ವಾರಾಣಸಿ: ವಾರಾಣಸಿಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ತಮ್ಮ ಲೋಕಸಭಾ ಕ್ಷೇತ್ರಕ್ಕೆ 1,000 ಕೋಟಿ ರೂಪಾಯಿ ಮೊತ್ತದ ಯೋಜನೆಗಳನ್ನು ಘೋಷಿಸಿದ್ದಾರೆ.
ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿರುವ ಮೋದಿ, ನಮ್ಮೆಲ್ಲಾ ಸಮಸ್ಯೆಗಳಿಗೆ ಅಭಿವೃದ್ಧಿಯೊಂದೇ ಪರಿಹಾರ, ಈ ಹಿಂದಿನ ಸರ್ಕಾರ ಅಭಿವೃದ್ಧಿಯನ್ನು ದ್ವೇಶಿಸಿ, ಕೇವಲ ಚುನಾವಣೆ ಗೆಲ್ಲುವ ಉದ್ದೇಶದಿಂದ ಸಾರ್ವಜನಿಕರ ಹಣವನ್ನು ಲೂಟಿ ಮಾಡುತ್ತಿತ್ತು ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ನಾವು ಕೇವಲ ಯೋಜನೆಗಳನ್ನು ಲೋಕಾರ್ಪಣೆ ಮಾಡುವುದಷ್ಟೇ ಅಲ್ಲ, ಅದನ್ನು ಯಶಸ್ವಿಯಾಗಿ ಪೂರ್ಣಗೊಳಿಸುತ್ತೇವೆ, ಅಭಿವೃದ್ಧಿ ಕನಸನ್ನು ನನಸು ಮಾಡುವುದು ಹಾಗೂ ಬಡವರಿಗೆ ಅವಕಾಶಗಳು ಸಿಗುವಂತೆ ಮಾಡುವುದು ನಮ್ಮ ಗುರಿಯಾಗಿದೆ ಎಂದು ಮೋದಿ ಹೇಳಿದ್ದಾರೆ.