ಬನಾರಸ್ ಹಿಂದೂ ವಿಶ್ವವಿದ್ಯಾನಿಲಯ
ವಾರಾಣಸಿ: ಬನಾರಸ್ ಹಿಂದೂ ವಿಶ್ವವಿದ್ಯಾನಿಲಯದ ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ.
ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿರುವುದನ್ನು ಖಂಡಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದು, ಪೊಲೀಸರು ಲಾಠಿ ಚಾರ್ಚ್ ಮಾಡಿದ್ದಾರೆ. ಅಷ್ಟೇ ಅಲ್ಲದೇ ವಿದ್ಯಾರ್ಥಿಗಳನ್ನು ಜುಟ್ಟು ಹಿಡಿದು ಎಳೆದೊಯ್ದಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ. ಆದರೆ ಸ್ಥಳದಲ್ಲಿಯೇ ಇದ್ದ ವಾರಾಣಸಿ ಡಿಎಂ ಈ ಆರೋಪವನ್ನು ನಿರಾಕರಿಸಿದ್ದಾರೆ.
ವಿಶ್ವವಿದ್ಯಾನಿಲಯದ ಕ್ಯಾಂಪಸ್ ಹೊರಗೆ ಬೈಕ್ ನಲ್ಲಿ ಬಂದಿದ್ದ ಮೂವರು ಯುವಕರು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ. ಈ ಬಗ್ಗೆ ವಿಶ್ವವಿದ್ಯಾನಿಲಯದಲ್ಲಿ ಸಂಬಂಧಿಸಿದವರಿಗೆ ದೂರು ನೀಡಲು ಹೋದರೆ ಕ್ರಮ ಕೈಗೊಳ್ಳುವುದರ ಬದಲು ವಿದ್ಯಾರ್ಥಿ ಹಾಸ್ಟೆಲ್ ಗೆ ಹೋಗಿ ಬರುವ ವೇಳೆಯನ್ನು ಪ್ರಶ್ನಿಸಿ ಅವಹೇಳನ ಮಾಡಿದ್ದಾರೆ. ವಿವಿಯ ನಡೆಗೆ ಆಕ್ರೋಶ ವ್ಯಕ್ತಪಾಡಿಸಿರುವ ವಿದ್ಯಾರ್ಥಿಗಳು ಪ್ರತಿಭಟನೆಗೆ ಮುಂದಾಗಿದ್ದಾರೆ. ಈ ವೇಳೆ ಲಾಠಿ ಚಾರ್ಜ್ ನಡೆದಿದೆ.