ದೇಶ

ಗೋರಕ್ಷಕರಿಂದ ಹತ್ಯೆಯಾದ ವ್ಯಕ್ತಿಯ ಕುಟುಂಬಕ್ಕೆ ರಾಜ್ಯಗಳು ಪರಿಹಾರ ನೀಡಬೇಕು: ಸುಪ್ರೀಂ

Lingaraj Badiger
ನವದೆಹಲಿ: ಗೋ ರಕ್ಷಕರಿಂದ ಹತ್ಯೆಯಾದ ವ್ಯಕ್ತಿಯ ಕುಟುಂಬಕ್ಕೆ ರಾಜ್ಯ ಸರ್ಕಾರಗಳು ಪರಿಹಾರ ನೀಡುವುದು ಅನಿವಾರ್ಯ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಹೇಳಿದೆ.
ಗೋ ರಕ್ಷಕರ ತಂಡದಿಂದ ನಡೆಯುತ್ತಿರುವ ಹಿಂಸಾಚಾರವನ್ನು ತಡೆಯಲು ನೋಡಲ್ ಅಧಿಕಾರಿಯನ್ನು ನೇಮಿಸುವಂತೆ ಮತ್ತು ಈ ಕುರಿತು ವರದಿ ನೀಡುವಂತೆ ಸುಪ್ರೀಂ ಕೋರ್ಟ್ ಎಲ್ಲಾ ರಾಜ್ಯ ಸರ್ಕಾರಗಳಿಗೆ ಸೂಚಿಸಿದೆ.
ಈಗಾಗಲೇ ಗುಜರಾತ್, ರಾಜಸ್ತಾನ, ಕರ್ನಾಟಕ, ಜಾರ್ಖಂಡ್ ಹಾಗೂ ಉತ್ತರ ಪ್ರದೇಶ ಸರ್ಕಾರಗಳು ವರದಿ ನೀಡಿದ್ದು, ಉಳಿದ ರಾಜ್ಯಗಳು ಸಹ ವರದಿ ನೀಡಬೇಕು ಎಂದು ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರ ನೇತೃತ್ವದ ಪೀಠ ಹೇಳಿದೆ.
ಗೋರಕ್ಷಕರಿಂದ ನಡೆದ ಹಿಂಸಾಚಾರಕ್ಕೆ ಬಲಿಯಾದ ಸಂತ್ರಸ್ಥರಿಗೆ ಪರಿಹಾರ ನೀಡಬೇಕು ಎಂದು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್, ರಾಜ್ಯ ಸರ್ಕಾರಗಳು ಅಪರಾಧ ಸಂತ್ರಸ್ಥರಿಗೆ ಪರಿಹಾರ ನೀಡವುದು ಅನಿವಾರ್ಯ ಎಂದು ಹೇಳಿ ವಿಚಾರಣೆಯನ್ನು ಅಕ್ಟೋಬರ್ 31ಕ್ಕೆ ಮುಂದೂಡಿದೆ.
SCROLL FOR NEXT