ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಕಾಶ್ಮೀರ ವಿಷಯದಲ್ಲಿ ಮಧ್ಯಸ್ಥಿಕೆ ಇಲ್ಲ: ವಿಶ್ವಸಂಸ್ಥೆಯಲ್ಲಿ ಉಲ್ಟಾ ಹೊಡೆದ ಪಾಕಿಸ್ತಾನದ ಪರಮಾಪ್ತ ಚೀನಾ!

ಕಾಶ್ಮೀರ ವಿವಾದದಲ್ಲಿ ಮಧ್ಯಸ್ಥಿಕೆ ವಹಿಸುವುದಿಲ್ಲ ಎಂದು ಚೀನಾ ವಿಶ್ವಸಂಸ್ಥೆಯಲ್ಲಿ ಸ್ಪಷ್ಟಪಡಿಸಿದ್ದು, ಪಾಕಿಸ್ತಾನ ಭಾರತದೊಂದಿಗೆ...

ಚೀನಾ ಅಧ್ಯಕ್ಷ ಕ್ಸೀ ಜಿನ್ ಪಿಂಗ್
Srinivas Rao BV
Updated On : 22 Sept 2017, 7:35 am
ಬೀಜಿಂಗ್: ಕಾಶ್ಮೀರ ವಿವಾದದಲ್ಲಿ ಮಧ್ಯಸ್ಥಿಕೆ ವಹಿಸುವುದಿಲ್ಲ ಎಂದು ಚೀನಾ ವಿಶ್ವಸಂಸ್ಥೆಯಲ್ಲಿ ಸ್ಪಷ್ಟಪಡಿಸಿದ್ದು, ಪಾಕಿಸ್ತಾನ ಭಾರತದೊಂದಿಗೆ ದ್ವಿಪಕ್ಷೀಯ ಮಾತುಕತೆ ಮೂಲಕವೇ ವಿವಾದವನ್ನು ಬಗೆಹರಿಸಿಕೊಳ್ಳಬೇಕು ಎಂದು ಹೇಳಿದೆ. 
ಚೀನಾದ ಈ ಹೇಳಿಕೆಯಿಂದ ಪಾಕಿಸ್ತಾನಕ್ಕೆ ತೀವ್ರ ಹಿನ್ನಡೆಯುಂಟಾಗಿದೆ. ಕಾಶ್ಮೀರ ವಿವಾದಕ್ಕೆ ಸಂಬಂಧಿಸಿದಂತೆ ವಿಶ್ವಸಂಸ್ಥೆ ನಿರ್ಣಯವನ್ನು ಜಾರಿಗೊಳಿಸಬೇಕೆಂದು ಇತ್ತೀಚೆಗಷ್ಟೇ ಒಐಸಿ ಅಂತಾರಾಷ್ಟ್ರೀಯ ಸಮುದಾಯಕ್ಕೆ ಕರೆ ನೀಡಿತ್ತು. ಐಒಸಿ ಕರೆಗೆ ಪ್ರತಿಕ್ರಿಯೆ ನೀಡಿರುವ ಚೀನಾ ವಿದೇಶಾಂಗ ಇಲಾಖೆ ಕಾಶ್ಮೀರ ವಿವಾದವನ್ನು ದ್ವಿಪಕ್ಷೀಯವಾಗಿಯೇ ಬಗೆಹರಿಸಿಕೊಳ್ಳಬೇಕು ಎಂದು ಹೇಳಿದೆ. 
ಕಾಶ್ಮೀರದ ವಿಷಯದಲ್ಲಿ ಚೀನಾ ನಿಲುವು ಸ್ಪಷ್ಟವಾಗಿದ್ದು ಭಾರತ-ಪಾಕಿಸ್ತಾನವೇ ದ್ವಿಪಕ್ಷೀಯವಾಗಿ ವಿವಾದವನ್ನು ಬಗೆಹರಿಸಿಕೊಳ್ಳುವ ವಿಶ್ವಾಸವಿದೆ ಎಂದು ಚೀನಾ ತಿಳಿಸಿದೆ. 

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement