ಅಂಜಲಿ ದಮಲಿಯಾ 
ದೇಶ

ಜೀವ ಬೆದರಿಕೆ ಕರೆ: ಕಾರ್ಯಕರ್ತೆ ಅಂಜಲಿ ದಮಲಿಯಾರಿಂದ ಬಿಜೆಪಿ ಶಾಸಕನ ವಿರುದ್ಧ ಎಫ್ ಐಆರ್ ದಾಖಲು

ಭಾರತೀಯ ಜನತಾ ಪಾರ್ಟಿಯ ಶಾಸಕ ಏಕನಾಥ್ ಖಡ್ಸೆ ಮೇಲಿನ ಕೇಸನ್ನು ವಾಪಸ್ ತೆಗೆದುಕೊಳ್ಳುವಂತೆ ತಮಗೆ ಅನಾಮಧೇಯ ಜೀವ ....

ಮುಂಬೈ: ಭಾರತೀಯ ಜನತಾ ಪಾರ್ಟಿಯ ಶಾಸಕ ಏಕನಾಥ್ ಖಡ್ಸೆ ಮೇಲಿನ ಕೇಸನ್ನು ವಾಪಸ್ ತೆಗೆದುಕೊಳ್ಳುವಂತೆ ತಮಗೆ ಅನಾಮಧೇಯ ಜೀವ ಬೆದರಿಕೆ ಕರೆ ಬಂದಿದೆ ಎಂದು ಹೇಳಿ ಕಾರ್ಯಕರ್ತೆ ಅಂಜಲಿ ದಮನಿಯಾ ಎಫ್ಐಆರ್ ದಾಖಲಿಸಿದ್ದಾರೆ.
ಮುಂಬೈನ ವೊಕೊಲಾ ಪೊಲೀಸ್ ಠಾಣೆಯಲ್ಲಿ ಭಾರತೀಯ ದಂಡ ಸಂಹಿತೆ ಸೆಕ್ಷನ್ 506, 507ರಡಿಯಲ್ಲಿ ಕೇಸು ದಾಖಲಾಗಿದೆ.
ಈ ಬಗ್ಗೆ ಟ್ವಿಟ್ಟರ್ ನಲ್ಲಿ ಬರೆದುಕೊಂಡಿರುವ ದಮನಿಯಾ, ಪಾಕಿಸ್ತಾನಿ ಮೂಲದ ಸ್ಥಿರ ದೂರವಾಣಿ ಸಂಖ್ಯೆಯಿಂದ ತಮಗೆ ಜೀವ ಬೆದರಿಕೆ ಕರೆ ಬಂದಿದೆ ಎಂದು ಹೇಳಿದ್ದಾರೆ.ಅಲ್ಲದೆ ಕರೆ ಮಾಡಿದ ವ್ಯಕ್ತಿಯ ಗುರುತಿನ ಸ್ಕ್ರೀನ್ ಶಾಟ್ ತೆಗೆದು ಹಾಕಿದ್ದಾರೆ. ಕರೆಯಲ್ಲಿ ದಾವೂದ್ 2 ಎಂಬ ಹೆಸರು ಬಂದಿದೆ ಎಂದು ಅವರು ಹೇಳಿದ್ದಾರೆ. 
ತಮಗೆ ಬಂದ ಅನಾಮಧೇಯ ಬೆದರಿಕೆ ಕರೆ ಬಗ್ಗೆ ಅವರು ಪೊಲೀಸರಿಗೆ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರಿಗೆ ತಿಳಿಸಿದ್ದಾರೆ.
ಜಂಟಿ ಪೊಲೀಸ್ ಆಯುಕ್ತ ಘಟನೆಯ ತನಿಖೆ ನಡೆಸುತ್ತಿದ್ದಾರೆ. ಈ ವಿಷಯದಲ್ಲಿ ಕ್ರಮ ತೆಗೆದುಕೊಳ್ಳುವಂತೆ ಅಂಜಲಿ ಪ್ರಧಾನಿ ಹಾಗೂ ಗೃಹ ಸಚಿವ ರಾಜನಾಥ್ ಸಿಂಗ್ ಅವರಿಗೆ ಕೂಡ ಮನವಿ ಮಾಡಿದ್ದಾರೆ.
ಈ ತಿಂಗಳ ಆರಂಭದಲ್ಲಿ ಸಾರ್ವಜನಿಕ ಕಾರ್ಯಕ್ರಮದಲ್ಲಿ ನಿಂದನಕಾರಿ ಮಾತುಗಳನ್ನಾಡಿದ್ದಾರೆ ಎಂದು ಆರೋಪಿಸಿ ಶಾಸಕ ಏಕನಾಥ್ ಖಡ್ಸೆ ವಿರುದ್ಧ ವೊಕಲಾ ಪೊಲೀಸರಿಗೆ ಅಂಜಲಿ ದಮಲಿಯಾ ದೂರು ನೀಡಿದ್ದರು. ಇದರ ನಂತರ ಕಾರ್ಯಕರ್ತೆ ಎಫ್ ಐಆರ್ ದಾಖಲಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT