ಸಂಗ್ರಹ ಚಿತ್ರ 
ದೇಶ

ಉರಿಯಲ್ಲಿ ಮತ್ತೆ ಉಗ್ರರ ದಾಳಿ: ಕಾರ್ಯಾಚರಣೆಗಿಳಿದ ಸೇನಾಪಡೆ, 3 ಉಗ್ರರು ಅಡಗಿರುವ ಶಂಕೆ

ಜಮ್ಮು ಮತ್ತು ಕಾಶ್ಮೀರದ ಉರಿ ಸೆಕ್ಟರ್ ನಲ್ಲಿ ಉಗ್ರರು ದಾಳಿ ನಡೆಸಿದ್ದು, ಸ್ಥಳದಲ್ಲಿ ಭಾರತೀಯ ಸೇನಾಪಡೆ ಹಾಗೂ ಉಗ್ರರ ನಡುವೆ ಭಾರೀ ಗುಂಡಿನ ಚಕಮಕಿ ನಡೆಯುತ್ತಿರುವುದಾಗಿ ಭಾನುವಾರ ತಿಳಿದುಬಂದಿದೆ...

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಉರಿ ಸೆಕ್ಟರ್ ನಲ್ಲಿ ಮತ್ತೆ ಉಗ್ರರು ದಾಳಿ ನಡೆಸಿದ್ದು, ಸ್ಥಳದಲ್ಲಿ ಭಾರತೀಯ ಸೇನಾಪಡೆ ಹಾಗೂ ಉಗ್ರರ ನಡುವೆ ಭಾರೀ ಗುಂಡಿನ ಚಕಮಕಿ ನಡೆಯುತ್ತಿರುವುದಾಗಿ ಭಾನುವಾರ ತಿಳಿದುಬಂದಿದೆ. 

ಉತ್ತರ ಕಾಶ್ಮೀರದ ಉರಿ ವಲಯದ ಗಡಿ ನಿಯಂತ್ರಣ ರೇಖೆ ಬಳಿ ಉಗ್ರರು ಗುಂಪೊಂದು ದಾಳಿ ನಡೆಸಿದೆ. ಉಗ್ರರು ದಾಳಿ ನಡೆಸುತ್ತಿದ್ದಂತೆಯೇ ಸೇನಾ ಪಡೆ ಸ್ಥಳವನ್ನು ಸುತ್ತುವರೆದಿದ್ದು, ಭಾರೀ ಮಟ್ಟದ ಕಾರ್ಯಾಚರಣೆಯನ್ನು ನಡೆಸುತ್ತಿದೆ ಎಂದು ತಿಳಿದುಬಂದಿದೆ. 

ಉರಿ ವಲಯದ ಕರ್ಗಿಯಾ ಪ್ರದೇಶದಲ್ಲಿ ಉಗ್ರರು ಇಂದು ಬೆಳಿಗ್ಗೆ ದಾಳಿ ನಡೆಸಿದ್ದರು. ಈ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆಯೇ ಭದ್ರತಾ ಪಡೆಗಳು ಕಾರ್ಯಾಚರಣೆಗಿಳಿದಿವೆ ಎಂದು ಸೇನಾಧಿಕಾರಿಗಳು ಹೇಳಿದ್ದಾರೆ. 

ಸ್ಥಳದಲ್ಲಿ ಉಗ್ರರು ಹಾಗೂ ಸೇನಾಪಡೆಗಳ ನಡುವೆ ಗುಂಡಿನ ಕಾಳಗ ನಡೆಯುತ್ತಿದ್ದು, ಕಾರ್ಯಾಚರಣೆ ಮುಂದುವರೆದಿದೆ ಎಂದು ವರದಿಗಳು ತಿಳಿಸಿವೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ವಿದೇಶಿ ಮಹಿಳೆಗೆ ಪತ್ರ ಬರೆದು ಅಂಬೇಡ್ಕರ್ ಸೋಲನ್ನು ನೆಹರು ಸಂಭ್ರಮಿಸಿದ್ದು ನಿಜವಲ್ಲವೇ? 'ಗೂಗಲ್ ಬೇಬಿ'ಯಂತೆ ವರ್ತಿಸಬೇಡಿ!

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

SCROLL FOR NEXT