ಡಾರ್ಜಿಲಿಂಗ್: ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಹಿಲ್ಸ್ ನಲ್ಲಿ ಮತ್ತೆ ಹಿಂಸಾಚಾರ ನಡೆದಿದ್ದು, ವಾಹನವೊಂದಕ್ಕೆ ಬೆಂಕಿ ಹಚ್ಚಲಾಗಿದೆ.
ಗೋರ್ಖಾ ಜನಮುಕ್ತಿ ಮೋರ್ಚ(ಜಿಜೆಎಂ) ಕಾರ್ಯಕರ್ತರು ಕಾರಿಗೆ ಬೆಂಕಿ ಹಚ್ಚಿದ್ದಾರೆಂಬ ಶಂಕೆ ಇದೆ. ಡಾರ್ಜಿಲಿಂಗ್ ನಿಂದ ಲೆಬಾಂಗ್ ಗೆ ತೆರಳುತ್ತಿದ್ದ ಕಾರನ್ನು ತಡೆದು, ಹಾನಿಗೊಳಿಸಿ ಬೆಂಕಿ ಹಚ್ಚಿದ್ದಾರೆ. ಈ ಘಟನೆಯಲ್ಲಿ ಓರ್ವ ವ್ಯಕ್ತಿಗೆ ಗಾಯಗಳಾಗಿವೆ ಎಂದು ಎಸ್ ಪಿ ಅಖಿಲೇಶ್ ಕುಮಾರ್ ಚತುರ್ವೇದಿ ಹೇಳಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಈ ವರೆಗೂ ಯಾರನ್ನೂ ಬಂಧಿಸಲಾಗಿಲ್ಲ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.