ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಲತಾ ಮಂಗೇಶ್ಕರ್ ಹೆಸರಿನಲ್ಲಿ ವಂಚನೆ; ದೂರು ದಾಖಲು, ವಂಚಕಿಗಾಗಿ ತೀವ್ರ ಹುಡುಕಾಟ

ಸಂಗೀತ ಲೋಕದ ಶ್ರೇಷ್ಠ ಗಾಯಕಿ ಲತಾ ಮಂಗೇಶ್ಕರ್ ಅವರ ಹೆಸರು ಹೇಳಿಕೊಂಡು ಮಹಿಳೆಯೊಬ್ಬಳು ಜನರಿಂದ ದೇಣಿಗೆ ಸಂಗ್ರಹಿಸಿ ವಂಚನೆ ಮಾಡುತ್ತಿರುವ ಪ್ರಕರಣವೊಂದು ಇದೀಗ ಬೆಳಕಿಗೆ ಬಂದಿದ್ದು, ಪ್ರಕರಣ...

ಗಾಯಕಿ ಲತಾ ಮಂಗೇಶ್ಕರ್
Manjula VN
Updated On : 23 Sept 2017, 11:47 am
ಮುಂಬೈ: ಸಂಗೀತ ಲೋಕದ ಶ್ರೇಷ್ಠ ಗಾಯಕಿ ಲತಾ ಮಂಗೇಶ್ಕರ್ ಅವರ ಹೆಸರು ಹೇಳಿಕೊಂಡು ಮಹಿಳೆಯೊಬ್ಬಳು ಜನರಿಂದ ದೇಣಿಗೆ ಸಂಗ್ರಹಿಸಿ ವಂಚನೆ ಮಾಡುತ್ತಿರುವ ಪ್ರಕರಣವೊಂದು ಇದೀಗ ಬೆಳಕಿಗೆ ಬಂದಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ವಂಚಕಿಗಾಗಿ ತೀವ್ರ ಹುಡುಕಾಟ ಆರಂಭಿಸಿದ್ದಾರೆ. 
ರೇವತಿ ಖರೆ ಎನ್ನುವ ಮಹಿಳೆ ಲತಾ ಅವರ ಹೆಸರಿನಲ್ಲಿ ಜನರಿಂದ ದೇಣಿಗೆ ಸಂಗ್ರಹಿಸಿ ವಂಚನೆ ಮಾಡುತ್ತಿದ್ದು, ಈ ಬಗ್ಗೆ ಗಾಮ್'ದೇವಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. 
ರೇವತಿ ಖರೆ ಎನ್ನುವ ಮಹಿಳೆಯೊಬ್ಬರು ಲೆಟರ್ ಹೆಡ್ ಗಳನ್ನು ಮುದ್ರಿಸಿ ಸಾಮಾಜಿಕ ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವುದಾಗಿ ಹೇಳಿ ಉದ್ಯಮಿಗಳು ಹಾಗೂ ಎನ್ ಜಿಒ ಸಂಘಟನೆಗಳ ಬಳಿ ಹಣ ಸಂಗ್ರಹಿಸಿದ್ದಾಳೆ. 

Advertisement

Advertisement

ರೇವತಿಯವರಿಗೆ ಹಣ ನೀಡಿದ್ದ ವ್ಯಕ್ತಿಯೊಬ್ಬರುಲತಾ ಅವರಿಗೆ ತಾವು ಹಣ ನೀಡಿರುವ ವಿಚಾರವನ್ನು ಹೇಳಿ, ಸೇವಾ ಕಾರ್ಯಕ್ರಮಗಳಲ್ಲಿ ತೊಡಗಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ಸಂದೇಶವೊಂದನ್ನು ಕಳುಹಿಸಿದ್ದಾರೆ. ಈ ವಿಷಯ ತಿಳಿದ ಲತಾ ಅವರಿಗೆ ಆಘಾತವಾಗಿದೆ. ಕೂಡಲೇ ತಮ್ಮ ಆಪ್ತ ಸಹಾಯಕ ಮಹೇಶ್ ರಾಥೋಡ್ ಎಂಬುವವರಿಗೆ ಈ ಕುರಿತು ಗಾಮ್'ದೇವಿ ಪೊಲೀಸ್ ಠಾಣೆಯಲ್ಲಿ ದೂರು ನೀಡುವಂತೆ ಸೂಚಿಸಿದ್ದಾರೆ.
ಪ್ರಕರಣ ಸಂಬಂಧ ವಿಚಾರಣೆ ನಡೆಸಿರುವ ಪೊಲೀಸರು, ಮಹಿಳೆ ಬಗ್ಗೆ ಮಾಹಿತಿ ಕಲೆ ಹಾಕಿದ್ದಾರೆ. ರೇವತಿ ಖರೆ ಎಂಬ ಮಹಿಳೆ ಜನರ ಬಳಿ ತಾನು ಲತಾ ಮಂಗೇಶ್ಕರ್ ಅವರ ಸಹಾಕಯಿ ಎಂದು ಪರಿಚಯಿಸಿಕೊಂಡಿದ್ದಾಳೆ. ಲತಾ ಅವರು ಸಾಮಾಜಿಕ ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಪ್ರಚಾರವನ್ನು ಬಯಸುವುದಿಲ್ಲ. ಜನರ ನೆರವನ್ನೂ ಕೇಳುವುದಿಲ್ಲ ಎಂದು ಹೇಳಿ ದೇಣಿಗೆ ಸಂಗ್ರಹಿಸಿದ್ದಾಳೆ. 
ರೇವತಿ ಮಾತುಗಳಿಗೆ ಮರುಳಾದ ಹಲವಾರು ಜನರು ಲಕ್ಷಾಂತರ ಹಣವನ್ನು ದೇಣಿಗೆಯಾಗಿ ನೀಡಿದ್ದಾರೆ. ಪೊಲೀಸರು ಇದೀಗ ಮಹಿಳೆಯ ವಂಚನೆ ಕುರಿತಂತೆ ತನಿಖೆ ಚುರುಕುಗೊಳಿಸಿದ್ದು ರೇವತಿಗೆ ದುಡ್ಡುಕೊಟ್ಟು ವಂಚನೆಗೊಳಗಾದ ಜನರಿಂದ ಹೇಳಿಕೆಗಳನ್ನು ಪಡೆದುಕೊಳ್ಳುತ್ತಿದ್ದಾರೆಂದು ತಿಳಿದುಬಂದಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments