ಶಬ್ಬೀರ್ ಶಾ 
ದೇಶ

ಹಪೀಜ್ ಸಯೀದ್ ನೊಂದಿಗೆ ಕಾಶ್ಮೀರಿ ಪ್ರತ್ಯೇಕವಾದಿ ನಾಯಕ ಶಬ್ಬೀರ್ ಶಾ ನಂಟು: ಇಡಿ ಚಾರ್ಜ್ ಶೀಟ್

ಜಮ್ಮು ಮತ್ತು ಕಾಶ್ಮೀರದ ಪ್ರತ್ಯೇಕವಾದಿ ನಾಯಕ ಶಬ್ಬೀರ್‌ ಶಾ ವಿರುದ್ಧ ಜಾರಿ ನಿರ್ದೇಶನಾಲಯ(ಇಡಿ)ದ ಅಧಿಕಾರಿಗಳು ಶನಿವಾರ ....

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪ್ರತ್ಯೇಕವಾದಿ ನಾಯಕ ಶಬ್ಬೀರ್‌ ಶಾ ವಿರುದ್ಧ ಜಾರಿ ನಿರ್ದೇಶನಾಲಯ(ಇಡಿ)ದ ಅಧಿಕಾರಿಗಳು ಶನಿವಾರ ಚಾರ್ಜ್ ಶೀಟ್ ಸಲ್ಲಿಸಿದ್ದು, ಮುಂಬೈ ದಾಳಿಯ ರೂವಾರಿ, ಜಮಾತ್‌ ಉದ್‌ ದಾವಾ(ಜೆಯುಡಿ) ಉಗ್ರ ಸಂಘಟನೆಯ ಮುಖ್ಯಸ್ಥ ಹಫೀಜ್‌ ಸಯೀದ್‌ ಜತೆಗೆ ಶಬ್ಬೀರ್‌ ಶಾ  ಸಂಪರ್ಕ ಹೊಂದಿರುವುದಾಗಿ ಆರೋಪಿಸಿದ್ದಾರೆ.
ಜಾರಿ ನಿರ್ದೇಶನಾಲಯದ ಚಾರ್ಜ್‌ ಶೀಟ್‌ ಪ್ರಕಾರ ಕಾಶ್ಮೀರಿ ಪ್ರತ್ಯೇಕವಾದಿ ನಾಯಕ ಶಬ್ಬೀರ್‌ ಶಾ, ಕಳೆದ ಜನವರಿಯಲ್ಲಿ ಉಗ್ರ ಹಫೀಜ್‌ ಸಯೀದ್‌ ಕರೆ ಮಾಡಿ, ಕಾಶ್ಮೀರ ವಿಷಯವನ್ನು ಚರ್ಚಿಸುತ್ತಿದ್ದಾನೆ ಎಂದು ಎಎನ್‌ಐ ಸುದ್ದಿ ಸಂಸ್ಥೆ ವರದಿ ಮಾಡಿದೆ. 
ಶಬ್ಬೀರ್‌ ಶಾ ಕಾಶ್ಮೀರ ಮತ್ತು ಭಾರತದ ಇತರ ಭಾಗಗಳಲ್ಲಿ ಉಗ್ರ ಚಟುವಟಿಕೆಗಳನ್ನು ಪ್ರೋತ್ಸಾಹಿಸಲು ಪಾಕಿಸ್ತಾನದ ಉಗ್ರ ಸಂಘಟನೆಯಿಂದ ಹಣ ಪಡೆದುಕೊಂಡಿದ್ದಾನೆ. ಉಗ್ರ ನಿಧಿಗೆ ಹವಾಲಾ ಮೂಲಕ ಹಣವನ್ನು ಪಡೆದುಕೊಳ್ಳುವಲ್ಲಿ ಶಬ್ಬೀರ್‌ ಪತ್ನಿ ಡಾ. ಬಿಲ್ಕಿಸ್‌ ಕೂಡ ಶಾಮೀಲಾಗಿದ್ದಾಳೆ ಎಂದು ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಲಾಗಿದೆ.
ಈಗ ನ್ಯಾಯಾಂಗ ಬಂಧನದಲ್ಲಿರುವ ಮೊಹಮ್ಮದ್‌ ಅಸ್ಲಾಂ ವಾನಿ, ತಾನು ದೆಹಲಿಯಲ್ಲಿ ಶಬ್ಬೀರ್‌ ಶಾ ಪರವಾಗಿ ಹವಾಲಾ ಹಣವನ್ನು ಉಗ್ರ ನಿಧಿಗಾಗಿ ಪಡೆದುಕೊಳ್ಳುತ್ತಿದ್ದ. ಅದನ್ನು ತನಗೆ ಪಾಕ್‌ ಹವಾಲಾ ನಿರ್ವಾಹಕ ಶಫಿ ಶಹರ್‌ಯಾರ್‌ ಪೂರೈಸುತ್ತಿದ್ದ ಎಂದು ತನಿಖಾಧಿಕಾರಿಗಳ ಬಳಿ ಬಾಯಿ ಬಿಟ್ಟಿದ್ದಾನೆ ಎನ್ನಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT