ಎಂದು ಮುಂಬೈನಲ್ಲಿ ಬಂಧನಕ್ಕೊಳಗಾಗಿರುವ ದಾವೂದ್ ಸಹೋದರ ಇಕ್ಬಾಲ್ ಕಸ್ಕರ್ ಗುರುವಾರ ಹೇಳಿಕೊಂಡಿದ್ದಾನೆ.
ಹಣ ಸುಲಿಗೆ ಪ್ರಕರಣ ಸಂಬಂಧ ಮುಂಬೈನಲ್ಲಿ ಬಂಧನಕ್ಕೊಳಗಾಗಿರುವ ದಾವೂದ್ ಸಹೋದರ ಇಕ್ಬಾಲ್ ಕಸ್ಕರ್ ಪೊಲೀಸರು 8 ದಿನಗಳ ಕಾಲ ವಶಕ್ಕೆ ಪಡೆದುಕೊಂಡಿದ್ದಾರೆ. ವಿಚಾರಣೆ ವೇಳೆ ಕಸ್ಕರ್ ಹಲವು ಮಹತ್ವದ ಮಾಹಿತಿಗಳನ್ನು ಹೊರಹಾಕಿದ್ದಾನೆಂದು ತಿಳಿದುಬಂದಿದೆ.
ವಿಚಾರಣೆ ವೇಳೆ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಪಾಕಿಸ್ತಾನದಲ್ಲಿದ್ದಾನೆಂದು ಕಸ್ಕರ್ ಬಾಯ್ಬಿಟ್ಟಿದ್ದಾನೆ. ಅಲ್ಲದೆ, ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ದಾವೂದ್ ಪಾಕಿಸ್ತಾನದಲ್ಲಿ 4 ಬಾರಿ ಸ್ಥಳವನ್ನು ಬದಲಾವಣೆ ಮಾಡಿದ್ದ ಎಂದು ತಿಳಿಸಿದ್ದಾನೆ.
ದಾವೂದ್'ಗೆ ಪಾಕಿಸ್ತಾನದಲ್ಲಿ ಬಲಿಷ್ಠವಾದ ಭದ್ರತೆಯನ್ನು ನೀಡಲಾಗಿದ್ದು, ಕುಟುಂಬ ಸದಸ್ಯರೊಂದಿಗೂ ದೂರವಾಣಿ ಮೂಲಕ ಮಾತನಾಡುವುದಿಲ್ಲ ಎಂದು ತಿಳಿಸಿದ್ದಾನೆಂದು ವರದಿಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್