ತಿರುವನಂತಪುರಂ: ಕೇರಳದ ಮೊದಲ ಐಪಿಎಸ್ ಅಧಿಕಾರಿ ಎಂದು ಹೆಸರುವಾಸಿಯಾಗಿರುವ ಶ್ರೀಕಲಾ, ರಾಜ್ಯದ ಮೊದಲ ಮಹಿಳಾ ಡಿಜಿಪಿಯಾಗಿ ನೇಮಕಗೊಂಡಿದ್ದಾರೆ.
1987 ರಲ್ಲಿ ಶ್ರೀಕಲಾ ಮಹಿಳಾ ಐಪಿಎಸ್ ಅಧಿಕಾರಿಯಾಗಿ ಕರ್ತವ್ಯ ಆರಂಭಿಸಿದ್ದರು.ಸದ್ಯ ಕಾರಾಗೃಹ ಎಡಿಜಿಪಿ ಅಗಿದ್ದ ಅವರಿಗೆ ಬಡ್ತಿ ನೀಡಲು ಸಂಪುಟ ನಿರ್ಧರಿಸಿದೆ. ಶ್ರೀಕಲಾ ಅವರ ಜೊತೆ ನಾಲ್ಕು ಐಪಿಎಸ್ ಅಧಿಕಾರಿಗಳಿಗೂ ಬಡ್ತಿ ನೀಡಿ, ಕೇರಳ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಬ್ಯಾಂಕ್ ಅಧಿಕಾರಿ ಹಾಗೂ ಉಪನ್ಯಾಸಕಿಯಾಗಿ ಕೆಲಸ ಮಾಡಿದ ನಂತರ ಶ್ರೀಕಲಾ, 1987 ರಲ್ಲಿ ಪೊಲೀಸ್ ಇಲಾಖೆಗೆ ಸೇರಿದ್ದರು. ಮೂರು ಜಿಲ್ಲೆಗಳಲ್ಲಿ, ಡಿವೈಎಸ್ ಪಿ ಯಾಗಿ ಕಾರ್ಯ ನಿರ್ವಹಿಸಿದ್ದರು. ಜೊತೆಗೆ ಕೇರಳದ ವಿವಿಧ ಜಿಲ್ಲೆಗಳಲ್ಲಿ ಡಿಐಜಿಯಾಗಿ ಕರ್ತವ್ಯ ನಿರ್ವಹಿಸಿದ್ದಾರೆ.
ಸಿಬಿಐ ನ ಎಸ್ ಪಿಯಾಗಿ ನಾಲ್ಕು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ, ಈ ಸಂಬಂಧ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆ ಮಾತನಾಡಿರುವ ಶ್ರೀಕಲಾ ತಮ್ಮ ತಾಯಿಗೆ ಅಭಿನಂದನೆ ಸಲ್ಲಿಸಿದ್ದಾರೆ. ನಾನು ಪೊಲೀಸ್ ಅಧಿಕಾರಿಯಾಗಬೇಕೆಂದು ನನ್ನ ತಾಯಿಯ ಆಸೆಯಾಗಿತ್ತು. ಡಿಜಿಪಿಯಾಗಿ ಬಡ್ತಿ ಹೊಂದಿರುವುದಕ್ಕೆ ನನಗೇ ಆತೀವ ಸಂತೋಷವಾಗಿದೆ ಎಂದು ಹೇಳಿದ್ದಾರೆ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics