ದೇಶ

ನಟ ವಿಶಾಲ್, ನಾಸಿರ್ ವಿರುದ್ಧ ಕೇಸ್ ದಾಖಲಿಸಿ: ಪೊಲೀಸರಿಗೆ ಮದ್ರಾಸ್ ಹೈಕೋರ್ಟ್ ಆದೇಶ

Lingaraj Badiger
ಚೆನ್ನೈ: ಹಣ ದುರುಪಯೋಗಪಡಿಸಿಕೊಂಡ ಆರೋಪಕ್ಕೆ ಸಂಬಂಧಿಸಿದಂತೆ ದಕ್ಷಿಣ ಭಾರತದ ಕಲಾವಿದರ ಸಂಘದ ಪದಾಧಿಕಾರಿಗಳಾದ ನಟ ವಿಶಾಲ್ ಹಾಗೂ ನಟ ನಾಸಿರ್ ಅವರ ವಿರುದ್ಧ ಕೇಸ್ ದಾಖಲಿಸುವಂತೆ ಮದ್ರಾಸ್ ಹೈಕೋರ್ಟ್ ಶನಿವಾರ ಪೊಲೀಸರಿಗೆ ಆದೇಶಿಸಿದೆ.
ನಾಡಿಗರ್ ಸಂಘ ಎಂದೇ ಖ್ಯಾತಿ ಪಡೆದಿರುವ ದಕ್ಷಿಣ ಭಾರತ ಕಲಾವಿದರ ಸಂಘದ ಸದಸ್ಯ ವರಾಕಿ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂಎಸ್ ರಮೇಶ್ ಅವರು, ನಟರ ವಿರುದ್ಧ ಕೇಸ್ ದಾಖಲಿಸುವಂತೆ ಅಪರಾಧ ವಿಭಾಗದ ಪೊಲೀಸ್ ಮಹಾ ನಿರ್ದೇಶಕರಿಗೆ ಸೂಚಿಸಿದ್ದಾರೆ.
ಕಳೆದ ವರ್ಷ ನಡೆದ ಸ್ಟಾರ್ ಕ್ರಿಕೆಟ್ ಪಂದ್ಯಾವಳಿ ಆಯೋಜನೆ ಹೆಸರಿನಲ್ಲಿ ಕಲಾವಿದರ ಸಂಘದ ಹಣ ದುರುಪಯೋಗ ಮಾಡಿಕೊಳ್ಳಲಾಗಿದೆ ಎಂದು ಆರೋಪಿಸಿ ವರಾಕಿ ಅವರು ಕೋರ್ಟ್ ಮೊರೆ ಹೋಗಿದ್ದರು.
SCROLL FOR NEXT