ಸಂಗ್ರಹ ಚಿತ್ರ 
ದೇಶ

ಜಮ್ಮು-ಕಾಶ್ಮೀರ: ಉಗ್ರರ ಅಡಗುತಾಣಗಳ ಮೇಲೆ ದಾಳಿ, ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳು ವಶಕ್ಕೆ

ಜಮ್ಮು ಮತ್ತು ಕಾಶ್ಮೀರದ ಹಂದ್ವಾರ ಜಿಲ್ಲೆಯಲ್ಲಿದ್ದ ಉಗ್ರರ ಅಡಗುತಾಣಗಳ ಮೇಲೆ ಭಾರತೀಯ ಸೇನಾಪಡೆ ದಾಳಿ ನಡೆಸಿದ್ದು, ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದುಕೊಂಡಿದೆ ಎಂದು ಭಾನುವಾರ ತಿಳಿದುಬಂದಿದೆ...

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಹಂದ್ವಾರ ಜಿಲ್ಲೆಯಲ್ಲಿದ್ದ ಉಗ್ರರ ಅಡಗುತಾಣಗಳ ಮೇಲೆ ಭಾರತೀಯ ಸೇನಾಪಡೆ ದಾಳಿ ನಡೆಸಿದ್ದು, ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದುಕೊಂಡಿದೆ ಎಂದು ಭಾನುವಾರ ತಿಳಿದುಬಂದಿದೆ. 
ಗುಪ್ತಚರ ಇಲಾಖೆ ನೀಡಿದ್ದ ಖಚಿತ ಮಾಹಿತಿ ಆಧಾರದ ಮೇಲೆ ಹಂದ್ವಾರದ ಉಗ್ರರ ಅಡಗುತಾಣಗಳ ಮೇಲೆ ಭದ್ರತಾ ಪಡೆಗಳು ದಾಳಿ ನಡೆಸಿತ್ತು. ಈ ವೇಳೆ ಭಾರೀ ಪ್ರಮಾಣದ ಸ್ಫೋಟಕ ವಸ್ತುಗಳು, ಶಸ್ತ್ರಾಸ್ತ್ರಗಳು ಹಾಗೂ ವಿಮಾನ ಹೊಡೆದುರುಳಿಸುವ ಗನ್'ಗಳನ್ನು ವಶಕ್ಕೆ ಪಡೆದುಕೊಂಡಿದೆ ಎಂದು ವರದಿಗಳು ತಿಳಿಸಿವೆ. 
ಕದನ ವಿರಾಮ ಉಲ್ಲಂಘಿಸಿದ ಪಾಕ್: ಇಬ್ಬರು ಯೋಧರಿಗೆ ಗಾಯ
ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಭಿಂಬೆರ್ ಗಾಲಿ ಸೆಕ್ಟರ್ ಬಳಿಯಿರುವ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಪಾಕಿಸ್ತಾನ ಸೇನೆ ನಡೆಸಿದ್ದ ಅಪ್ರಚೋದಿತ ಗುಂಡಿನ ದಾಳಿಗೆ ಇಬ್ಬರು ಯೋಧರು ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ. 

ಗಡಿ ನಿಯಂತ್ರಣ ರೇಖೆ ಬಳಿ ಭಾರತೀಯ ಸೇನೆಯನ್ನು ಗುರಿಯಾಗಿರಿಸಿಕೊಂಡು ಪಾಕಿಸ್ತಾನ ಸೇನೆ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ಗುಂಡಿನ ದಾಳಿ ವೇಳೆ ಗಸ್ತು ತಿರುಗುತ್ತಿದ್ದ ಇಬ್ಬರು ಯೋಧರಿಗೆ ಗಾಯಗಳಾಗಿವೆ. ಗಾಯಗೊಂಡ ಯೋಧರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಸೇನಾಧಿಕಾರಿಗಳು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT